ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಆ.19ರಂದು ಸುರಿದ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕಳೆದ ಆಗಸ್ಟ್ 19ರಂದು ಮನೆಗಳಿಗೆ ಮಳೆ ನೀರು ನುಗ್ಗಿದ್ದ ಕೊರಟಗೆರೆ ಪಟ್ಟಣದ ಹೊಸ ಬಡಾವಣೆ ಪ್ರದೇಶ, ಮಳೆ ನೀರಿನಿಂದ ಹಾನಿಗೊಳಗಾದ ಪೈಪ್‌ಲೈನ್ ಕಾಮಗಾರಿ ವೀಕ್ಷಿಸಲು ಊರ್ಡಿಗೆರೆ ಕ್ರಾಸ್‌ಗೆ ಭೇಟಿ ನೀಡಿದರು.
ಚನ್ನಸಾಗರ ಗ್ರಾಮಕ್ಕೆ ಭೇಟಿ ನೀಡಿ ಜಯಮಂಗಲಿ ನದಿ ನೀರಿನ ಹರಿವನ್ನು ಪರಿಶೀಲಿಸಿದ ನಂತರ ತೂಬುಗಳಲ್ಲಿ ಕಟ್ಟಿಕೊಂಡಿರುವ ಕಸ-ಕಡ್ಡಿಗಳನ್ನು ಕೂಡಲೇ ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು ದಾರಿ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಾಗ ಚನ್ನಸಾಗರ ಗ್ರಾಮಕ್ಕೆ ನೀರು ನುಗ್ಗುವುದರಿಂದ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದಾಗ ಸ್ಪಂದಿಸಿದ ಸಚಿವರು, ಗ್ರಾಮವನ್ನು ಬೇರೆಡೆಗೆ ಸ್ಥಳಾಂತರಿಸಲು ಸರ್ಕಾರಿ ಜಮೀನನ್ನು ಗುರುತಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆಯಿಂದ ಮನೆ ಹಾನಿಗೊಳಗಾದ ಸಂತ್ರಸ್ತರಾದ ಕೊರಟಗೆರೆ ತಾಲ್ಲೂಕು ಸಿ.ಎನ್.ದುರ್ಗ ಹೋಬಳಿ ಅಜ್ಜೀಹಳ್ಳಿ ಗ್ರಾಮದ ಶಂಕ್ರಮ್ಮ ಕೋಂ.ಲೇಟ್ ಸಾಕನರಸಯ್ಯ ಹಾಗೂ ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಮದ ಕೆಂಪಯ್ಯ ಬಿನ್ ದೊಡ್ಡ ಹನುಮಂತಯ್ಯ ಅವರಿಗೆ ತಲಾ 50 ಸಾವಿರ ರೂ.ಗಳ ಪರಿಹಾರವನ್ನು ಸಚಿವರು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ತಹಶೀಲ್ದಾರ್ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
