ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ; ಅಪ್ಪ, ಮಗನಿಗೆ ಜೈಲು ಶಿಕ್ಷೆ

Date:

Advertisements

ಬಾಲಕಿ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾಗಿದ್ದರಿಂದ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್(ವಿಶೇಷ ಪೋಕ್ಸೊ) ನ್ಯಾಯಾಲಯವು “ಅಪರಾಧಿಯಾದ ಮಗನಿಗೆ 30 ವರ್ಷ ಹಾಗೂ ಆತನ ತಂದೆಗೆ 5 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶಿಸಿದೆ.

ಜಿಲ್ಲೆಯ ಚಿತ್ತಾಪುರ ತಾಲೂಕಿನ ಆರೋಪಿಗಳಾದ ಸತೀಶ್ ಕಾಶಿ ಸೂರ್ಯಕಾಂತ(21) ಹಾಗೂ ಸೂರ್ಯಕಾಂತ ಕಾಶಿ(45) ಶಿಕ್ಷೆಗೆ ಒಳಗಾದವರು. ಬಾಲಕಿಯನ್ನು ಪ್ರೀತಿಸುವುದಾಗಿ ಹಿಂದೆ ಬಿದ್ದಿದ್ದ ಸತೀಶ್, 2022ರ ಮೇ 5ರಂದು ಆಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ. ಆಗ, ಬಾಲಕಿಯ ಕುಟುಂಬಸ್ಥರು ದೂರು ಕೊಡಲು ಮುಂದಾದರು. 18 ವರ್ಷ ತುಂಬಿದ ಬಳಿಕ ಮದುವೆಯಾಗುವುದಾಗಿ ಹೇಳಿದ ಅಪರಾಧಿ, ಬಾಲಕಿಯನ್ನು ತನ್ನ ಮನೆಯಲ್ಲಿ ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡಿದ್ದು, ಆಗಾಗ ಅತ್ಯಾಚಾರವನ್ನೂ ಎಸಗಿದ್ದ.

ಸತೀಶ್ ಕುಟುಂಬಸ್ಥರು ಬಾಲಕಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದರು. ಜತೆಗೆ ಸತೀಶ್ ತಂದೆ ಸೂರ್ಯಕಾಂತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಜೀವ ಬೆದರಿಕೆಯನ್ನೂ ಹಾಕಿದ್ದ. ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐಗಳಾದ ಶಿವಾನಂದ ಎನ್ ಅಂಬಿಗೇರ ಹಾಗೂ ಪ್ರಕಾಶ್ ಆರ್ ಯಾತನೂರ್ ಅವರು ತನಿಖೆ ನಡೆಸಿದ್ದರು. ವಿವಿಧ ಕಾಯ್ದೆಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ರಾಮನಗರ | ಡಿ ದೇವರಾಜ ಅರಸು ಜನ್ಮದಿನಾಚರಣೆ

ವಾದ-ಪ್ರತಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ(ವಿಶೇಷ ಪೋಕ್ಸೊ) ಎಫ್‌ಟಿಎಸ್‌ಸಿ-1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಸತೀಶ್‌ಗೆ ಪೋಕ್ಸೊ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ 30 ವರ್ಷ ಜೈಲು ಶಿಕ್ಷೆ ಮತ್ತು ₹20,000 ದಂಡ ಹಾಗೂ ಸೂರ್ಯಕಾಂತಗೆ 5 ವರ್ಷ ಜೈಲು ಶಿಕ್ಷೆ ಮತ್ತು 3,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ ತುಪ್ಪದ ಅವರು ವಾದ ಮಂಡಿಸಿದರು. ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹7 ಲಕ್ಷ ಪರಿಹಾರವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ವರದಿ : ವಾಲೆಂಟಿಯರ್‌ ಅನಂತ ದೇಶಪಾಂಡೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X