ಬೀದರ್‌ | ಕೊಲ್ಕತ್ತಾದಲ್ಲಿ ವೈದ್ಯೆ ಕೊಲೆ ಖಂಡಿಸಿ ಕ್ಯಾಂಡಲ್‌ ಮಾರ್ಚ್

Date:

Advertisements

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ದುಷರ್ಮಿಗಳ ವಿರುದ್ಧ ಕಠಿಣ ಕಾನೂನು ಜರುಗಿಸಬೇಕೆಂದು ಒತ್ತಾಯಿಸಿ ಸಾಲಿಡಾರಿಟಿ ಯೂತ್ ಮ್ಯೂಮೆಂಟ್‌ ವತಿಯಿಂದ ಬೀದರ್‌ನಲ್ಲಿ ಕ್ಯಾಂಡಲ್‌ ಮಾರ್ಚ್‌ ನಡೆಸಲಾಯಿತು.

ಭಾನುವಾರ ಸಂಜೆ ನಗರದ ಗವಾನ್ ಚೌಕ್‌ನಿಂದ ಡಾ.ಬಿ‌.ಆರ್.ಅಂಬೇಡ್ಕರ್ ವೃತ್ತದವರೆಗೆ ಕ್ಯಾಂಡಲ್‌ ಹಿಡಿದು ಮೌನ ಮೆರವಣಿಗೆ ಪ್ರತಿಭಟನೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿದರು.

ʼದೇಶದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಕ್ರೂರ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಇತ್ತಿಚೆಗೆ ಕೊಲ್ಕತ್ತಾದಲ್ಲಿ ವ್ಯೆದ್ಯೆಯ ಪೈಶಾಚಿಕ ಕೊಲೆ ಸೇರಿದಂತೆ ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ನಡೆದ ಘಟನೆಗಳು ಗಮನಿಸಿದರೆ ಮಹಿಳೆಯರಿಗೆ ರಕ್ಷಣೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ ಎನ್ನುವ ಆತಂಕ ಕಾಡುತ್ತದೆ. ಸಮಾಜದಲ್ಲಿ ಮಹಿಳೆಯರ ಗೌರವವನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರಗಳು ಜಾಗೃತವಾಗಬೇಕುʼ ಎಂದರು.

Advertisements
WhatsApp Image 2024 08 19 at 1.25.54 AM

ʼಕೊಲ್ಕತ್ತಾ ಘಟನೆಯಿಂದ ವೈದ್ಯರಿಗೆ ರಕ್ಷಣೆ ಇಲ್ಲವೆಂಬ ಭಯ ಕಾಡುವಂತಾಗಿದೆ.‌ ಅದರಲ್ಲೂ ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಮಹಿಳೆಯರಿಗೆ ರಕ್ಷಣೆ ಒದಗಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ನೆನಪು | ವಿಚಾರವಾದಿ ಅರಸು ಅವರ ಸಹನೆ ದೊಡ್ಡದು: ಎಂ.ಸಿ. ನಾಣಯ್ಯ

ಕ್ಯಾಂಡಲ್‌ ಮಾರ್ಚ್ ಮೆರವಣಿಗೆಯ ಆಯೋಜಕ ಇರ್ಫಾನ್ ಅಹ್ಮದ್,‌ ಸಂಘಟನೆಯ ರಾಜ್ಯ ಕಾರ್ಯದರ್ಶಿ ಮೋಹದ್ ರಫೀಕ್, ಜಮಾಅತ್-ಎ-ಇಸ್ಲಾಮಿ ಹಿಂದ್‌ನ ಜಿಲ್ಲಾಧ್ಯಕ್ಷ ಮೋಹದ್ ಮುಜ್ಜಮ್ ಸೇರಿದಂತೆ ಮಹಿಳೆಯರು, ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X