ತುಮಕೂರು|ಕಲ್ಕತ್ತಾದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಎಐಡಿಎಸ್ಓ ಪ್ರತಿಭಟನೆ

Date:

Advertisements

ಕಲ್ಕತ್ತಾದ ಆರ್ ಜೆ ಕರ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿರುವ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ತುಮಕೂರು ನಗರದ ಟೌನ್ ಹಾಲ್ ನಿಂದ ಎಂ.ಜಿ ರಸ್ತೆ ಮಾರ್ಗವಾಗಿ ಎಐಡಿಎಸ್ಓ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ನೇತೃತ್ವದಲ್ಲಿ ಕ್ಯಾಂಡಲ್ ಮೆರವಣಿಗೆ ಮಾಡಲಾಯಿತು.

ಮೆರವಣಿಗೆ ಉದ್ದೇಶಿಸಿ ಎಐ ಡಿಎಸ್ಓ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಮಾತನಾಡಿ, ನಮ್ಮ ಸಮಾಜವು ಇಂದು ಅತ್ಯಂತ ತೀವ್ರ ಸಾಂಸ್ಕೃತಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಯಾವುದೇ ವಯಸ್ಸಿನ ಮಿತಿ ಇಲ್ಲದೆ ಮಹಿಳೆಯರ ಮೇಲೆ ಅಪರಾಧಗಳು ಅವ್ಯಾಹತವಾಗಿ ನಡೆಯುತ್ತಿದೆ. ಕಳೆದ ತಿಂಗಳು ಆಂಧ್ರಪ್ರದೇಶದಲ್ಲಿ, 12-13 ವರ್ಷದ 3 ಜನ ಶಾಲಾ ಮಕ್ಕಳು 3ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಅವಳನ್ನು ಕೊಂದರು. ಮುಂಬೈನಲ್ಲಿ ಕೂಡ ಇದೇ ವಯಸ್ಸಿನ ಬಾಲಕಿಯ ಮೇಲೆ ಬಾಲಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಕಲ್ಕತ್ತಾದ ವೈದ್ಯಕೀಯ ಕಾಲೇಜೊಂದರಲ್ಲಿ ಕಾಮುಕನಿಗೆ ಬಲಿಯಾಗಿ ಘೋರ ಸಾವಿಗೀಡಾದ ವೈದ್ಯೆ ಈ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ. ನಾಗರೀಕ ಸಮಾಜವು ತಲೆತಗ್ಗಿಸುವಂತೆ ಮಾಡಿರುವ ಈ ಅತ್ಯಾಚಾರದ ಮಾರಿಯು ತೀವ್ರವಾಗಿ ಎಲ್ಲೆಡೆ ಹಬ್ಬುತ್ತಿದೆ. ಈ ಮಾರಿಯ ಮೂಲ ಅಡಗಿರುವುದು ಇಂದಿನ ಸಾಂಸ್ಕೃತಿಕ ಅಧಃಪತನದಲ್ಲಿ ಎಂದರು.

ಕಲ್ಕತ್ತಾದ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಈಗಾಗಲೇ ಜನರು ಬೀದಿಗಿಳಿದಿದ್ದಾರೆ. ಈ ಘಟನೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ದಿಕ್ಕು ತಪ್ಪಿಸುವ ಹೀನ ಪ್ರಯತ್ನವನ್ನು ಆಡಳಿತಾರೂಢ ಟಿಎಂಸಿ ಸೇರಿದಂತೆ ಪಟ್ಟಭದ್ರರು ನಡೆಸುತ್ತಿದ್ದಾರೆ. ಆದರೆ ಸರಿಯಾದ ದಾರಿಯಲ್ಲಿ ಮುನ್ನಡೆದು ಸಂಘಟಿತ ಹೋರಾಟವನ್ನು ಬೆಳೆಸುವುದರಿಂದ ಮಾತ್ರ ಪರಿಹಾರ ಸಾಧ್ಯ. ಇಂದು ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿರುವ ಅಶ್ಲೀಲ ಸಿನಿಮಾ, ಸಾಹಿತ್ಯ ಮತ್ತು ಪೋರ್ನ್ ವೆಬ್ ಸೈಟ್ ಗಳು ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ ಸಾಂಸ್ಕೃತಿಕ ಅಧಃಪತನಕ್ಕೆ ಕಾರಣವಾಗಿವೆ.

Advertisements

ಸಾಂಸ್ಕೃತಿಕ ಅಧಃಪತನದ ಮಹಾಮಾರಿಯ ವಿರುದ್ಧ ಸಮರ ಸಾರಿ ನೇತಾಜಿ-ಭಗತ್ ಸಿಂಗರಂತಹ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳು ಹಾಗೂ ನವೋದಯದ ಹರಿಕಾರರ ಉನ್ನತ ಚಿಂತನೆಗಳನ್ನು ಎಲ್ಲೆಡೆ ಸಾರುವ ಐತಿಹಾಸಿಕ ಜವಾಬ್ದಾರಿಯು ವಿದ್ಯಾರ್ಥಿ ಸಮೂಹದ ಮೇಲಿದೆ. ಈ ನಿಟ್ಟಿನಲ್ಲಿ ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿಯು ಆಗಸ್ಟ್ 19ರಂದು ರಾಜ್ಯವ್ಯಾಪಿ ಪ್ರತಿಭಟನಾ ದಿನಕ್ಕೆ ಕರೆ ನೀಡಿದೆ. ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯದಲ್ಲಿ ಒಂದು ಹೊಸ ಸಾಂಸ್ಕೃತಿಕ ಚಳುವಳಿಗೆ ನಾಂದಿ ಹಾಡಬೇಕೆಂದು ರಾಜ್ಯದ ವೈದ್ಯಕೀಯ, ಇಂಜನಿಯರಿಂಗ್, ಪದವಿ ಸೇರಿದಂತೆ ಎಲ್ಲ ವಿದ್ಯಾರ್ಥಿಗಳು ಹಾಗೂ ಪ್ರಜ್ಞಾವಂತ ಜನತೆಗೆ ಕರೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X