ದೇವರಾಜ ಅರಸುಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು: ಸಿಎಂ ಸಿದ್ದರಾಮಯ್ಯ ಭರವಸೆ

Date:

Advertisements

ಸಮಾಜದಲ್ಲಿ ಬಡತನ ಮತ್ತು ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಮಂಗಳವಾರ (ಆ.20) ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ಮಾಜಿ ಸಿಎಂ ದಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಸಮಾಜದಲ್ಲಿ ಮೇಲು ಕೀಳು ಇರಬಾರದು. ಬಡವ ಬಲ್ಲಿದ ಇರಬಾರದು. ಜಾತಿ ವ್ಯವಸ್ಥೆ ಇರಬಾರದು, ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬದುಕಬೇಕು ಎಂಬುವುದೇ ಬಸವಾದಿ ಶರಣರ ಕನಸು. ಇದೇ ತತ್ವದ ಆಧಾರದ ಮೇಲೆ ಅಂಬೇಡ್ಕರ್‌ ಅವರು ಸಂವಿಧಾನ ರಚಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಹ ಈ ತತ್ವ ಸಿದ್ದಾಂತಗಳ ಆಧಾರದಲ್ಲಿ ಆಡಳಿತ ನಡೆಸಿ, ರಾಜ್ಯದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು” ತಂದರು.

Advertisements

“ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ ಕಾಳಜಿ ಹೊಂದಿದ್ದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲು ನಮ್ಮ ಸಂವಿಧಾನ ಒತ್ತು ನೀಡಿದೆ. ಇದೇ ಹಾದಿಯಲ್ಲಿ ಸಂವಿಧಾನಕ್ಕೆ ಬದ್ಧವಾಗಿ ನಾವು ಆಡಳಿತ ನಡೆಸುತ್ತಿದ್ದೇವೆ. ನೆಹರು ಕಾಲದಿಂದ ಇಂದಿನವರೆಗೂ ಅಸಮಾನನತೆಯ ಸಮಾಜವನ್ನು ತೊಡೆದು ಸಮ ಸಮಾಜ ನಿರ್ಮಾಣಕ್ಕಾಗಿ ನಿರಂತರವಾಗಿ ಪ್ರಯತ್ನಗಳನ್ನು ನಡೆಸಲಾಗಿದೆ” ಎಂದು ಹೇಳಿದರು.

“ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಇನ್ನೂ ನಮ್ಮಲ್ಲಿ ಸಾಮಾಜಿಕ ಸಮಾನತೆ ಸಾಧ್ಯವಾಗಿಲ್ಲ. ಸಮಾನವಾಗಿ ಸಂಪತ್ತು ಹಂಚಿಕೆ ನಮಗೆ ಸಾಧ್ಯವಾಗಿಲ್ಲ. ವ್ಯಕ್ತಿಯನ್ನು ಜಾತಿ ಆಧಾರದಲ್ಲಿ ಗುರುತಿಸುವಂತಹ ವ್ಯವಸ್ಥೆ ಇನ್ನೂ ನಮ್ಮಲ್ಲಿ ಇದೆ. ಜನರನ್ನು ಅವರ ಪ್ರತಿಭೆ ಮೇಲೆ, ವ್ಯಕ್ತಿತ್ವದ ಮೇಲೆ ಗುರುತಿಸದೆ ಜಾತಿ ಆಧಾರದಲ್ಲಿ ಗುರುತಿಸಲಾಗುತ್ತಿದೆ. ಆದರೆ ಯಾರೂ ಕೂಡಾ ಜಾತಿ ಆಧಾರದಲ್ಲಿ ಸಮಾಜದಲ್ಲಿ ಪ್ರತಿಭಾವಂತ ಆಗಲು ಸಾಧ್ಯವಿಲ್ಲ. ಸರಿಯಾದ ಅವಕಾಶಗಳು ಸಿಕ್ಕಿದರೆ ಮಾತ್ರ ಪ್ರತಿಭಾವಂತ ಆಗಲು ಸಾಧ್ಯ” ಎಂದರು.

“ಎಲ್ಲರಿಗೂ ಸಮಾನ ಅವಕಾಶ ಸಿಗಲು ಹಾವನೂರು ಅವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗದ ಆಯೋಗ ರಚನೆ ಮಾಡಿ, ಎಷ್ಟೇ ವಿರೋಧ ಇದ್ದರೂ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಿದರು. ಇದರಿಂದ ಹಿಂದುಳಿದ ವರ್ಗದವರಿಗೆ ಶಿಕ್ಷಣದಲ್ಲಿ ಮೀಸಲಾತಿ ಸಾಧ್ಯವಾಯಿತು. ತಳ ಸಮುದಾಯದವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲಗೊಳಿಸಲು ಎಷ್ಟೇ ವಿರೋಧ ಇದ್ದರೂ, ಜಾರಿಗೊಳಿಸಿದರು. ಹಿಂದುಳಿದವರಿಗೆ ಶೇ.38 ರಷ್ಟು ಮೀಸಲಾತಿ ಸಿಕ್ಕಿದ್ದರೆ ಅದಕ್ಕೆ ಅರಸು ಅವರೇ ಕಾರಣ” ಎಂದು ಹೇಳಿದರು.

“ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರಗಳು ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿ ಪಟ್ಟಭದ್ರರು ಇದನ್ನು ವಿರೋಧಿಸುತ್ತಿದಾರೆ” ಎಂದು ಕಿಡಿಕಾರಿದರು.

“ನಾನು 1984ರಲ್ಲಿ ಮೊದಲ ಬಾರಿಗೆ ಮಂತ್ರಿಯಾದ ಬಳಿಕ ಕಳೆದ 40 ವರ್ಷಗಳಲ್ಲಿ ಇಂದಿನವರೆಗೆ ನನ್ನ ಜೀವನದಲ್ಲಿ ಯಾವುದೇ ಕಳಂಕವಿಲ್ಲ. ನಾನು ಯಾವುದೇ ತಪ್ಪು ಮಾಡದಿದ್ದರೂ ಈಗ ಕಪ್ಪು ಮಸಿ ಬಳಿಯಲು ನಿರಂತರ ಪ್ರಯತ್ನ ನಡೆಯುತ್ತಿದೆ. ಅಧಿಕಾರ ಇದ್ದರೂ, ಇಲ್ಲದಿದ್ದರೂ, ಸಾಮಾಜಿಕ ನ್ಯಾಯದ ವಿಷಯದಲ್ಲಿ, ನಂಬಿರುವ ಸಿದ್ಧಾಂತಗಳ ಕುರಿತು ಯಾವತ್ತೂ ರಾಜಿ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಎಲೆಕ್ಟ್ರಾನಿಕ್‌ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ ಎಂದು ನಾಮಕರಣ ಮಾಡಲಾಗುವುದು” ಎಂದು ಇದೇ ವೇಳೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X