ಮಂಗಳೂರು | ಕಾಂಗ್ರೆಸ್ ಪ್ರತಿಭಟನೆಯ ನಡುವೆ ಬಿಜೆಪಿ ಮುಖಂಡನ ಮಾಲೀಕತ್ವದ ಬಸ್‌ಗೆ ಕಲ್ಲು ತೂರಾಟ!

Date:

Advertisements

ಮುಡಾ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ರಾಜ್ಯಾದ್ಯಂತ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ನಗರದ ಖಾಸಗಿ ಸಿಟಿ ಬಸ್‌ಗೆ ಕಲ್ಲು ಎಸೆದಿರುವ ಘಟನೆ ನಡೆದಿದೆ.

ಕಾಂಗ್ರೆಸ್ ಪ್ರತಿಭಟನೆಯ ವೇಳೆ ಮಂಗಳೂರಿನ ಲಾಲ್ ಭಾಗ್ ಜಂಕ್ಷನ್ ಬಳಿ ಘಟನೆ ನಡೆದಿದೆ. ಜೋಕಟ್ಟೆಯಿಂದ ಸ್ಟೇಟ್‌ಬ್ಯಾಂಕ್‌ಗೆ ತೆರಳುತ್ತಿದ್ದ ವೇಳೆ ಬಿಜೆಪಿ ಮುಖಂಡನ ಮಾಲೀಕತ್ವದ ಬಸ್‌ಗೆ ಕಲ್ಲು ತೂರಾಟ ನಡೆದಿದೆ.

ಮಂಗಳೂರು 4

ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ 2ಸಿ ನಂಬರ್‍‌ನ ಬಸ್‌ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್‌ನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

Advertisements
ಕಾಂಗ್ರೆಸ್ 16

ಜೋಕಟ್ಟೆಯಿಂದ ಸ್ಟೇಟ್‌ಬ್ಯಾಂಕ್‌ಗೆ ತೆರಳುತ್ತಿದ್ದ 2ಸಿ ನಂಬರ್‌ನ ಬಸ್‌ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಜೋಕಟ್ಟೆಯ ನೌಫಾಲ್ ಎಂಬವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು. ಈತ ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಲ್ಲು ತೂರಾಟ ಆಗಿರುವ ಬಗ್ಗೆ ಪ್ರಕರಣ ದಾಖಲಾಗಿರುವ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಈವರೆಗೆ ಅಧಿಕೃತ ಮಾಹಿತಿ ನೀಡಿಲ್ಲ.

ಇದನ್ನು ಓದಿದ್ದೀರಾ? ಬೆಂಗಳೂರು | ಡ್ರಾಪ್ ಕೊಡುವ ನೆಪದಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ; ಆರೋಪಿಯ ಬಂಧನ

ಕಾಂಗ್ರೆಸ್‌ನ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಪ್ರಕಾಶ್ ರಾಥೋಡ್, ರಮಾನಾಥ ರೈ ಮೊದಲಾದವರು ಭಾಗಿಯಾಗಿದ್ದರು. ಮಂಗಳೂರಿನ ನಾರಾಯಣ ಗುರು ವೃತ್ತದಿಂದ ನಡೆಸಲಾದ ಕಾಲ್ನಡಿಗೆ ಜಾಥಾದಲ್ಲಿ ಮಂಗಳೂರು ನಗರ ಸೇರಿ ಪುತ್ತೂರು, ಸುಳ್ಯ, ಬೆಳ್ತಂಗಡಿಯ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X