ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ | ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಆರ್‌.ಅಶೋಕ್

Date:

Advertisements

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

‌ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ” ಎಂದರು.

“86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂಬ ಅನುಮಾನ ಎಲ್ಲರಿಗೂ ಸ್ಪಷ್ಟವಾಯಿತು” ಎಂದು ಹೇಳಿದರು.

Advertisements

“ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿನೋಟಿಫಿಕೇಶನ್‌, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಇಷ್ಟೆಲ್ಲ ಆಗಿರುವಾಗ ಇದು ದೊಡ್ಡ ಹಗರಣ ಎಂಬುದು ಸಾಬೀತಾಗಿದೆ” ಎಂದರು.

“ಕಾಂಗ್ರೆಸ್‌ ಈಗ ದ್ವೇಷದ ರಾಜಕಾರಣ ಮಾಡಿದರೆ ಅರ್ಥವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್‌ ಪಡೆಯಬೇಕೆಂಬುದು ನಮ್ಮ ಬೇಡಿಕೆ. ನಿವೇಶನ ವಂಚಿತರಾದ ಜನರಿಗೆ ನ್ಯಾಯ ಸಿಗಬೇಕು” ಎಂದು ಆಗ್ರಹಿಸಿದರು.

“ಬಿ ಎಸ್‌ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್‌ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ. ರಾಜ್ಯಪಾಲರು ಸರ್ಕಾರದ ಭಾಗ. ಅವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟಿಸಿದರೆ ಅವರು ಸಂವಿಧಾನಕ್ಕೆ ತೋರುವ ಅಗೌರವ” ಎಂದರು.

“ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಶಾಸಕರೇ ತಿರುಗಿಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X