ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ.
ಆಯನೂರು ಕಡೆಯಿಂದ ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್ಎಲ್ವಿ ಅಯ್ಯಂಗಾರ್ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ. ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸಿಲಿಂಡರ್ ಸ್ಫೋಟವಾಗಿರುವುದಾಗಿ ವರದಿಯಾಗಿದೆ.
ಸ್ಫೋಟಕ್ಕೆ ಬೇಕರಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಸ್ಪಷ್ಟವಾಗಿಲ್ಲ. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ.

