ಮುಡಾ ಪ್ರಕರಣ | ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ: ಸಿದ್ದರಾಮಯ್ಯ

Date:

Advertisements

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋ‌ರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಚಿತ್ರಕಲಾ ಪರಿಷತ್‌ನಲ್ಲಿ ಫೋಟೋ ಜರ್ನಲಿಸ್ಟ್ ರವರ ವತಿಯಿಂದ ಆಯೋಜಿಸಲಾಗಿದ್ದ ಫೋಟೋ ಎಕ್ಸಿಬಿಷನ್ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನಾನು ಯಾವ ತಪ್ಪನ್ನೂ ಎಸಗಿಲ್ಲ

Advertisements

“ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ” ಎಂದರು.

“ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ” ಎಂದು ಹೇಳಿದರು.

ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟ

ಬಿಜೆಪಿಯವರು ಸಿಎಂ ರಾಜಿನಾಮೆ ಬೇಡಿಕೆಯಿರಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ರಾಜಭವನವನ್ನು ಬಳಸಿಕೊಂಡು ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಬಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದಿರುಸುತ್ತೇವೆ” ಎಂದರು.

“ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡುಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ” ಎಂದು ತಿಳಿಸಿದರು.

ನನ್ನನ್ನು ರಾಜಕೀಯವಾಗಿ ಮುಗಿಸಬಹುದು ಎಂಬುದು ಭ್ರಮೆ

“ನಾನು ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X