ಶಿವಮೊಗ್ಗ | ಭವ್ಯ ಭಾರತದ ಪ್ರಜೆಗಳಾಗಿರುವುದು ನಮ್ಮ ಹೆಮ್ಮೆ: ಜಕ್ಕಣ್ಣಗೌಡರ್‌

Date:

Advertisements

ಭವ್ಯ ಭಾರತದ ಪ್ರಜೆಗಳಾಗಿರುವುದು ನಮ್ಮ ಹೆಮ್ಮೆ ಎಂದು ತೀರ್ಥಹಳ್ಳಿ ತಾಲೂಕು ದಂಡಾಧಿಕಾರಿ ಜಕ್ಕಣ್ಣಗೌಡರ್ ತಿಳಿಸಿದರು.

ತೀರ್ಥಹಳ್ಳಿ ಪಟ್ಟಣದ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

“ಜಾತಿ, ಧರ್ಮ, ಭಾಷೆ, ಪ್ರದೇಶಗಳನ್ನು ಹೊರತುಪಡಿಸಿ ಕುಟುಂಬ ಮತ್ತು ವೃತ್ತಿಗಳೊಂದಿಗೆ ನಮ್ಮನ್ನು ಗುರುತಿಸಿಕೊಂಡಿದ್ದೇವೆ. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಮ್ಮ ಪೂರ್ವಜರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕು. ಮಹಾತ್ಮಾ ಗಾಂಧಿ, ಸುಭಾಷ್ ಚಂದ್ರ ಬೋಸ್, ಲಾಲ್ ಬಹದ್ದೂರ್ ಶಾಸ್ತ್ರಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಹೀಗೆ ಅನೇಕ ಮಹಾನ್ ಸ್ವಾತಂತ್ರ್ಯ ಹೋರಾಟಗಾರರು ಭಾರತಮಾತೆಗಾಗಿ ತಮ್ಮ ಆತ್ಮವಿಶ್ವಾಸದಿಂದ ಸಲ್ಲಿಸಿದ ಸೇವೆ ನಮಗೆ ಸ್ಪೂರ್ತಿದಾಯಕವಾಗಿದೆ” ಎಂದು ಸ್ಮರಿಸಿದರು.

Advertisements

“ಭಾರತದಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ ಎಲ್ಲ ರೀತಿಯ ಮೂಲಭೂತ ಹಕ್ಕು ಇದೆ. ಎಲ್ಲ ರೀತಿ ಸ್ವಾತಂತ್ರ್ಯ ಇದೆ. ಆದರೆ ಮತ್ತೊಬ್ಬರ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವ ಕೆಲಸವನ್ನು ಮಾಡಬಾರದು. ಇತ್ತೀಚಿಗೆ ಕೇರಳ, ಉತ್ತರಾಖಂಡ್ ಸೇರಿದಂತೆ ಅನೇಕ ರಾಜ್ಯಗಳಲ್ಲಿ ವರುಣನ ಅವಕೃಪೆಯಿಂದ ಅಸ್ತವ್ಯಸ್ತವಾದ ಜನಜೀವನ, ಆಸ್ತಿ ಹಾನಿ ಇವೆಲ್ಲವೂ ನಮ್ಮನ್ನು ಒಮ್ಮೆ ಮೌನವಾಗಿಸುತ್ತವೆ. ಅಲ್ಲಿನ ಜನತೆಗೆ ದೇವರು ಒಳಿತು ಮಾಡಲಿ” ಎಂದರು.

ಪ್ರಾಕೃತಿಕ ಭಾಗವಾದ ಕೆರೆ, ಗುಡ್ಡ ಇತ್ಯಾದಿಗಳನ್ನು ಕಾಪಾಡಿಕೊಂಡು ಮಾನವನ ಬದುಕನ್ನು ಹಾಸನಾಗಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಅದನ್ನು ಅರಿತು ಮುಂದಿನ ಪೀಳಿಗೆಗೆ ಕಟ್ಟಿಕೊಂಡು ಹೋಗೋಣ. ಸರ್ವ ಕ್ಷೇತ್ರದಲ್ಲಿ ವೇಗದ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿರುವ ನಮ್ಮ ದೇಶದ ಮುಂದಿನ ಪೀಳಿಗೆಯಾದ ಯುವಜನಾಂಗ ಮೊಬೈಲ್‌ನಂತಹ ಆಧುನಿಕ ತಂತ್ರಜ್ಞಾನವನ್ನು ಸದ್ಭಳಕೆ ಮಾಡುವಂತೆ ಪ್ರೆರೇಪಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ” ಎಂದರು.

“ನಮ್ಮ ರಾಷ್ಟ್ರದ ಕನಸುಗಳನ್ನು ನನಸಾಗಿಸಲು ಸೌಹಾರ್ದತೆ ಮತ್ತು ಸೋದರತ್ವ ಮನೋಭಾವದಿಂದ ಮುನ್ನೆಡೆಯೋಣ. ಪ್ರಸಕ್ತ ಸಾಲಿನಲ್ಲಿ ನಮ್ಮ ತೀರ್ಥಹಳ್ಳಿ ತಾಲೂಕನ್ನು ಉತ್ತಮ ವಿಚಾರಧಾರೆಗಳೊಂದಿಗೆ ಮುನ್ನಡೆಸೋಣ. ವಿಶೇಷವಾಗಿ ಗಡಿ ಕಾಯುತ್ತಿರುವ ನಮ್ಮ ಯೋಧರಿಗೆ ಆಂತರಿಕ ಭದ್ರತೆ ಒದಗಿಸುವ ಪೊಲೀಸರಿಗೆ, ಜೀವದ ಜೀವನಾಡಿ ರೈತರಿಗೆ, ವಿಜ್ಞಾನಿಗಳಿಗೆ, ದೇಶದ ಮೂಲೆ ಮೂಲೆಯ ಸುದ್ದಿಯನ್ನು ಬಿತ್ತರಿಸುವ ಮಾಧ್ಯಮದವರಿಗೆ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗದಲ್ಲಿ ಸಾರ್ವಜನಿಕ ಸೇವೆಯನ್ನು ಸಲ್ಲಿಸುತ್ತಿರುವ ಎಲ್ಲರಿಗೆ ಹಾಗೂ ಪ್ರತಿಯೊಬ್ಬ ನಾಗರಿಕರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆಗೆ ತುತ್ತಾಗಿದ್ದ ಮಡಗಾಸ್ಕರ್‌ ದ್ವೀಪದ ವ್ಯಕ್ತಿ; ಶಸ್ತ್ರ ಚಿಕಿತ್ಸೆ ಯಶಸ್ವಿ

ಈ ಸಂದರ್ಭದಲ್ಲಿ ಶಾಸಕ ಆರಗ ಜ್ಞಾನೇಂದ್ರ, ಡಿವೈಎಸ್‌ಪಿ ಗಜಾನನ ವಾಮನ ಸುತಾರ, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶೈಲ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X