ಖಾಸಗಿ ಶಾಲಾ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಅಪ್ರಾಪ್ತ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ವಿನಾಯಕ ನಗರದ ಎರಡನೇ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಸಾವನಪ್ಪಿದ ಅಪ್ರಾಪ್ತ ಬಾಲಕ ತೇಜಸ್ (14) ಎಂದು ಗುರುತಿಸಲಾಗಿದೆ. ಬೈಕ್ ಸವಾರ ತೇಜಸ್ ಹಿಂಬದಿಯಿಂದ ಬಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಹೀಗಾಗಿ ವಾಹನದ ಹಿಂದಿನ ಚಕ್ರಕ್ಕೆ ಸಿಲುಕಿ ಬಾಲಕ ಸ್ಥಳದಲ್ಲೇ ಸಾವನಪ್ಪಿದ್ದಾನೆ.

ʼಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ಪೋಷಕರು ವಾಹನಗಳು ನೀಡುತ್ತಿರುವುದು ಕಾನೂನು ಬಾಹಿರ. ಹಾಗಾಗಿ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟ ವಾಹನ ಮಾಲೀಕರ ಮೇಲೆಯೂ ಕ್ರಮ ಜರುಗಿಸಲಾಗುವುದುʼ ಎಂದು ಸಿಪಿಐ ಗೋಪಿನಾಥ್ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಸಿಎಂ ವಿರುದ್ಧ ಅನುಮತಿಸಲಾದ ‘ಪ್ರಾಸಿಕ್ಯೂಷನ್’ ಅಂದ್ರೆ ಏನು? ಮುಂದೇನಾಗಲಿದೆ?
ಸ್ಥಳಕ್ಕೆ ಗುಬ್ಬಿ ಪೊಲೀಸರು ಆಗಮಿಸಿ ಮೃತದೇಹವನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.