ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಆಗಸ್ಟ್ 20ರಂದು ಆಸ್ಪತ್ರೆಗಳಲ್ಲಿನ ಆರೋಗ್ಯ ಸಿಬ್ಬಂದಿಯ ಸುರಕ್ಷತೆಯನ್ನು ಪರಿಶೀಲಿಸಲು ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸಲು ಆದೇಶಿಸಿದರು.
ಆಗಸ್ಟ್ 9ರಂದು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣವನ್ನು ವಿಚಾರಣೆಯನ್ನು ಸಿಜೆಐ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ನಡೆಸಿದೆ. ಪೀಠವು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡಿತ್ತು.
ಇದನ್ನು ಓದಿದ್ದೀರಾ? ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ | ರೋಗಿಗಳನ್ನು ಶಿಫ್ಟ್ ಮಾಡಿ, ಆಸ್ಪತ್ರೆಯನ್ನು ಮುಚ್ಚಿ; ಸರ್ಕಾರಕ್ಕೆ ಹೈಕೋರ್ಟ್ ತರಾಟೆ
“ನಾವು ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸುತ್ತಿದ್ದೇವೆ. ಅದು ಬೇರೆ ಬೇರೆ ಹಿನ್ನೆಲೆಯ ವೈದ್ಯರನ್ನು ಹೊಂದಿದ್ದು, ಅವರು ಭಾರತದಾದ್ಯಂತ ಅನುಸರಿಸಬೇಕಾದ ವಿಧಾನಗಳನ್ನು ಸೂಚಿಸುತ್ತಾರೆ. ಯುವ ಅಥವಾ ಮಧ್ಯವಯಸ್ಕ ವೈದ್ಯರು ತಮ್ಮ ಉದ್ಯೋಗ ವಾತಾವರಣದಲ್ಲಿ ಸುರಕ್ಷಿತವಾಗಿರಲು ಸಾಧ್ಯವಾಗಲು ಅನುಸರಿಸಬೇಕಾದ ವಿಧಾನಗಳನ್ನು ಸೂಚಿಸುತ್ತಾರೆ” ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿರುವ ವಿಚಾರದಲ್ಲಿ ಪಶ್ಚಿಮ ಬಂಗಾಳ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಆಸ್ಪತ್ರೆಯ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದೆ.
ರಾಷ್ಟ್ರೀಯ ಕಾರ್ಯಪಡೆಯ ಸದಸ್ಯರ ಪಟ್ಟಿ:
- ಸರ್ಜನ್ ವೈಸ್ ಅಡ್ಮಿರಲ್ ಆರ್ತಿ ಸರಿನ್
- ಡಾ ಡಿ ನಾಗೇಶ್ವರ ರೆಡ್ಡಿ
- ಡಾ ಎಂ ಶ್ರೀನಿವಾಸ್
- ಡಾ ಪ್ರತಿಮಾ ಮೂರ್ತಿ
- ಡಾ ಗೋವರ್ಧನ್ ದತ್ ಪುರಿ
- ಡಾ ಸೌಮಿತ್ರಾ ರಾವತ್
- ದೆಹಲಿಯ ಏಮ್ಸ್ ಹೃದ್ರೋಗ ವಿಭಾಗ ಮುಖ್ಯಸ್ಥೆ ಪ್ರೊ ಅನಿತಾ ಸಕ್ಸೇನಾ
- ಮುಂಬೈನ ಡೀನ್ ಗ್ರಾಂಟ್ ಮೆಡಿಕಲ್ ಕಾಲೇಜಿನ ಮುಖ್ಯಸ್ಥೆ ಪ್ರೊ ಪಲ್ಲವಿ ಸಪ್ರೆ
- ಏಮ್ಸ್‌ನ ನರವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ ಪದ್ಮಾ ಶ್ರೀವಾಸ್ತವ
CJI: A national consensus must be evolved.. thus we are putting together a list of members as part of National Task force
— Bar and Bench (@barandbench) August 20, 2024
Surgeon Vice Admiral R Sarin
Dr D Nageshwar Reddy
Dr M Shreenivas
Dr Pratima Murty
Dr Goverdhan Dutt Puri
Dr Saumitra Rawat
Prof Anita Saxena, Head…