ಐಸಿಸಿ ನೂತನ ಟೆಸ್ಟ್ ಕ್ರಿಕೆಟ್ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 870 ಅಂಕಗಳೊಂದಿಗೆ ನಂಬರ್ ಒನ್ ಬೌಲರ್ ಆಗಿ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಬೌಲರ್ ಜೋಶ್ ಹೇಜಲ್‌ವುಡ್ 847 ರೇಟಿಂಗ್ ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಜಸ್ಪ್ರೀತ್ ಬುಮ್ರಾ ಮೂರನೇ ಸ್ಥಾನದಲ್ಲಿದ್ದು, 847 ರೇಟಿಂಗ್ ಅಂಕ ಹೊಂದಿದ್ದಾರೆ. ಆಸೀಸ್‌ನ ಪ್ಯಾಟ್ ಕಮ್ಮಿನ್ಸ್ 820 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಕಗಿಸೊ ರಬಾಡೊ 820 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.
ಆಲ್ರೌಂಡರ್ಗಳ ಶ್ರೇಯಾಂಕದಲ್ಲಿ ರವೀಂದ್ರ ಜಡೇಜಾ, 444 ರೇಟಿಂಗ್ ಅಂಕಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಎರಡನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್ 322 ರೇಟಿಂಗ್ ಅಂಕ ಹೊಂದಿದ್ದಾರೆ.
ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಇಂಗ್ಲೆಂಡ್‌ನ ದಿಗ್ಗಜ ಆಟಗಾರ ಜೋ ರೂಟ್ 872 ರೇಟಿಂಗ್ ಅಂಕಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 859 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್‌ಗೆ ವರ್ಣರಂಜಿತ ತೆರೆ: ಲಾಸ್ ಏಂಜಲೀಸ್‌ಗೆ ಧ್ವಜ ಹಸ್ತಾಂತರ
ಪಾಕಿಸ್ತಾನದ ಬಾಬರ್ ಆಝಂ 768 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಡೇರಿಲ್ ಮಿಚೆಲ್ 768 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 757 ರೇಟಿಂಗ್ ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ತಂಡಗಳ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ 124 ರೇಟಿಂಗ್ ಅಂಕಗಳೊಂದಿಗೆ ವಿಶ್ವದ ನಂಬರ್ ಒನ್ ತಂಡ ಎನಿಸಿಕೊಂಡಿದ್ದರೆ, ಭಾರತ ತಂಡ 120 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ 108 ರೇಟಿಂಗ್‌ನೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 104 ಅಂಕದೊಂದಿಗೆ ನಾಲ್ಕನೇ ಮತ್ತು ನ್ಯೂಜಿಲೆಂಡ್ 96 ರೇಟಿಂಗ್ ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.
