ದಸರಾ | ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ; ಆನೆಗಳ ಪಯಣಕ್ಕೆ ವಿಧ್ಯುಕ್ತ ಚಾಲನೆ

Date:

Advertisements

ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆಯ 9 ಆನೆಗಳಿಗೆ ಹುಣಸೂರು ಬಳಿಯ ವೀರನಹೊಸಹಳ್ಳಿಯಲ್ಲಿ ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪ, ಸಚಿವ ವೆಂಕಟೇಶ್ ಉಪಸ್ಥಿತಿಯಲ್ಲಿ ಬುಧವಾರ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಕಾಡಿನಿಂದ ನಾಡಿಗೆ ಆನೆಗಳ ಪಯಣಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯಿತು.

ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ದಸರಾದಲ್ಲಿ ಒಟ್ಟು 14 ಆನೆಗಳು ಭಾಗಿ

Advertisements

ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದೆ. ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ.

ಆಗಸ್ಟ್‌ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುತ್ತಿದೆ. ಆಗಸ್ಟ್ 21 ರಿಂದ 23ರ ವರೆಗೆ ಅಂದ್ರೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಲಿವೆ.

ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ

ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್‌ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರಲಿವೆ.

“ಈ ಬಾರಿಯೂ 58 ವರ್ಷ ವಯಸ್ಸಿನ ಅಭಿಮನ್ಯು ನಾಡದೇವಿ ಚಾಮುಂಡೇಶ್ವರಿ ವಿರಾಜಮಾನರಾದ ಚಿನ್ನದ ಅಂಬಾರಿ ಹೊರಲಿದ್ದಾನೆ. ಕಳೆದ ವರ್ಷ ನಿಶಾನೆ ಆನೆಯಾಗಿದ್ದ ಅರ್ಜುನ ಈ ಬಾರಿ ನಮ್ಮೊಂದಿಗಿಲ್ಲ ಎಂಬ ನೋವು ನಮಗಿದೆ” ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

“ಕಳೆದ ತಿಂಗಳು ನಾನು ಅರ್ಜುನ ಕಾಡಾನೆಯೊಂದಿಗೆ ಹೋರಾಡಿ ಮಡಿದ ಹಾಸನ ಜಿಲ್ಲೆ, ಯಸಳೂರು ಬಳಿ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ಅರ್ಜುನ ಆನೆ ಇದ್ದ ಆನೆ ಶಿಬಿರ ಬಳ್ಳೆಯಲ್ಲಿ ಕೂಡ ಒಂದು ಸ್ಮಾರಕ ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X