ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್ ಜಾಮೀನು ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Date:

Advertisements

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿದ್ದ ಎನ್‌ ಮೋಹನ್‌ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ಆಗಸ್ಟ್ 20ರಂದು ನಿರಾಕರಿಸಿದೆ.

ಆರೋಪಿಗಳು ವಿಚಾರಣೆಗೆ ಸಹಕರಿಸುತ್ತಿದ್ದಾರೆ ಎಂಬುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಈ ಸಂಬಂಧ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಎತ್ತಿಹಿಡಿದಿದೆ.
ಪ್ರತಿವಾದಿ ಮೋಹನ್‌ ನಾಯಕ್‌ ವಿಚಾರಣೆ ಮುಂದುವರೆಯಲು ವಿಚಾರಣಾ ನ್ಯಾಯಾಲಯದೊಂದಿಗೆ ಸಹಕರಿಸುತ್ತಿದ್ದಾರೆ. ಅವರು ಪ್ರಕರಣ ಮುಂದೂಡುವಂತೆ ಎಲ್ಲೂ ಕೋರಿಲ್ಲ. ಅಲ್ಲದೆ, ಅವರು 18-7-2018 ರಿಂದ ಬಂಧನದಲ್ಲಿದ್ದು ಕರ್ನಾಟಕ ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸಲು ತಾನು ಇಚ್ಛಿಸುವುದಿಲ್ಲ ಎಂದು ತನ್ನ ಅದೇಶದಲ್ಲಿ ಹೇಳಿದ ಸುಪ್ರೀಂ ಕೋರ್ಟ್‌ ವಿಶೇಷ ಅನುಮತಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

ವಿಚಾರಣೆಗೆ ಸಾಕಷ್ಟು ಸಮಯ ಹಿಡಿಯಬಹುದು ಎಂಬ ಕಾರಣಕ್ಜೆ ಕರ್ನಾಟಕ ಹೈಕೋರ್ಟ್ 2023ರ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಗೌರಿ ಅವರ ಸಹೋದರಿ ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಮಂಗಳವಾರ ನೀಡಿರುವ ಆದೇಶದಲ್ಲಿ ರಾಜ್ಯ ಸರ್ಕಾರದ ಮೇಲ್ಮನವಿಯನ್ನೂ ವಜಾಗೊಳಿಸಲಾಗಿದೆ.

Advertisements

ಸುಮಾರು 100 ಸಾಕ್ಷಿಗಳ ವಿಚಾರಣೆ ಬಾಕಿ ಇದೆ ಎಂದು ಕರ್ನಾಟಕ ಸರ್ಕಾರದ ಪರ ವಕೀಲರು ತಿಳಿಸಿದ್ದರು. ಮೇಲ್ಮನವಿಗಳನ್ನು ಪರಿಗಣಿಸಲು ನಿರಾಕರಿಸಿದ ಪೀಠ ಆರೋಪಿಯು ಯಾವುದೇ ಜಾಮೀನು ಷರತ್ತು ಉಲ್ಲಂಘಿಸಿದ್ದರೆ ಅಥವಾ ವಿಚಾರಣೆ ವಿಳಂಬಗೊಳಿಸಿದ್ದರೆ ಮಾತ್ರ ಜಾಮೀನು ರದ್ದುಗೊಳಿಸುವಂತೆ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಕಕ್ಷಿದಾರರಿಗೆ ಸ್ವಾತಂತ್ರ್ಯವಿದೆ ಎಂದಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರು ಸಂವಿಧಾನ ರಕ್ಷಿಸಬೇಕೇ ಅಥವಾ ತಮ್ಮ ಒಡೆಯರ ಅಡಿಯಾಳಾಗಬೇಕೇ?

2017ರ ಸೆಪ್ಟೆಂಬರ್‌ 5ರಂದು ಗೌರಿ ಲಂಕೇಶ್‌ ಅವರನ್ನು ಗುಂಡು ಹಾರಿಸಿ ಕೊಲ್ಲಲಾಗಿತ್ತು. ಡಿಸೆಂಬರ್ 7, 2023 ರಂದು, ಕರ್ನಾಟಕ ಹೈಕೋರ್ಟ್ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಮೋಹನ್ ನಾಯಕ್‌ಗೆ ಜಾಮೀನು ನೀಡಿತ್ತು. ಪ್ರಕರಣದಲ್ಲಿ ಜಾಮೀನು ದೊರೆತ ಮೊದಲ ಆರೋಪಿ ಮೋಹನ್‌ ಆಗಿದ್ದರು.

ಈ ವರ್ಷ ಜುಲೈನಲ್ಲಿ ಪ್ರಕರಣದಲ್ಲಿ ಆರೋಪಿಗಳಾದ ಅಮಿತ್‌ ದಿಗ್ವೇಕರ್‌, ಕೆ ಟಿ ನವೀನ್‌ ಕುಮಾರ್ ಹಾಗೂ ಎಚ್ ಎಲ್‌ ಸುರೇಶ್‌ ಅವರಿಗೆ ಜಾಮೀನು ದೊರೆತಿತ್ತು.

ಕವಿತಾ ಲಂಕೇಶ್ ಪರ ವಕೀಲರಾದ ರೋಹನ್ ಶರ್ಮಾ, ಕರಿಷ್ಮಾ ಮಾರಿಯಾ, ಪೂಜಾ ಬಿ ಮೆಹ್ತಾ, ಯಶ್ ಎಸ್ ವಿಜಯ್ ಮತ್ತು ರಶ್ಮಿ ಸಿಂಗ್ ಅವರೊಂದಿಗೆ ಹಿರಿಯ ವಕೀಲರಾದ ಹುಝೆಫಾ ಅಹ್ಮದಿ ಮತ್ತು ಅಪರ್ಣಾ ಭಟ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.

ಕರ್ನಾಟಕ ಸರ್ಕಾರವನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆವಿಷ್ಕರ್ ಸಿಂಘ್ವಿ ಮತ್ತು ವಕೀಲ ವಿಎನ್ ರಘುಪತಿ, ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಪ್ರತಿನಿಧಿಸಿದ್ದರು.

ಮೋಹನ್ ನಾಯಕ್ ಪರ ವಕೀಲರಾದ ಗೌತಮ್ ಎಸ್ ಭಾರದ್ವಾಜ್, ಅಶ್ವಿನ್ ಕುಮಾರ್ ಡಿಎಸ್, ಸುರ್ಭಿ ಮೆಹ್ತಾ ಮತ್ತು ಇಶಾನ್ ರಾಯ್ ಚೌಧರಿ ವಕಾಲತ್ತು ವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X