ರಾಷ್ಟ್ರಾದ್ಯಂತ ಭಾರತ ಏಕತಾ ಮಿಷನ್ ಭೀಮ್ ಆರ್ಮಿ ಕರೆ ನೀಡಿದ್ದ ಮೀಸಲಾತಿ ಉಳಿವಿಗಾಗಿ ಭಾರತ್ ಬಂದ್ ಕರೆಗೆ ಬೆಂಬಲ ಸೂಚಿಸಿ ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಯ ಸಮಗ್ರ ಅನುಷ್ಠಾನಕ್ಕಾಗಿ ಒತ್ತಾಯಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಸಮಗ್ರ ಮೀಸಲಾತಿ ಅನುಷ್ಠಾನಕ್ಕೆ ಭೀಮ್ ಆರ್ಮಿ, ಭಾರತ್ ಏಕತಾ ಮಿಷನ್ ದಾವಣಗೆರೆ ಜಿಲ್ಲಾ ಘಟಕ ಪ್ರತಿಭಟನೆಯನ್ನು ನೆಡೆಸಿತು.
ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಸೇರಿ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಿ ಪ್ರತಿಭಟನೆ ಘೋಷಣೆಗಳನ್ನು ಕೂಗಿ ಸಮಗ್ರ ಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಿದರು
ಜಿಲ್ಲಾಧ್ಯಕ್ಷ ಹಳೇ ಚಿಕ್ಕನಹಳ್ಳಿ ನಿಂಗಪ್ಪ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮುಂದಾಳತ್ವದಲ್ಲಿ ಭಾರತ ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳು ಮತ್ತು ಹಿಂದುಳಿದ ವರ್ಗಗಳಿಗೆ ಸಂವಿಧಾನದ 340ನೇ ವಿಧಿಯ ಅಡಿಯಲ್ಲಿ 15, 7.5 ಮತ್ತು 27 ಮೀಸಲಾತಿಯನ್ನು ಮಂಜೂರು ಮಾಡಲಾಗಿದ್ದು ಆದರೆ ಈವರೆಗೂ ಈ ವರ್ಗಗಳಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಸಮಗ್ರ ಮೀಸಲಾತಿಯನ್ನು ನೀಡಿಲ್ಲ ಎಂದು ಆರೋಪಿಸಿದರು.
ಸುಧೀರ್ಘ ವಿಚಾರಣೆಯ ನಂತರ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪರಿಶೀಲನೆ ನಡೆಸಿ ಈ ಜಾತಿಗಳಿಗೆ ಸಮಗ್ರ ಮೀಸಲಾತಿ ನೀಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ. ಸರ್ಕಾರ ಈ ಕೂಡಲೇ ಸಮಗ್ರವಾಗಿ ಮೀಸಲಾತಿ ಅನುಷ್ಠಾನವನ್ನು ತರಬೇಕು ಮತ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಿರ್ದಿಷ್ಟ ಮತ್ತು ಜಾತಿ ಸಮೀಕ್ಷೆ ನಡೆಸಬೇಕು, ಪರಿಶಿಷ್ಟ ಜಾತಿ, ಪಂಗಡಗಳಿಗೆ ಎಲ್ಲಾ ವಿಭಾಗಗಳಲ್ಲಿ ಮೀಸಲಾತಿ ಕೋಟಗಳನ್ನು ನೀಡಬೇಕು, ಖಾಸಗಿ ಸಂಸ್ಥೆಗಳಲ್ಲೂ ಮೀಸಲಾತಿ ವ್ಯವಸ್ಥೆ ಸೇರಿದಂತೆ ಮೀಸಲಾತಿಗೆ ಸಂಬಂಧಪಟ್ಟ ಎಲ್ಲಾ ಕ್ರಮಗಳನ್ನು ಕೈಗೊಂಡು ಸಮಗ್ರ ಮೀಸಲಾತಿಯ ಅನುಷ್ಠಾನವನ್ನು ಕೈಗೊಳ್ಳಬೇಕು ಎಂದರು.
ಇದನ್ನು ಓದಿದ್ದೀರಾ? ನಕಲಿ ದಾಖಲೆ ನೀಡಿ ರೇಷನ್ ಕಾರ್ಡ್ : ಬೆಳಗಾವಿ ಜಿಲ್ಲೆಯೊಂದರಲ್ಲೇ ₹1.89 ಕೋಟಿ ದಂಡ ವಸೂಲಿ!
ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ನಾಗರಾಜ್, ಗೌರವಾಧ್ಯಕ್ಷ ಮೈಲಾರಪ್ಪ, ಶಾಂತಪ್ಪ, ಪ್ರಧಾನ ಕಾರ್ಯದರ್ಶಿ ಬಸವರಾಜ್, ರಾಜು, ಧನಂಜಯ, ಸುರೇಶ್, ವಿಜಯ, ಮಾರುತಿ ಹಾಗೂ ಇನ್ನಿತರ ಡಿ ಭೀಮ್ ಆರ್ಮಿ ಕಾರ್ಯಕರ್ತರು ಪಾಲ್ಗೊಂಡಿದ್ದರು
