ಶಿವಮೊಗ್ಗ | ಕುದುರೆಗೆ ವಾಹನ ಡಿಕ್ಕಿ; ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳ ನಿರ್ಲಕ್ಷ್ಯ

Date:

Advertisements

ಶಿವಮೊಗ್ಗ ನಗರದ ಅಲ್ಕೋಳ ಸರ್ಕಲ್ ಹಾಗೂ ಸಾಗರ ರಸ್ತೆಯಲ್ಲಿ ಶನಿವಾರ ಕುದುರೆಗೆ ವಾಹನ ಡಿಕ್ಕಿಯಾಗಿದ್ದು, ಕುದುರೆ ರಕ್ತಸ್ರಾವದಿಂದ ಬಳಲಿದ್ದು, ಗಾಯಗೊಂಡ ಕುದುರೆಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ವೈದ್ಯಾಧಿಕಾರಿಗಳು ವಿಫಲರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ. ರೇಖಾ ಎಸ್ ಟಿಯವರು ಬಂದು ಭೇಟಿ ನೀಡಿ ಕುದುರೆಗೆ ಚುಚ್ಚುಮದ್ದು ನೀಡಿ ಹೋಗಿರುವುದಾಗಿ ತಿಳಿದುಬಂದಿದೆ.

ಕುದುರೆ ತೀವ್ರ ನೋವಿಲ್ಲಿರುವ ಕಾರಣ ರಸ್ತೆಯಲ್ಲೆಲ್ಲ ತಿರುಗಾಡುತ್ತಿದೆ. ಹಾಗಾಗಿ ತೀವ್ರ ರಕ್ತಸ್ರಾವ ಉಂಟಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಇನ್ಫೆಕ್ಷನ್ ಆಗುವ ಸಾಧ್ಯತೆ ಇದೆ ಎಂಬುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರೊಬ್ಬರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕುದುರೆಗೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕೆಂಬ ಸಾರ್ವಜನಿಕರ ಮನವಿಗೆ ಉಡಾಫೆ ಉತ್ತರ ನೀಡಿದ ಡಾ. ರೇಖಾ ಎಸ್ ಟಿಯವರು, ʼಪಶು ಆ್ಯಂಬುಲೆನ್ಸ್‌ಗೆ ಚಾಲಕ ಇಲ್ಲ. ಹಾಗಾಗಿ ನಾನು ಚುಚ್ಚುಮದ್ದು ನೀಡಿದ್ದೇನೆ. ನನ್ನ ಕರ್ತವ್ಯದ ಸಮಯ ಮುಗಿದಿದೆʼಯೆಂದು ತಿಳಿಸಿ ಹೋಗಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements
ವರ್ಗಾವಣೆ ಆದೇಶದ ಪ್ರತಿ

“ಅಧಿಕಾರಿಗಳು ಓಡಾಡಲು ಕಾರು ಇದೆ. ಅದೇ ಪ್ರಾಣಿಗಳ ಮೇಲೆ ಇವರ ಕರುಣೆ ಎಷ್ಟಿದೆ?. ಕೆಲವು ಪಶು ವೈದ್ಯರಿಗೆ ಕರೆ ಮಾಡಿದರೂ ಸರ್ಕಾರಿ ಪಶು ವೈದ್ಯಧಿಕಾರಿಗಳು, ʼಕೆಲಸದ ಸಮಯ ಮುಗಿದಿದೆ, ಬರುವುದಿಲ್ಲʼವೆಂದು ತಿಳಿಸಿದ್ದಾರೆ” ಎಂದು ಆರೋಪಿಸಿದರು.

“ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಆಟೋ ಕಾಂಪ್ಲೆಕ್ಸ್ ಬಳಿ ಕುದುರೆ ನೋವಿನಿಂದ ಬಳಲುತ್ತ ಬಂದಿದ್ದನ್ನು ಗಮನಿಸಿದ ಸ್ಥಳೀಯರು ಶಿರಿಸಿಯ ಪ್ರಾಣಿ ದಯಾಸಂಘದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪ್ರಾಣಿ ದಯಾಸಂಘದವರು ಕುದುರೆಗೆ ಚಿಕಿತ್ಸೆ ನೀಡಲು ಸಹಕರಿಸಿದ್ದಾರೆ. ಆದರೆ, ಪಶುವೈದ್ಯರ ಅಮಾನವೀಯ ವರ್ತನೆ ಖಂಡನೀಯ” ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

“ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ ರೇಖಾ ಎಸ್ ಟಿಯವರನ್ನು 2024ರ ಮಾರ್ಚ್‌ 03ರಂದು ಶಿವಮೊಗ್ಗ ಮಹಾನಗರ ಪಾಲಿಕೆ ನಗರಾಭಿವೃದ್ಧಿ ಇಲಾಖೆಗಡ ನಿಯೋಜನೆಗೊಂಡಿದ್ದರೂ ಪ್ರಸ್ತುತ, ಪ್ರತಿನಿಯೋಜನೆ ಮೇರೆಗೆ ಪಶು ಇಲಾಖೆಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದು, ಸದರಿಯವರ ಗರಿಷ್ಠ ನಿಯೋಜನಾ ಅವಧಿಯು ಈಗಾಗಲೇ ಪೂರ್ಣಗೊಂಡಿದೆ. ಹಾಗಾಗಿ ನಗರಾಭಿವೃದ್ಧಿ ಇಲಾಖೆಯ ನಿಯೋಜನಾ ಸೇವೆಯಿಂದ ಪಶು ಇಲಾಖೆಗೆ ಹಿಂಪಡೆದು, ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜಡೆ ಎಂಬಲ್ಲಿನ ಪಶು ಆಸ್ಪತ್ರೆಗೆ ಇವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸ್ಥಳನಿಯುಕ್ತಿಗೊಳಿಸಿ, ಆದೇಶಿಸಿದೆಯೆಂದು ಸರ್ಕಾರದ ಅಧೀನ ಕಾರ್ಯದರ್ಶಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ (ಪಶುಸಂಗೋಪನೆ) ಪತ್ರ ನೀಡಿ 4 ತಿಂಗಳು ಕಳೆದಿವೆ. ಆದರೂ ಶಿವಮೊಗ್ಗ ಮಹಾನಗರ ಪಾಲಿಕೆ ಮುಖ್ಯ ಪಶು ವೈದ್ಯಧಿಕಾರಿಯಾಗಿ ಮುಂದುವರೆಯಲು ಕಾರಣವೇನು ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ನಾಗರಹೊಳೆ ಹುಲಿ ಸಂರಕ್ಷಿತಾರಣ್ಯ; ರಾಜ್ಯದ ಮೊದಲ ಮಹಿಳಾ ನಿರ್ದೇಶಕರಾಗಿ ಪಿ ಎ ಸೀಮಾ ನೇಮಕ

“ವರ್ಗಾವಣೆಯಾಗಿದ್ದರೂ ಕೂಡಾ ನಾಲ್ಕು ತಿಂಗಳುಗಳಿಂದ ಇವರೇ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಮುಂದುವರೆದಿದ್ದಾರೆ. ಆದರೂ ಸಾರ್ವಜನಿಕರಿಗೆ ಸರಿಯಾದ ರೀತಿಯಲ್ಲಿ ಸ್ಪಂದನೆ ನೀಡುತ್ತಿಲ್ಲ. ಅಲ್ಲದೆ ಕುದುರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ರೇಖಾ ಅವರಿಗೆ ಕರೆ ಮಾಡಿದರೂ ಕರೆ ಸ್ವೀಕರಿಸಿಲ್ಲ. ಇತ್ತ ಕಡೆ ಸಂಬಂಧಪಟ್ಟವರಾದರೂ ಗಮನಕ್ಕೆ ತೆಗೆದುಕೊಳ್ಳುತ್ತಾರ ಎಂಬುದನ್ನು ನಿರೀಕ್ಷಿಸಬೇಕಾಗಿದೆ” ಎಂದು ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಈ ದಿನ.ಕಾಮ್‌ ಮಹಾನಗರ ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ. ರೇಖಾ ಎಸ್ ಟಿಯವರನ್ನು ಸಂಪರ್ಕಿಸಿದೆಯಾದರೂ ಅವರು ಕರೆಗೆ ಲಭ್ಯವಾಗಿಲ್ಲ.

ಭಾರದ್ವಾಜ್
ರಾಘವೇಂದ್ರ, ಶಿವಮೊಗ್ಗ
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X