ದಾವಣಗೆರೆ | ಸ್ವಾಮಿಗಳ ಹೆಸರಿನಲ್ಲಿ ಕಾಗದದ ಬಂಡಲ್ ನೀಡಿ ವಂಚನೆ: ಪೊಲೀಸರ ಬಲೆಗೆ ಬಿದ್ದ ಆರೋಪಿಗಳು

Date:

Advertisements

ಐರಣಿ ಮಠದ ಸ್ವಾಮಿಗಳ ಶಿಷ್ಯರೆಂದು ಹೇಳಿಕೊಂಡು ಅಸಲಿ ನೋಟಿನ ಕೆಳಗೆ ಬಿಳಿಯ ಹಾಳೆಗಳುಳ್ಳ ಬಂಡಲ್ ನೀಡಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ದಾವಣಗೆರೆ ಮತ್ತು ಚಿತ್ರದುರ್ಗದ 5 ಜನ ಖದೀಮರ ತಂಡವನ್ನು ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, 2.80 ಲಕ್ಷ ರೂ. ನಗದು ಮತ್ತು ಕೃತ್ಯಕ್ಕೆ ಬಳಸಿದ 15 ಲಕ್ಷ ರು. ಮೌಲ್ಯದ 3 ಕಾರನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆಯ ಕಿರಣ್, ದಾದಾಪೀರ್, ಮಂಜುನಾಥ್, ಚಿಕ್ಕಮಗಳೂರಿನ ಇಲಿಯಾಜ್, ಚಿತ್ರದುರ್ಗದ ಮಹಾಂತೇಶ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

2023ರಲ್ಲಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೆಂಚನಾಲ್ ಗ್ರಾಮದ ಚಮನ್ ಸಾಬ್ ಎನ್ನುವವರಿಗೆ ವಂಚಕರು, ನಾವು ಐರಣಿ ಮಠದ ಸ್ವಾಮೀಜಿ ಶಿಷ್ಯರು. ನಮ್ಮ ಬಳಿ 100 ರೂ. ಮುಖಬೆಲೆಯ ನೋಟುಗಳಿದ್ದು ನೀವು 500 ರು. ಮುಖಬೆಲೆಯ ನೋಟುಗಳನ್ನು ನೀಡಿದರೆ ನಾವು ನಿಮಗೆ ಹೆಚ್ಚಿನ ಹಣ ನೀಡುತ್ತೇವೆಂದು ನಂಬಿಸಿ ನೋಟಿನ ಕೆಳಗೆ ಅದೇ ಸೈಜಿನ ಬಿಳಿಹಾಳೆಗಳ ಬಂಡಲ್‌ ನೀಡಿ ಹಣ ಪಡೆದು ಪರಾರಿಯಾಗಿದ್ದರು.

Advertisements

ಈ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯ್ ಕುಮಾರ್ ಸಂತೋಷ್ ಮತ್ತು ಮಂಜುನಾಥ ಜಿ. ಹಾಗೂ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ.ಎಸ್. ಬಸವರಾಜ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಫುಟ್ಬಾಲ್ ಪಂದ್ಯದ ದ್ವೇಷ; ವಿದ್ಯಾರ್ಥಿಗಳನ್ನು ಅಪಹರಣಗೈದು ಅರೆನಗ್ನಗೊಳಿಸಿ ಹಲ್ಲೆ; ಇಬ್ಬರ ಬಂಧನ

ಕಾರ್ಯಾಚರಣೆಯಲ್ಲಿ ಹರಿಹರ ಪೊಲೀಸ್ ವೃತ್ತ ನಿರೀಕ್ಷಕರಾದ ಸುರೇಶ ಸಗರಿ, ಹರಿಹರ ಗ್ರಾಮಾಂತರ ಪೊಲೀಸ್‌ ಠಾಣೆಯ ಮಂಜುನಾಥ ಎಸ್. ಕುಪ್ಪೇಲೂರ, ಚಿದಾನಂದಪ್ಪ ಸಿಬ್ಬಂದಿ ತಿಪ್ಪೇಸ್ವಾಮಿ, ನಾಗರಾಜ. ಕರಿಯಪ್ಪ, ರಮೇಶ, ದಾದಾಪೀರ್, ಗಂಗಾಧರ, ಪ್ರಸನ್ನಕಾಂತ, ಸುರೇಶ, ಅರ್ಜುನ್ ನಂದ್ಯಾಲ, ನೀಲಮೂರ್ತಿ, ಸತೀಶ, ಎಲ್.ಡಿ. ಹನುಮಂತಪ್ಪ, ಅರ್ಜುನ ರಾಯಲ್, ಅನಿಲ್ ಕುಮಾರ್ ನಾಯ್ಕ, ರಿಜ್ವಾನ್ ನಾಸೂರ್, ಮಹೇಂದ್ರ, ನಾಗರಾಜ, ಸಿದ್ದಪ್ಪ, ಮುರುಳಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿ ಸಿಬ್ಬಂದಿ ರಾಘವೇಂದ್ರ ಶಾಂತರಾಜ ಅವರನ್ನು ಒಳಗೊಂಡ ತಂಡ ಭಾಗವಹಿಸಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ ಜಿಲ್ಲೆ | ಬಿಜೆಪಿ ಭದ್ರಕೋಟೆಯನ್ನು ಭೇದಿಸಲಿದ್ದಾರೆಯೇ ಕಾಂಗ್ರೆಸ್‌ ಕಲಿಗಳು?

ದಾವಣಗೆರೆ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌...

ಈ ಬಾರಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ: ಬಿ ಎಸ್ ಯಡಿಯೂರಪ್ಪ

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿ ಎಸ್ ಯಡಿಯೂರಪ್ಪ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ...

ಧಾರವಾಡ | ಈ ಚುನಾವಣೆ ಬಿಜೆಪಿ ವಿರುದ್ಧದ ಲಿಂಗಾಯತ ಹೋರಾಟ: ಗಂಗಾಧರ ದೊಡವಾಡ

ಹುಬ್ಬಳ್ಳಿ ಸೆಂಟ್ರಲ್ ಲಿಂಗಾಯತ ಪ್ರಮುಖರ ಸಭೆ ಜಗದೀಶ ಶೆಟ್ಟರ್ ಗೆಲುವು ಈಗಾಗಲೇ ನಿರ್ಧಾರವಾಗಿದೆ ಲಿಂಗಾಯತ...

ದಾವಣಗೆರೆ | ತಪ್ಪಿದ ಟಿಕೆಟ್‌; ಬಿಕ್ಕಿಬಿಕ್ಕಿ ಅತ್ತ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ

ಟಿಕೆಟ್‌ ತಪ್ಪಲು ಕಾರಣವಾದ ಸಭ್ಯವಲ್ಲದ ಹಳೆಯ ಫೋಟೊಗಳು ಮಾಜಿ ಸಚಿವ ಎಚ್‌ ಆಂಜನೇಯ...

Download Eedina App Android / iOS

X