ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಬಾಗಲಕೋಟೆ ಜಿಲ್ಲಾ ಘಟಕದಿಂದ ಆಗಸ್ಟ್ 25ರಂದು ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕುರುಬ ಸಮಾಜದ ಜಿಲ್ಲಾಧ್ಯಕ್ಷ ಡಿ ಬಿ ಸಿದ್ದಾಪುರ ತಿಳಿಸಿದ್ದಾರೆ.
ಬೀಳಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಶೇಕಡಾ 85% ಕ್ಕಿಂತ ಹೆಚ್ಚು ಅಂಕ ಪಡೆದ ಕುರುಬ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಸನ್ಮಾನಿಸಿ ಗೌರವಿಸಲಾಗುತ್ತದೆ. ಅಂದು ಬೆಳಗ್ಗೆ 10:30 ಕ್ಕೆ ಬಾಗಲಕೋಟೆ ನವನಗರದ ಕಲಾ ಭವನದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ನಡೆಯಲಿದೆ” ಎಂದು ಮಾಹಿತಿ ನೀಡಿದರು.

ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನಾಧೀಶರ, ಪ್ರ.ಪೂ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಮಹಾಸ್ವಾಮಿಗಳು ಕನಕ ಗುರುಪೀಠ ಕಾಗಿನೆಲೆ, ಪ್ರ.ಪೂ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಿಣಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನ ಬಾಗಲಕೋಟೆ ಶಾಸಕ ಹೆಚ್ ವಾಯ್ ಮೇಟಿಯವರು ವಹಿಸಲಿದ್ದಾರೆ ಎಂದರು.
ಉದ್ಘಾಟನೆಯನ್ನು ಬಾದಾಮಿ ಶಾಸಕ ಭೀಮಸೇನ ಬಿ.ಚಿಮ್ಮನಕಟ್ಟಿ ನಡೆಸಲಿದ್ದಾರೆ. ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಹಕ್ಕ-ಬುಕ್ಕದ ಭಾವಚಿತ್ರಕ್ಕೆ ಸಂಸದರಾದ ರಾಜಶೇಖರ ಕೆ ಹಿಟ್ನಾಳ ಪುಷ್ಪಾರ್ಚನೆ ಮಾಡಲಿದ್ದು, ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್.ಸಂಗ್ರೇಶಿ ಅವರು ಛತ್ರಪತಿ ಶಾಹು ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾಚನೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹಾಗೂ ಕೊಳಗೇರಿ ನಿಗಮದ ನಿರ್ದೇಶಕ ರಾಮಕೃಷ್ಣ ರೊಳ್ಳಿ ಆಗಮಿಸಲಿದ್ದಾರೆ. ಜಿಲ್ಲೆಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂಘಟನೆ ಬಯಸುತ್ತಿರುವುದಾಗಿ ಹೇಳಿದರು.
ಸುದ್ದಿಗೋಷ್ಠಿಯ ವೇಳೆ ತಾಲೂಕು ಕುರುಬರ ಸಂಘದ ಅಧ್ಯಕ್ಷ ಪಡಿಯಪ್ಪ ಕರಿಗಾರ, ಬಿ.ಆರ್.ಸೊನ್ನದ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಡಾ.ಎಸ್.ಎಚ್.ತೆಕ್ಕೆಣ್ಣವರ, ಎಂ.ಎಂ.ಶೊಬೋಜಿ, ಸಂಗಪ್ಪ ಕಂದಗಲ್ಲ, ಹಣಮಂತ ಕಾಖಂಡಕಿ, ಸಿದಪ್ಪ ಕಡಪಟ್ಟಿ, ಸಿದ್ದು ಸಾರಾವರಿ, ಶೇಖರ್ ಕಾಖಂಡಕಿ,ಧರ್ಮಣ್ಣ ತೆಲಗಿ,ರಾಜು ತೋಳಮಟ್ಟಿ ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿಗಾಗಿ ಯಲ್ಲಪ್ಪ ಹಂಡಿ 9845902426 ಹಾಗೂ ಸಿದ್ದು ಸಾರಾವರಿ 9483488377 ಅವರ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ವರದಿ: ಖಾಜಾಮೈನುದ್ದಿನ್ ತಹಶೀಲ್ದಾರ್, ಸಿಟಿಜನ್ ಜರ್ನಲಿಸ್ಟ್ ಬೀಳಗಿ
