ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವಸೇನೆ ಇವರ ಸಂಯುಕ್ತಾಶ್ರಯದಲ್ಲಿ ಭಾರತದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 7ನೇ ಕನ್ನಡ ಅಕ್ಷರ ಜಾತ್ರೆ ಹಾಗೂ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಗಸ್ಟ್ 18ರಂದು ಮಂಡ್ಯ ನಗರದ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. 7ನೇ ಕನ್ನಡ ಅಕ್ಷರ ಜಾತ್ರೆ ಸಮೇಳನಾಧ್ಯಕ್ಷರಾಗಿ ಸಾಹಿತಿ ಈ.ಗಂಗೇಗೌಡ ಆಯ್ಕೆಯಾಗಿದ್ದು, ಅಕ್ಷರ ಜಾತ್ರೆಯನ್ನು ಖ್ಯಾತ ವೈದ್ಯ ಡಾ.ಕೆ.ಚಂದ್ರಶೇಖರ್ ಉದ್ಘಾಟಿಸಲಿದ್ದಾರೆ.
ರಾಜ್ಯ ಆರ್ಟಿಓ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜನ್ ಅಧ್ಯಕ್ಷತೆ ವಹಿಸಲಿದ್ದು, ಸೇವಾರತ್ನ ಪ್ರಶಸ್ತಿಯನ್ನು ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬನ್ನಂಗಾಡಿ ಸಿದ್ದಲಿಂಗಯ್ಯ ಪ್ರದಾನ ಮಾಡಲಿದ್ದಾರೆ. ಎಎಸ್ಪಿ ಗಂಗಾಧರಸ್ವಾಮಿ ಕನ್ನಡರತ್ನ ಪ್ರಶಸ್ತಿ ವಿತರಿಸಲಿದ್ದಾರೆ.
ಕಸಾಪ ಮಾಜಿ ಜಿಲ್ಲಾಧ್ಯಕ್ಷ ಡಾ.ಎಚ್.ಎಸ್.ಮುದ್ದೇಗೌಡ, ಸಮ್ಮೇಳನಾಧ್ಯಕ್ಷರಿಗೆ ಗೌರವ ಸಲ್ಲಿಸಲಿದ್ದು, ಉದ್ಯಮಿ ಡಾ.ಶ್ರೀಕಾಂತ್, ಇಂಡಿಯನ್ ಫಿಲ್ಮ್ ಮೇಕರ್ ಅಸೋಸಿಯೇಷನ್ ಅಧ್ಯಕ್ಷ ದಿಲೀಪ್ಕುಮಾರ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.
ಇದನ್ನು ಓದಿದ್ದೀರಾ? ಆ. 19ಕ್ಕೆ ಮಾಲೂರು ಕ್ಷೇತ್ರದ ಮತ ಎಣಿಕೆ ದೃಶ್ಯಾವಳಿ ಸಲ್ಲಿಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹತ್ತಾರು ಗಣ್ಯರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ವೇದಿಕೆಯ ಅಧ್ಯಕ್ಷ ಎಸ್.ಕೃಷ್ಣಸ್ವರ್ಣಸಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
