ಆ. 27ಕ್ಕೆ ತರಾತುರಿಯಲ್ಲಿ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಿಗದಿ; ಅಭ್ಯರ್ಥಿಗಳ ಆಕ್ರೋಶ

Date:

Advertisements

ಕೆಎಎಸ್ ಪೂರ್ವಭಾವಿ ಪರೀಕ್ಷೆ ಆ.27ಕ್ಕೆ ನಿಗದಿ ಪಡಿಸಿದ್ದಕ್ಕೆ ಅಭ್ಯರ್ಥಿಗಳು ಕೆಪಿಎಸ್​ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತರಾತುರಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಕೆಪಿಎಸ್​ಸಿ ಕಸರತ್ತು ನಡೆಸುತ್ತಿದೆ. ಕೆಪಿಎಸ್​ಸಿ ನಿರ್ಧಾರ ಅಭ್ಯರ್ಥಿಗಳ ಪಾಲಿಗೆ ಸಂಕಷ್ಟ ತಂದೊಡ್ಡಿದೆ ಎಂದು ಅಭ್ಯರ್ಥಿಗಳು ಕಿಡಿಕಾರಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ ಭ್ರಷ್ಟಾಚಾರದ ಕೂಪವಾಗಿದೆ ಎಂದು ಪರಿಕ್ಷಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕೆಎಎಸ್ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 27ರ ಮಂಗಳವಾರ ನಡೆಸಲಿದೆ. 384 ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಸುಮಾರು 2,10,910 ಅಭ್ಯರ್ಥಿಗಳು ಬರೆಯಲಿದ್ದಾರೆ. ಆದರೆ ತರಾತುರಿಯಲ್ಲಿ ದಿನಾಂಕ ಘೋಷಣೆ ಮಾಡಲಾಗಿದೆ ಎಂದು ಅಭ್ಯರ್ಥಿಗಳು ಕೆಂಡಕಾರಿದ್ದಾರೆ. ಈ ಮೊದಲು ಆಗಸ್ಟ್​ 25ಕ್ಕೆ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿತ್ತು. ಆದರೆ ಆ.25ಕ್ಕೆ ಐಪಿಬಿಎಸ್ ಪರೀಕ್ಷೆ ಇರುವ ಕಾರಣ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರು ಸಂವಿಧಾನ ರಕ್ಷಿಸಬೇಕೇ ಅಥವಾ ತಮ್ಮ ಒಡೆಯರ ಅಡಿಯಾಳಾಗಬೇಕೇ?

Advertisements

ಸಿಎಂ ಸಿದ್ದರಾಮಯ್ಯನವರ ಸೂಚನೆಯಂತೆ ಆ.27ಕ್ಕೆ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಿಗದಿ ಮಾಡಲಾಗಿದೆ. ಬದಲಾವಣೆ ಮಾಡಿದ ದಿನಾಂಕದಿಂದಲೂ ಅಭ್ಯರ್ಥಿಗಳಿಗೆ ಸಮಸ್ಯೆ ಎದುರಾಗಿದೆ. ರಜಾ ದಿನದಲ್ಲಿ ಪೂರ್ವಭಾವಿ ಪರೀಕ್ಷೆ ನಡೆಸಲು ಅಭ್ಯರ್ಥಿಗಳು ಮನವಿ ಮಾಡಿದ್ದಾರೆ. ಮಂಗಳವಾರ ಖಾಸಗಿ/ಎಂಎನ್​ಸಿ ಕಂಪನಿಯವರಿಗೆ ರಜೆ ಇರಲ್ಲ. ಅಂಥ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ರೈಟರ್ ಸಿಗುವುದಿಲ್ಲ. ಹೀಗಾಗಿ ರಜೆ ದಿನಗಳನ್ನು ನೋಡಿಕೊಂಡು ಪರೀಕ್ಷೆಗೆ ದಿನಾಂಕ ನಿಗದಿ ಮಾಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಜೊತೆಗೆ ಬೆಂಗಳೂರಿನ ಅಭ್ಯರ್ಥಿಗಳಿಗೆ ಚಿತ್ರದುರ್ಗ ಪರೀಕ್ಷಾ ಸೆಂಟರ್​, ಬೆಳಗಾವಿ ಅಭ್ಯರ್ಥಿಗಳಿಗೆ ಮೈಸೂರು ಕೇಂದ್ರ ಹಾಕಿದ್ದಾರೆ. 200-300 ಕಿಲೋ ಮೀಟರ್​ ದೂರದ ಕೇಂದ್ರ ನಿಗದಿಪಡಿಸಲಾಗಿದೆ. ಹೀಗೆ ಮಾಡಿದರೆ ನಾವು ಹೇಗೆ ಓಡಾಡಬೇಕು ಎಂದು ಅಭ್ಯರ್ಥಿಗಳು ಅಳಲು ತೋಡಿಕೊಂಡಿದ್ದಾರೆ. ಇನ್ನು ತರಾತುರಿಯಲ್ಲಿ ಕೆಎಎಸ್​ ಪೂರ್ವಭಾವಿ ಪರೀಕ್ಷೆ ನಡೆಸ್ತಿರುವ ಆರೋಪ ಕೇಳಿ ಬಂದಿದೆ.

ಆಗಸ್ಟ್ 27ರ ಮಂಗಳವಾರ ಎರಡು ಪತ್ರಿಕೆಗಳ ಪರೀಕ್ಷೆಗಳನ್ನು ಒಂದೇ ದಿನ ನಡೆಸಲಾಗುತ್ತದೆ. ಬೆಳಗ್ಗೆ 10 ರಿಂದ 12 ಗಂಟೆಯ ತನಕ ಪತ್ರಿಕೆ-1, ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ಪತ್ರಿಕೆ-2ರ ಪರೀಕ್ಷೆಗಳು ನಿಗದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X