ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಪೇದೆ ಸಾಕು; ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು

Date:

Advertisements

ಹೆಚ್ ಡಿ ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ, ‘ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ’ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

“ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು. ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯವರೇ ಹೊರತು ನಾನಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ” ಎಂದರು.

Advertisements

“ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ” ಎಂದು ಹೇಳಿದರು.

“ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲಿ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಸಿಎಂ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು” ಎಂದು ಟೀಕಿಸಿದರು.

“ವಿಧಾನಸಭಾ ಅಧಿವೇಶನ ಸಂದರ್ಭ ದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು, ಆದರೆ ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು, ಅವುಗಳನ್ನು ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

ಸಿದ್ದರಾಮಯ್ಯನವರು ದಾಖಲಾತಿಗಳನ್ನು ತಿದ್ದಿದ್ದಾರೆ ಎಂದು ಕುಮಾರಸ್ವಾಮಿಯವರು ಆರೋಪಿಸಿರುವ ಬಗ್ಗೆ ಉತ್ತರಿಸಿ, “ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014 ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು , ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು. ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X