ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಹಗರಣ ನಡೆದಿದೆ ಎನ್ನುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಕ್ರಮವನ್ನು ಖಂಡಿಸಿ ಜೇವರ್ಗಿ ಪಟ್ಟಣದ ಅಖಂಡೇಶ್ವರ ವೃತ್ತದಲ್ಲಿ ಸಿಎಂ ಸಿದ್ದರಾಮಯ್ಯನವರ ಅಭಿಮಾನಿಗಳು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮುಖಂಡ ರಾಜಶೇಖರ್ ಮುತ್ತಕೊಡ್ ಮಾತನಾಡಿ, ʼಸಿದ್ದರಾಮಯ್ಯನವರು ತಮ್ಮ 40 ವರ್ಷದ ರಾಜಕೀಯ ಬದುಕಿನಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇಲ್ಲ. ಆದರೆ ಬಿಜೆಪಿ, ಜೆಡಿಎಸ್ ಪಕ್ಷದ ಕುತಂತ್ರದಿಂದ ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿ ಮುಖ್ಯಮಂತ್ರಿಗಳಿಗೆ ನೋಟಿಸ್ ನೀಡಿದ್ದಾರೆ. ಇದು ಸಿದ್ದರಾಮಯ್ಯನ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ತೀವ್ರವಾಗಿ ಖಂಡಿಸುತ್ತೇವೆʼ ಎಂದರು.
ಮುಖಂಡ ಚಂದ್ರಶೇಖರ್ ನೇರಡಗಿ ಮಾತನಾಡಿ, ʼಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ನೀಡಿದ ನೋಟಿಸ್ ಕೂಡಲೇ ಹಿಂಪಡೆಯಬೇಕುʼ ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಸಿಎಂ ವಿರುದ್ಧ ತನಿಖೆಗೆ ಅನುಮತಿ | ರಾಜ್ಯಪಾಲರ ನಡೆ ಖಂಡಿಸಿ ರಾಜ್ಯಾದ್ಯಂತ ನಾಳೆ (ಆ.19) ಕೆಪಿಸಿಸಿ ಪ್ರತಿಭಟನೆ
ಪ್ರತಿಭಟನೆಯಲ್ಲಿ ಪ್ರಮುಖರಾದ ರವಿ ಕುಳಗೇರಾ, ಭೀಮಶಂಕರ್ ಬಿಲ್ಲಾಡ್, ಯಲ್ಲಾಲಿಂಗ ದೊರೆ, ಭೀಮು ಖಾದ್ಯಪುರ್, ತೋಟಪ್ಪ ಜನಿವಾರ ಸೇರಿದಂತೆ ಕುರುಬ ಸಮುದಾಯ ಮುಖಂಡರು ಹಾಗೂ ಸಿದ್ದರಾಮಯ್ಯನವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರಿದ್ದರು.
ವರದಿ : ಮೀಡಿಯಾ ವಾಲಿಯಂಟರ್ : ಶರಣು