ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಾವಣಗೆರೆಯ ಸ್ವಾಭಿಮಾನಿ ಬಳಗದಿಂದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಎಐಎಂಐಎಂ ದಾವಣಗೆರೆ ಜಿಲ್ಲಾಧ್ಯಕ್ಷ ಮುಹಮ್ಮದ್ ಅಲಿ ಶೋಯಬ್ ಮಾತನಾಡಿ, “ಅತ್ಯಾಚಾರಿಗಳಿಗೆ ಸರ್ಕಾರ ತೀವ್ರವಾದ ಶಿಕ್ಷಾ ಕಾನೂನು ತರಬೇಕು. ಅಲ್ಲದೆ, ಇಂತಹ ಪ್ರಕರಣಗಳಲ್ಲಿ 24 ಗಂಟೆಗಳ ಒಳಗೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಸ್ವಾಭಿಮಾನಿ ಬಳಗದ ಸದಸ್ಯ ಮತ್ತು ಒಬಿಸಿ ಮುಖಂಡ ಸಾದಿಕ್ ಪೋರಂದರ್ ಲೋಕಿಕೆರೆ ಮಾತನಾಡಿ, “ಕೋಲ್ಕತ್ತಾ ಪ್ರಕರಣ ಸಮಾಜ ತಲೆತಗ್ಗಿಸುವ ಘಟನೆಯಾಗಿದೆ. ಈ ಪ್ರಕರಣಕ್ಕೆ ನ್ಯಾಯ ಒದಗಿಸಬೇಕು ಮತ್ತು ಅಪರಾಧಿಗಳಿಗೆ ಕೂಡಲೇ ಕಠಿಣ ಶಿಕ್ಷೆ ನೀಡಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು|ಕಲ್ಕತ್ತಾದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಎಐಡಿಎಸ್ಓ ಪ್ರತಿಭಟನೆ
“ನ್ಯಾಯಯುತ ತನಿಖೆ ನಡೆಸಿ ದೋಷಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು” ಎಂದು ಹೋರಾಟಗಾರರು, ಸ್ಥಳೀಯರು, ವಿವಿಧ ಸಂಘಟನೆಗಳು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು.