ಕೊಲ್ಕತ್ತಾದ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯೆಯ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಪ್ರತಿಭಟನಾಕಾರರ ಮೇಲಿನ ದಾಳಿಯ ಕುರಿತು ತುರ್ತು ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಅಪರ ಜಿಲ್ಲಾಧಿಕಾರಿಗಳ ಮೂಲಕ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎ ಐ ಎಂ ಎಸ್ ಎಸ್) ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವ ಜನ ಸಂಘಟನೆ( ಎ ಐ ಡಿ ವೈ ಓ) ಚಿತ್ರದುರ್ಗ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.
ʼದೇಶದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಕ್ರೂರ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಇತ್ತಿಚೆಗೆ ಕೊಲ್ಕತ್ತಾದಲ್ಲಿ ವ್ಯೆದ್ಯೆಯ ಪೈಶಾಚಿಕ ಕೊಲೆ ಸೇರಿದಂತೆ ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ನಡೆದ ಘಟನೆಗಳು ಗಮನಿಸಿದರೆ ಮಹಿಳೆಯರಿಗೆ ರಕ್ಷಣೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ ಎನ್ನುವ ಆತಂಕ ಕಾಡುತ್ತದೆ. ಸಮಾಜದಲ್ಲಿ ಮಹಿಳೆಯರ ಗೌರವವನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರಗಳು ಜಾಗೃತವಾಗಬೇಕುʼ ಎಂದು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಧಾರವಾಡ | ಸಿಎಂ ಸಿದ್ಧರಾಮಯ್ಯ ರಾಜೀನಾಮೆ ವಿಚಾರ ಅವರ ಪಕ್ಷಕ್ಕೆ ಬಿಟ್ಟಿದ್ದು: ಎಸ್ ಆರ್ ಹಿರೇಮಠ್
ʼಕೊಲ್ಕತ್ತಾ ಘಟನೆಯಿಂದ ವೈದ್ಯರಿಗೆ ರಕ್ಷಣೆ ಇಲ್ಲವೆಂಬ ಭಯ ಕಾಡುವಂತಾಗಿದೆ. ಅದರಲ್ಲೂ ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಮಹಿಳೆಯರಿಗೆ ರಕ್ಷಣೆ ಒದಗಿಸಬೇಕುʼ ಎಂದು ಆಗ್ರಹಿಸಿದರು.
ಮನವಿ ಸಲ್ಲಿಸುವ ವೇಳೆ ಚಿತ್ರದುರ್ಗದ ಎಐಡಿವೈಓ, ಎಐಎಂಎಸ್‌ಎಸ್ ಮುಖಂಡರು ಉಪಸ್ಥಿತರಿದ್ದರು.
