ಮೊಬೈಲ್ ತೋರಿಸುವ ಆಮಿಷವೊಡ್ಡಿ ಎರಡನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಸಂದೀಪ್ ಅಲಿಯಾಸ್ ರಘು(23) ಅತ್ಯಾಚಾರವೆಸಗಿರುವ ಆರೋಪಿ. ಗಾರೆ ಕೆಲಸ ಮಾಡುತ್ತಿದ್ದ ಆರೋಪಿ ಸಂದೀಪ್ ಮುಷ್ಟೂರು ಗ್ರಾಮದವನಾಗಿದ್ದು, ಬಾಲಕಿಯ ತಂದೆ ಬಳಿ ಕೆಲಸ ಕೇಳುವ ನೆಪದಲ್ಲಿ ಮನೆಗೆ ಬಂದಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಗೆ ಮೊಬೈಲ್ ತೋರಿಸುತ್ತೇನೆ ಎಂದು ಪುಸಲಾಯಿಸಿ ಮನೆಯ ಮೇಲಿನ ಕೊಠಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.
ಆರೋಪಿ ಸಂದೀಪ್ ಓಡಿಹೋಗುತ್ತಿದ್ದನ್ನು ಗಮನಿಸಿದ ಪೋಷಕರು ಮನೆ ಒಳಗೆ ಬಂದು ನೋಡಿದಾಗ ವಿಚಾರ ಗೊತ್ತಾಗಿದೆ. ಕೂಡಲೇ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಕೊಡಿಸಿ, ನಂಗಲಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಂಗಲಿ ಪೊಲೀಸರು ಆರೋಪಿ ಸಂದೀಪ್‌ನನ್ನು ಬಂಧಿಸಿದ್ದು, ಅತ್ಯಾಚಾರ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ವೈದ್ಯರ ಮುಷ್ಕರ
ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣ ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ.
