ಸೇತುವೆಗಳ ಫಿಟ್‌ನೆಸ್‌ ಬಗ್ಗೆ ಲೋಕೋಪಯೋಗಿ ಇಲಾಖೆ ವರದಿ ಕೊಡಲು ಮುಖ್ಯಮಂತ್ರಿ ಸೂಚನೆ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ಅಧ್ಯಕ್ಷತೆಯಲ್ಲಿ ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ನಡೆಸಿದ ಸಭೆ ನಡೆಸಿದರು.

ಮುಂದಿನ ನಾಲ್ಕು ವಾರಗಳಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ, ಮಲೆನಾಡಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸೇತುವೆಗಳ ಫಿಟ್‌ನೆಸ್‌ಗಳ ಬಗ್ಗೆ ವರದಿಯನ್ನು ಲೋಕೋಪಯೋಗಿ ಇಲಾಖೆಯಿಂದ ಪಡೆಯಬೇಕು. ಸಂಪರ್ಕ ರಸ್ತೆಗಳು ಕುಸಿದಿದ್ದರೆ ಅವುಗಳನ್ನು ಸರಿಪಡಿಸಿ, ವಾಹನ ಸಂಚಾರಕ್ಕೆ ಸುಗಮಗೊಳಿಸಬೇಕು. ಎಲ್ಲ ಸೇತುವೆ, ರಸ್ತೆಗಳನ್ನು ನಿರಂತರವಾಗಿ ಪರಿಶೀಲನೆ ನಡೆಸಿ ಯಾವುದೇ ಅನಾಹುತವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

Advertisements

ಮಳೆಯಿಂದ 81,589 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿವಿಧ ಏತ ನೀರಾವರಿ ಯೋಜನೆಗಳಡಿ ಎಲ್ಲೆಲ್ಲಿ ಅವಕಾಶವಿದೆಯೋ ಅಲ್ಲೆಲ್ಲ ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಒಟ್ಟು 67 ಸಾವು ಸಂಭವಿಸಿದ್ದು, 66 ಪ್ರಕರಣಗಳಲ್ಲಿ 329 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ ಎಂದು ಸಭೆಯ ಗನಮಕ್ಕ ತರಲಾಯಿತು.

ಮುಳುಗು ಸೇತುವೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಬೇಕು. ಯಾವುದೇ ಕಾರಣಕ್ಕೂ ವಾಹನ ಸಂಚರಿಸದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಚರ್ಚಿಸಲಾಯಿತು.

1,283 ಮನೆಗಳು ಶೇ. 75 ಕ್ಕಿಂತ ಹೆಚ್ಚು ಹಾನಿಗೊಳಗಾಗಿದೆ. ಅದರಲ್ಲಿ 879 ಪ್ರಕರಣಗಳಲ್ಲಿ ತಲಾ 1.2೦ ಲಕ್ಷ ರೂ. ನಂತೆ 10.54 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಇದರೊಂದಿಗೆ ದೇವರಾಜ ಅರಸು ವಸತಿ ಯೋಜನೆಯಡಿ ಮನೆ ಮಂಜೂರು ಮಾಡಲಾಗುವುದು. ಈಗಾಗಲೇ 500 ಮನೆ ಮಂಜೂರು ಮಾಡಲಾಗಿದೆ ಎಂದು ತಿಳಿಸಲಾಯಿತು.

ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು ಎಂದು ಸೂಚಿಸಲಾಯಿತು. ಕೋಡಿಗೆ ಗೇಟ್‌ ಅಳವಡಿಸುವ ಮೂಲಕ, ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ ತಡೆಗಟ್ಟಲು ಸೂಚಿಸಲಾಯಿತು.

ಪ್ರವಾಹ ಸಂದರ್ಭದಲ್ಲಿ ಉದ್ಭವವಾಗಬಹುದಾದ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಡೆಂಘೀ ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಚಿಕುನ್‌ಗುನ್ಯಾ, ಮಲೇರಿಯಾ ರೋಗ ಹರಡದಂತೆ ಕೂಡ ಎಚ್ಚರಿಕೆ ವಹಿಸುವಂತೆ ಸೂಚಿಸಲಾಯಿತು. ಒಟ್ಟಾರೆಯಾಗಿ ಎಲ್ಲ ಇಲಾಖೆಗಳೂ ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X