ಅಶೋಕ್‌ ಅವರೇ, ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ: ಸಿದ್ದರಾಮಯ್ಯ ಪ್ರಶ್ನೆ

Date:

Advertisements

“ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಸಿದ್ದರಾಮಯ್ಯನವರು ಯಾಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿಲ್ಲ?’’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ನನ್ನ ಪ್ರಶ್ನಿಸುವ ಮೂಲಕ ಮತ್ತೊಮ್ಮೆ ತಮ್ಮ ಅಜ್ಞಾನ ಪ್ರದರ್ಶಿಸಿದ್ದಾರೆ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು,” ಅಶೋಕ್ ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ” ಎಂದಿದ್ದಾರೆ.

“ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು. ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ ಕೂಡಾ ಇತ್ತು. ಹಾಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಅಶೋಕ್ ಅವರೇ, ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

Advertisements

“ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ.ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು. ಅಶೋಕ್ ಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು” ಎಂದು ತಿರುಗೇಟು ನೀಡಿದ್ದಾರೆ.

“ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಢೀಕರಿಸಿದ್ದರಲ್ಲವೇ?” ಎಂದು ಕೇಳಿದ್ದಾರೆ.

“ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ” ಎಂದು ಹೇಳಿದ್ದಾರೆ.

“ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪರವಾಗಿ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ಆಗಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಬಗ್ಗೆ ಅವಹೇಳನ ಮಾಡಿದ್ದೆಲ್ಲ ಮರೆತುಹೋದಂತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದೂ ಕೂಡಾ ಮರೆತುಹೋಗಿದೆ” ಎಂದು ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X