ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ಸಿದ್ದ, ಎರಡು ವೇತನ ಆಯೋಗದ ಶಿಫಾರಸ್ಸು ನಾನೇ ಜಾರಿ ಮಾಡಿದ್ದೇನೆ: ಸಿದ್ದರಾಮಯ್ಯ

Date:

Advertisements

ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ. ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ “ನಮ್ಮ‌ಅಭಿನಂದನೆ” ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

“ಸರ್ಕಾರ ಅಂದ್ರೆ ಎಲ್ಲ ಸರ್ಕಾರಿ ನೌಕರರೂ ಸೇರಿರ್ತಾರೆ. ನೀವೆಲ್ಲಾ ಒಟ್ಟು ಸೇರಿದರೆನೇ ಸರ್ಕಾರ. ಅಂಬೇಡ್ಕರ್ , ಗಾಂಧಿ, ಬಸವಾದಿ ಶರಣರು ಸಮ‌ ಸಮಾಜದ ಕನಸು ಕಂಡಿದ್ದರು‌. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮೆಲ್ಲರ ಮೇಲೂ ಇದೆ. ಇದಕ್ಕಾಗಿ ಶ್ರಮಿಸೋಣ” ಎಂದು ಕರೆ ನೀಡಿದರು.

Advertisements

“ಸಮ ಸಮಾಜದ ಆಶಯದಿಂದ ಸರ್ಕಾರ ಜಾರಿ ಮಾಡುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಿಮ್ಮಗಳ ಮೇಲಿದೆ. ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಿದಾಗ ಮಾತ್ರ ನಮ್ಮ ನಿಮ್ಮ ಶ್ರಮ ಸಾರ್ಥಕವಾಗುತ್ತದೆ. ಹೀಗೆ ನಾವು ನೀವು ಸೇರಿ ಸ್ವಾಸ್ಥ್ಯ ಸಮಾಜ ರೂಪಿಸಬೇಕಿದೆ” ಎಂದರು.

“ನಿಮ್ಮೆಲ್ಲರ ಬೇಡಿಕೆಯಂತೆ ಒಪಿಎಸ್‌ ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ನಿಮ್ಮೆಲ್ಲರ ಸರ್ಕಾರ. ನಾನು ನಿಮ್ಮ ಜೊತೆ ಇರ್ತೇನೆ. ನಾವು-ನೀವು ಒಟ್ಟಾಗಿ ಜನರ ಜೊತೆ ಇದ್ದು, ಜನರ ಋಣ ತೀರಿಸೋಣ” ಎಂದು ಹೇಳಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಶಾಸಕರಾದ ಪ್ರಕಾಶ್ ರಾಥೋಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ರಾಜ್ಯ ಸರ್ಕಾರಿ ನೌಕರರ ಸಂಘದ ನಾನಾ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರು ಅಧ್ಯಕ್ಷತೆ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X