ಆಪಾದಿತ ಮುಡಾ ಅಕ್ರಮ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿ, ಅದರ ಬೆನ್ನಲ್ಲೇ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ನಡೆದಿವೆ ಎನ್ನಲಾದ ಗಣಿ ಗುತ್ತಿಗೆ ಮಂಜೂರು ಅಕ್ರಮಗಳ ಪಟ್ಟಿಯನ್ನು ಲೋಕಾಯುಕ್ತ ಎಸ್‌ಐಟಿ ತಂಡವು ಮತ್ತೆ ರಾಜಭವನಕ್ಕೆ ಕಳಿಸಿದ್ದು, ಕುಮಾರಸ್ವಾಮಿ ವಿರುದ್ಧದ ಚಾರ್ಜ್‌ಶೀಟ್ ಸಲ್ಲಿಸಲು ಅನುಮತಿ ಕೋರಿದೆ. ಸಿದ್ದರಾಮಯ್ಯ ಅವರ ವಿಚಾರದಲ್ಲಿ ಅತ್ಯುತ್ಸಾಹದಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರಾದ ತಾವರ್ ಚಂದ್ರ ಗೆಹ್ಲೋಟ್ ಅವರು ಎಚ್.ಡಿ ಕುಮಾರಸ್ವಾಮಿ ವಿಚಾರದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ.

HDK ಗಣಿ ಅಕ್ರಮ ಪ್ರಕರಣ: ಪ್ರಾಸಿಕ್ಯೂಷನ್‌ಗೆ ರಾಜ್ಯಾಪಾಲರ ಅನುಮತಿ? H D Kumaraswamy | Governer | MUDA Scam
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: