ಸೊರಬ | ಸಚಿವ ಮಧು ಬಂಗಾರಪ್ಪರಿಂದ ಕುಬಟೂರು ಸರ್ಕಾರಿ ಶಾಲೆಗೆ ₹10 ಲಕ್ಷ ಮೌಲ್ಯದ ಪರಿಕರ ದೇಣಿಗೆ

Date:

Advertisements

‘ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಸಾಧಕರು, ಉಳ್ಳವರು ಮನಸ್ಸು ಮಾಡಿದರೆ, ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು. ಈ ಬದಲಾವಣೆಗೆ ಕುಬಟೂರು ಗ್ರಾಮದ ಸರ್ಕಾರಿ ಶಾಲೆಯಿಂದ ಮುನ್ನುಡಿ ಬರೆಯಲಾಗಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎಸ್.ಮಧುಬಂಗಾರಪ್ಪ ಹೇಳಿದರು.

ಸರ್ಕಾರದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸ್ವಗ್ರಾಮ ಕುಬಟೂರು ಕೆರೆಗೆ ಬಾಗಿನ ಅರ್ಪಿಸಿ, ಬಳಿಕ ಕುಬಟೂರು ಸರ್ಕಾರಿ ಶಾಲಾಭಿವೃದ್ಧಿಗೆ ₹10 ಲಕ್ಷ ವೈಯಕ್ತಿಕವಾಗಿ ದೇಣಿಗೆ ನೀಡುವ ಕಾರ್ಯಕ್ರಮಕ್ಕೆ, ಪತ್ನಿ ಅನಿತಾ ಮಧುಬಂಗಾರಪ್ಪ ಅವರ ಜತೆಗೂಡಿ ಚಾಲನೆ ನೀಡಿ ಮಾತನಾಡಿದರು‌.

ಮಧು2

“ಶಾಲೆಗೆ ನೀಡಿದ ದೇಣಿಗೆ ಮೊತ್ತ ₹10 ಲಕ್ಷ ಇರಬಹುದು. ಆದರೆ, ಇದು ಮುಂದಿನ ದಿನದಲ್ಲಿ ಕೋಟಿಗೆ ವಿಸ್ತರಣೆ ಆಗಲಿದೆ. ಇದರಿಂದ, ಸರ್ಕಾರಿ ಶಾಲೆಗಳ ಏಳಿಗೆ ಸಾಧ್ಯವಾಗಲಿದೆ” ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಶಯ ಸಾಕಾರಗೊಂಡಿದೆ ಎಂದರು.

Advertisements

ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ನನ್ನ ತಂದೆಯವರಾದ ಎಸ್.ಬಂಗಾರಪ್ಪ ಅವರ ಭವಿಷ್ಯ ರೂಪಿಸಿದ್ದು, ಇದೇ ಕುಬಟೂರು ಸರ್ಕಾರಿ ಶಾಲೆ. ಆದರೆ, ಸರ್ಕಾರಿ ಶಾಲೆಯಲ್ಲಿ ಓದುವ ಸೌಭಾಗ್ಯ ನನಗೆ ಸಿಗದಿರುವ ಕುರಿತ ಬೇಸರವಿದೆ. ಇಲ್ಲಿ ಅಕ್ಷರ ಕಲಿತ ಬಂಗಾರಪ್ಪ ಅವರು ರಾಜ್ಯದ ಭವಿಷ್ಯ ರೂಪಿಸಲು ಸಾಕ್ಷಿಯಾದರು. ಜನಸಾಮಾನ್ಯರ ನಾಡಿ ಮಿಡಿತಕ್ಕೆ ಹತ್ತಿರವಾದರು. ಅವರ ಸ್ಮರಣಾರ್ಥ ಈ ಕಾರ್ಯಕ್ರಮ ಹೊಸ ರೂಪ ಪಡೆದುಕೊಂಡಿದೆ ಎಂದರು.

ಮಧು1

ಅಕ್ಷರ ಕಲಿಸಿದ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಸರ್ಕಾರದ ಜತೆಗೆ ಎಲ್ಲರೂ ಕೈಜೋಡಿಸಬೇಕು. ಇದರಿಂದ, ಸರ್ಕಾರಿ ಶಾಲೆಗಳ ಅಸ್ಥಿತ್ವ ಸುಧಾರಣೆ ಕಾಣಲು ಸಾಧ್ಯ. ಮುಂದಿನ ಒಂದು ವರ್ಷದಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ಒಂದು ಸಾವಿರ ಕೋಟಿ ದೇಣಿಗೆ ಹರಿದು ಬರುವ ನಿರೀಕ್ಷೆ ಇದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಕ್ಕಳಿಗೆ ಕನ್ನಡ ಕಲಿಸಬೇಕು. ಅದೇ, ರೀತಿ ಶಿಕ್ಷಕರು ಸಹ ಕನ್ನಡ ಭಾಷೆಯಲ್ಲಿ ಪಕ್ವವಾಗಬೇಕು. ಗ್ರಾಮಾಂತರ ಭಾಗ ಸೇರಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಜೆ ತರಗತಿ ನಡೆಸಲು ಶಿಕ್ಷಕರು ಮುಂದಾಗಬೇಕು. ಇದರಿಂದ, ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದು ಸಚಿವ ಮಧುಬಂಗಾರಪ್ಪ ಹೇಳಿದರು.

ಮಧು4

ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಯಾವುದೇ ಹಕ್ಕು ಪೋಷಕರಿಗಿಲ್ಲ. ಆದ್ದರಿಂದ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮಧುಬಂಗಾರಪ್ಪ ಹೇಳಿದರು.

ಕುಬಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸುನಿತಾ ಮಾತನಾಡಿ, ಕುಬಟೂರು ಸರ್ಕಾರಿ ಶಾಲೆಗೆ 150 ವರ್ಷದ ಇತಿಹಾಸವಿದೆ. ಸ್ವಾತಂತ್ರ್ಯ ಬಳಿಕ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಗ್ರಾಮವನ್ನು ಅಗ್ರಸ್ಥಾನಕ್ಕೆ ಏರಿಸಿದರು. ತಂದೆ ಹಾಕಿ ಕೊಟ್ಟ ಮಾರ್ಗದಲ್ಲಿ ಮಧು ಬಂಗಾರಪ್ಪ ಅವರು ಸಾಗುತ್ತಿದ್ದಾರೆ. ಶಾಲೆಗೆ ಎರಡು ಟಿವಿ, ಕಂಪ್ಯೂಟರ್, ಮಕ್ಕಳಿಗೆ ಕೂರಲು ಕುರ್ಚಿ ಹಾಗೂ ಟೇಬಲ್, ಫ್ಯಾನ್ ಸೇರಿ ₹10 ಲಕ್ಷ ಮೌಲ್ಯದ ಪರಿಕರಗಳನ್ನು ದೇಣಿಗೆ ನೀಡಿದ್ದಾರೆ. ಈ ರೀತಿಯ ಮನೋಭಾವ ಎಲ್ಲರೂ ರೂಢಿಸಿಕೊಳ್ಳಬೇಕು ಎಂದರು.

ಇದನ್ನು ಓದಿದ್ದೀರಾ? ಸುರಪುರ | ಐತಿಹಾಸಿಕ ಸ್ಮಾರಕಗಳಲ್ಲಿ ಸ್ವಚ್ಛತೆ ಕಾಪಾಡಲು ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ

ಶಾಲೆಯ ವಿದ್ಯಾರ್ಥಿಗಳು ಮಾತನಾಡಿ, ಮಧು ಅಂಕಲ್ ಶಾಲೆಗೆ ಟಿವಿ ಕೊಟ್ಟಿದ್ದಾರೆ. ಖುಷಿಯಾಗುತ್ತಿದೆ. ಟಿವಿಯ ಮೂಲಕ ಪಾಠಗಳನ್ನು ಕೇಳಿಸಿಕೊಳ್ಳುವ ಜತೆಗೆ ನೋಡಬಹುದು. ಮಧು ಅಂಕಲ್‌ಗೆ ಧನ್ಯವಾದ ಎಂದು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.

ಮಧು3

ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಎಸ್ ಡಿಎಂಸಿ ಅಧ್ಯಕ್ಷ ಮಲ್ಲೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ, ಬಎಂ.ಡಿ.ಶೇಖರ್, ದಯಾನಂದ ಕಲ್ಲೆ, ನಾಗರಾಜ ಗೌಡ, ಗಣಪತಿ, ನಾಗರಾಜ, ಅರುಣ್ ಕುಮಾರ್, ರಾಜಶೇಖರ, ಮಂಜುನಾಥ, ಹುಚ್ಚಪ್ಪ, ಪ್ರಕಾಶ್ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X