ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧವಾಗಿ ದಲಿತ ಮತ್ತು ಆದಿವಾಸಿ ಸಂಘಟನೆ, ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು ಆಗಸ್ಟ್ 21ರಂದು ಭಾರತ್ ಬಂದ್‌ಗೆ ಕರೆ ನೀಡಿದೆ.
ಪರಿಶಿಷ್ಟ ಜಾತಿಗಳು (ಎಸ್‌ಸಿಗಳು) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿಗಳು) ಉಪ-ವರ್ಗಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆಗಸ್ಟ್ 1ರ ತೀರ್ಪಿನಲ್ಲಿ ಅನುಮತಿ ನೀಡಿದೆ. ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕು ಎಂದಿದೆ.
ಆದರೆ ಸುಪ್ರೀಂ ಕೋರ್ಟ್‌ನ ಈ ತೀರ್ಪಿಗೆ ದಲಿತ ಮತ್ತು ಆದಿವಾಸಿ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಭಾರತ್ ಬಂದ್‌ಗೆ ಕರೆ ನೀಡಿದೆ.
ಇದನ್ನು ಓದಿದ್ದೀರಾ? ಇಂದು ಭಾರತ್ ಬಂದ್‌ಗೆ ಕರೆ ಕೊಟ್ಟಿರುವ ರೈತ ಸಂಘಟನೆಗಳು: ಫಲ ನೀಡದ ಕೇಂದ್ರದೊಂದಿಗಿನ ಮಾತುಕತೆ
ಕರ್ನಾಟಕದಲ್ಲಿ ಪೂರ್ಣ ಪ್ರಮಾಣದಲ್ಲಿ ಬಂದ್ ಆಗದಿದ್ದರೂ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುವ ಸಾಧ್ಯತೆಯಿದೆ. ಭಾರತ್ ಬಂದ್ ವೇಳೆ ಹಿಂಸಾಚಾರವನ್ನು ತಡೆಯಲು ಈಗಾಗಲೇ ಪೊಲೀಸರು ಸಿದ್ಧತೆಯನ್ನು ನಡೆಸಿದ್ದಾರೆ ಎಂದು ಸುದ್ದಿ ಸಂಸ್ಥೆಗಳಿಗೆ ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಗಳು, ತುರ್ತು, ಆಂಬ್ಯುಲೆನ್ಸ್ ಸೇವೆಗಳು, ವೈದ್ಯಕೀಯ ಸೇವೆಗಳು, ಪೊಲೀಸ್ ಸೇವೆಗಳು ಎಂದಿನಂತೆ ಇರಲಿದೆ. ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಶಾಲಾ-ಕಾಲೇಜುಗಳು ಕೂಡಾ ತೆರೆದಿರಲಿದೆ ಎಂದು ವರದಿಯಾಗಿದೆ. ಪಶ್ಚಿಮ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಕಾವು ಹೆಚ್ಚಾಗಿರುವ ಸಾಧ್ಯತೆ ಹಿನ್ನೆಲೆ ಪೊಲೀಸರು ಅಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ.
VIDEO | #Bihar: Bhim Sena members block a road during 'Bharat Bandh' in Sheikhpura.
— Press Trust of India (@PTI_News) August 21, 2024
Dalit and Adivasi organisations have called for a 'Bharat Bandh' today (August 21) over their demand for stronger representation and protection for marginalised communities.#BharatBandh
(Full… pic.twitter.com/CBSlIk3s9n