ಬೆಳಗಾವಿ | ಬೆಳೆಗಳಿಗೆ ಡ್ರೋನ್ ಮೂಲಕ ಪೋಷಕಾಂಶ ಸಿಂಪಡಣೆ; ಸಚಿವ ಸತೀಶ್ ಜಾರಕಿಹೊಳಿ‌ ಚಾಲನೆ

Date:

Advertisements

ಬೆಳೆಗಳಿಗೆ ಡ್ರೋನ್‌ ಮೂಲಕ ಪೋಷಕಾಂಶ ಸಿಂಪಡಣೆ ಮಾಡುವುದು ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡುವ ಒಳ್ಳೆಯ ಪದ್ಧತಿಯಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ರೋಟರಿ ಕ್ಲಬ್ ವತಿಯಿಂದ ಹತ್ತರಗಿ ಬಳಿಯ ಕೃಷಿ ಜಮೀನಿನಲ್ಲಿ ಆಯೋಜಿಸಲಾದ ಸೋಯಾ ಮತ್ತು ಅವರೆ ಬೆಳೆಗಳಿಗೆ ಡ್ರೋನ್ ಮೂಲಕ ಪೋಷಕಾಂಶಗಳ ಸಿಂಪಡಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಡ್ರೋನ್‌ ಮೂಲಕ ಪೋಷಕಾಂಶ ಸಿಂಪಡಣೆ ಮಾಡುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ ಮತ್ತು ವೇಗವಾಗಿ ಕೃಷಿ ಚಟುವಟಿಕೆ ನಿರ್ವಹಿಸಲು ಸಾಧ್ಯವಾಗುತ್ತದೆ. ರೈತರು ಹೊಸ ತಂತ್ರಜ್ಞಾನದ ಮೂಲಕ ಕೃಷಿ ಚಟುವಟಿಕೆಗಳಲ್ಲಿ ಬೆಳವಣಿಗೆಯಾಗಬೇಕು” ಎಂದರು.

Advertisements

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, “37 ಡ್ರೋನ್‌ಗಳನ್ನು ಸೋಯಾ, ಅವರೆ ಬೆಳೆಗಳಿಗೆ ಪೋಷಕಾಂಶಗಳ ಸಿಂಪಡಣೆಗೆ ಬಳಕೆ ಮಾಡಲಾಗುತ್ತಿದೆ. ರೈತರು ಬೆಳೆದ ವಿವಿಧ ಬೆಳೆಗಳಿಗೆ ಪೋಷಕಾಂಶ ಮತ್ತು ರಸಗೊಬ್ಬರಗಳನ್ನು ಸಿಂಪಡಣೆ ಮಾಡಲು ಈ ವಿಧಾನ ಅನುಕೂಲವಾಗಿದೆ” ಎಂದು ಹೇಳಿದರು.

“ಪ್ರತಿ ಎಕರೆ ಸಿಂಪಡಣೆಗೆ ಕೇವಲ ₹400 ಖರ್ಚಾಗುತ್ತದೆ. ಡ್ರೋನ್ ಮೂಲಕ ವಿವಿಧ ಬೆಳೆಗಳಿಗೆ ಕೀಟನಾಶಕ, ರಸಗೊಬ್ಬರ ಸಿಂಪಡಣೆ ಮಾಡಬಹುದು. ರೈತರಿಗೆ ತಾಂತ್ರಿಕತೆಯ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ; ರಾಜ್ಯಪಾಲರ ಅಧಿಕಾರ ದುರುಪಯೋಗಕ್ಕೆ ಸಿಪಿಐಎಂ ಖಂಡನೆ

“ಜಿಲ್ಲೆಯ ರೈತ ಸಮುದಾಯವು ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಯನ್ನು ಸಂಪರ್ಕಿಸಿ ಡ್ರೋನ್ ಬಳಕೆ ಬಗ್ಗೆ ಮಾಹಿತಿ ಪಡೆಯಬೇಕು. ಈಗಾಗಲೇ ಕಿತ್ತೂರು ಬೈಲಹೊಂಗಲ ಬಾಗೇವಾಡಿಯಲ್ಲಿ ಕಬ್ಬುಬೆಳೆಗೆ ಡ್ರೋನ್ ಬಳಕೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಕೃಷಿ ಇಲಾಖೆಯ ಉಪ ನಿರ್ದೇಶಕರು, ಹುಕ್ಕೇರಿ ತಹಶೀಲ್ದಾರ್ ಮಂಜುಳಾ ನಾಯಕ, ರೋಟರಿ ಕ್ಲಬ್ ಪದಾಧಿಕಾರಿಗಳು‌ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X