ಒಳಮೀಸಲಾತಿಯಲ್ಲಿ ಕ್ರೀಮಿ ಲೇಯರ್ | ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ‘ಭಾರತ್ ಬಂದ್‌’ಗೆ ಬಿಎಸ್‌ಪಿ ಬೆಂಬಲ

Date:

Advertisements

ಪರಿಶಿಷ್ಟ ಜಾತಿಗಳ (ಎಸ್‌ಸಿ) ಉಪವರ್ಗೀಕರಣದ (ಒಳಮೀಓಸಲಾತಿ) ಕುರಿತು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ಪ್ರತಿಭಟಿಸಿ ಕೆಲವು ದಲಿತ ಮತ್ತು ಆದಿವಾಸಿ ಸಂಘಟನೆಗಳು ಕರೆ ಕೊಟ್ಟಿರುವ ಬುಧವಾರದ ಭಾರತ್‌ ಬಂದ್‌ಗೆ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಬೆಂಬಲ ಘೋಷಿಸಿದೆ.

ಮೀಸಲಾತಿಯನ್ನು ರದ್ದುಗೊಳಿಸಲು ಬಿಜೆಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿವೆ. ಈ ಪಕ್ಷಗಳು ಮತ್ತು ಇತರರು ಮೀಸಲಾತಿಯ ಅಗತ್ಯವನ್ನು ಅರ್ಥಮಾಡಿಕೊಳ್ಳಬೇಕು. ಮೀಸಲಾತಿಯ ವಿಚಾರದಲ್ಲಿ ಆಟವಾಡಬಾರದು ಎಂದು ಬಿಎಸ್‌ಪಿ ಹೇಳಿದೆ.

ಎಸ್‌ಸಿ/ಎಸ್‌ಟಿ ಸಮುದಾಯಗಳಲ್ಲಿ ಒಳಮೀಸಲಾತಿಗೆ ಅವಕಾಶ ನೀಡಿರುವ ಸುಪ್ರೀಂ ಕೋರ್ಟ್‌, ಒಳಮೀಸಲಾತಿಯಲ್ಲಿ ಕ್ರೀಮಿ ಲೇಯರ್ ಅಳವಡಿಸಿಕೊಳ್ಳಬೇಕೆಂದು ಆಗಸ್ಟ್‌ 1ರಂದು ನೀಡಿದ ತನ್ನ ತೀರ್ಪಿನಲ್ಲಿ ಹೇಳಿದೆ. ‘ಕ್ರೀಮಿ ಲೇಯರ್’ ಅಳವಡಿಕೆ ಬಗ್ಗೆ ಅಸಮಾಧಾನ ಹೊಂದಿರುವ 21 ಸಂಘಟನೆಗಳು ಆಗಸ್ಟ್‌ 21ರಂದು ‘ಭಾರತ್ ಬಂದ್‌’ಗೆ ಕರೆ ಕೊಟ್ಟಿವೆ. ಬಂದ್‌ಅನ್ನು ಬಿಎಸ್‌ಪಿ ಬೆಂಬಲಿಸಿದೆ. “ಬಿಜೆಪಿ ಮತ್ತು ಕಾಂಗ್ರೆಸ್‌ನಂತಹ ಪಕ್ಷಗಳ ಮೀಸಲಾತಿ ವಿರುದ್ಧದ ಪಿತೂರಿಯಿಂದ ಎಸ್‌ಸಿ/ಎಸ್‌ಟಿ ಸಮುದಾಯಗಳ ಉಪವರ್ಗೀಕರಣದಲ್ಲಿ ‘ಕ್ರೀಮಿ ಲೇಯರ್’ ಅಳವಡಿಕೆಯನ್ನು ಒಪ್ಪಿಕೊಳ್ಳುತ್ತಿವೆ” ಎಂದು ಹೇಳಿದೆ.

Advertisements

ಮೀಸಲಾತಿಯನ್ನು ನಿಷ್ಪರಿಣಾಮಕಾರಿಯಾಗಿ ಮಾಡಿ ಮತ್ತು ಅಂತಿಮವಾಗಿ ಕೊನೆಗೊಳಿಸುವುದು ಆ ಪಕ್ಷಗಳ ಉದ್ದೇಶವಾಗಿದೆ” ಎಂದು ಬಿಎಸ್‌ಪಿ ವರಿಷ್ಠೆ ಮಾಯಾವತಿ ಆರೋಪಿಸಿದ್ದಾರೆ.

“ಕ್ರೀಮಿ ಲೇಯರ್ ಅಳವಡಿಸದಂತೆ ಭಾರತ್ ಬಂದ್‌ನ ಅಂಗವಾಗಿ ಸರ್ಕಾರಕ್ಕೆ ಪ್ರತಿಭಟನಾಕಾರರು ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಲಿದ್ದಾರೆ. ಸಂವಿಧಾನ ತಿದ್ದುಪಡಿಯ ಮೂಲಕ ಮೀಸಲಾತಿಯಲ್ಲಿ ಮಾಡಲಾದ ಬದಲಾವಣೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

“ಎಸ್‌ಸಿ ಮತ್ತು ಎಸ್‌ಟಿಗಳ ಜೊತೆಗೆ ಒಬಿಸಿ ಸಮುದಾಯಕ್ಕೆ ನೀಡಿರುವ ಮೀಸಲಾತಿಯ ಸಾಂವಿಧಾನಿಕ ಹಕ್ಕು ಬಿ.ಆರ್ ಅಂಬೇಡ್ಕರ್ ಅವರ ನಿರಂತರ ಹೋರಾಟದ ಫಲವಾಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಮೀಸಲಾತಿಯ ಅಗತ್ಯತೆ ಮತ್ತು ಸೂಕ್ಷ್ಮತೆಯನ್ನು ಅರ್ಥಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಆಗಸ್ಟ್ 1ರ ಮಹತ್ವದ ತೀರ್ಪಿನಲ್ಲಿ, “ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಜಾತಿಗಳ ಉನ್ನತಿಗಾಗಿ ಎಸ್‌ಸಿ/ಎಸ್‌ಟಿ ಸಮುದಾಯಗಳೊಳಗೆ ಉಪ-ವರ್ಗೀಕರಣ ಮಾಡಲು ರಾಜ್ಯಗಳಿಗೆ ಸಂವಿಧಾನಾತ್ಮಕವಾಗಿ ಅಧಿಕಾರವಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X