ಚಿಕ್ಕಬಳ್ಳಾಪುರ | ʼರೈತ ಸಮೃದ್ಧಿ ಯೋಜನೆʼ ಸದುಪಯೋಗಪಡಿಸಿಕೊಳ್ಳಿ : ಕೃಷಿ ಸಚಿವ ಚಲುವರಾಯಸ್ವಾಮಿ

Date:

Advertisements

ಸಮಗ್ರ ಕೃಷಿಯನ್ನು ಉತ್ತೇಜಿಸಿವು ನಿಟ್ಟಿನಲ್ಲಿ ರಾಜ್ಯ ಸರಕಾರ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೆ ತಂದಿದ್ದು, ರೈತರು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಮಗ್ರ ಸಾವಯವ ಕೃಷಿ ಅಳವಡಿಕೆಯ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಪ್ರಗತಿಪರ ಮಹಿಳೆ ಗೌರಮ್ಮ ಅವರ ಕೃಷಿ ಭೂಮಿಗೆ ಬುಧವಾರ ಭೇಟಿ ನೀಡಿ ಸಂವಾದ ನಡೆಸಿದ ಸಚಿವರು, ರೈತರು ಕ್ಷಣಿಕ ಇಳುವರಿಗಾಗಿ ರಾಸಾಯನಿಕ ಗೊಬ್ಬರ ಬಳಕೆ ಮಾಡುತ್ತಿದ್ದಾರೆ. ಇದರಿಂದ ಮಣ್ಣಿನ ಫಲವತ್ತತೆ ಕುಂಠಿತವಾಗಲಿದ್ದು, ರೈತರು ಸಮಗ್ರ ಸಾವಯನ ಕೃಷಿಯತ್ತ ಮುಖ ಮಾಡಬೇಕು ಎಂದರು.

ಮಣ್ಣಿನ ಆರೋಗ್ಯಕ್ಕೆ ಮಾರಕವಾದ ರಸಗೊಬ್ಬರಗಳನ್ನು ತ್ಯಜಿಸಿ, ರೈತರು ಸಾವಯವ ಗೊಬ್ಬರ ಬಳಕೆ ಮಾಡುವ ಮೂಲಕ ಸಾವಯವ ಕೃಷಿಯತ್ತ ಒಲವು ತೋರಬೇಕು. ಸಾವಯವ ಕೃಷಿಯಿಂದ ಬೆಳೆದ ಬೆಳೆಗಳು ಮಣ್ಣಿನ ಆರೋಗ್ಯಕ್ಕೆ ಮಾತ್ರವಲ್ಲ, ಮನುಷ್ಯನ ಆರೋಗ್ಯಕ್ಕೂ ಪೂರಕವಾಗಿರುತ್ತವೆ. ರಸಗೊಬ್ಬರಗಳು ತಾತ್ಕಾಲಿಕ ಇಳುವರಿಗೆ ಕಾರಣವಾಗಿರಬಹುದಷ್ಟೇ. ಆದರೆ ಭವಿಷ್ಯದಲ್ಲಿ ದೀರ್ಘಕಾಲೀನ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಈ ಹಿನ್ನೆಲೆಯಲ್ಲಿ ರೈತರು ರಸಗೊಬ್ಬರಗಳಿಗೆ ಹೊರತಾದ ಸಾವಯವ ಗೊಬ್ಬರಕ್ಕೆ ಆದ್ಯತೆ ನೀಡುವತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

Advertisements

ಸಾವಯವ ಕೃಷಿಯಲ್ಲಿ ತೊಡಗಿರುವ ಪ್ರಗತಿಪರ ರೈತ ಮಹಿಳೆ ಗೌರಮ್ಮ ಬಹುಬೆಳೆಗಳನ್ನು ಬೆಳೆದು ಮಾದರಿ ರೈತರಾಗಿದ್ದಾರೆ. ಕೊತ್ತನೂರು ಗ್ರಾಮದ ಗೌರಮ್ಮ ಅವರು ಕೇವಲ 2 ಎಕರೆ ಸ್ವಂತ ಜಮೀನಿನಲ್ಲಿ ವಿವಿಧ ಬಗೆಯ ಬೆಳೆಗಳನ್ನು ಸಾವಯವ ಕೃಷಿಯಲ್ಲಿ ಮಹತ್ತರ ಹೆಸರು ಗಳಿಸಿ ನೆಮ್ಮದಿಯ ಜೀವನವನ್ನು ರೂಪಿಸಿಕೊಂಡು ಇತರರಿಗೆ ಮಾದರಿಯ ಮಹಿಳೆಯಾಗಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಚಲುವರಾಯಸ್ವಾಮಿ 2 2
ಕೃಷಿ ಸಚಿವ ಚಲುವರಾಯಸ್ವಾಮಿ ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸ ಕೈಗೊಂಡು ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಚಿಕ್ಕಬಳ್ಳಾಪುರ ನಗರ ಶಾಸಕ ಪ್ರದೀಪ್‌ ಈಶ್ವರ್‌ ಮಾನತಾಡಿ, ಸಮಗ್ರ ಸಾವಯವ ಕೃಷಿಯಿಂದ ಹೆಚ್ಚಿನ ಇಳುವರಿ ಪಡೆಯಬಹುದು ಎಂಬುದನ್ನು ಗೌರಮ್ಮ ಅವರು ಸಾಧಿಸಿ ತೋರಿಸಿದ್ದಾರೆ. ಇಂತಹ ಪ್ರಗತಿಪರ ರೈತ ಮಹಿಳೆಗೆ ರಾಜ್ಯ ಮಟ್ಟದಲ್ಲಿ ಗುರುತಿಸಲು ಅವಕಾಶ ನೀಡುವಂತೆ ಕೃಷಿ ಸಚಿವರಲ್ಲಿ ಮನವಿ ಮಾಡಿದರು.

ಸಾವಯವ ಕೃಷಿ ಮಹಿಳೆ ಗೌರಮ್ಮ ಮಾತನಾಡಿ, ಮೊದಲೆಲ್ಲ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದಾಗ ಗಾಯವಾದರೆ ಮಣ್ಣನ್ನು ಔಷಧಿಯಾಗಿ ಬಳಸುತ್ತಿದ್ದೆವು. ಮಣ್ಣಿನಲ್ಲಿ ಔಷಧಿಯ ಗುಣಗಳಿಂದ ಗಾಯವು ವಾಸಿಯಾಗುತಿತ್ತು. ಪ್ರಸ್ತುತ ದಿನಮಾನಗಳಲ್ಲಿ ರಸಗೊಬ್ಬರ ಮತ್ತು ಕಳೆನಾಶಕ ಔಷಧಿಗಳನ್ನು ಬಳಸುವುದರಿಂದ ಮಣ್ಣಿನಲ್ಲಿ ಔಷಧಿಯ ಗುಣಗಳಿಗೆ ಬದಲಾಗಿ ರಸಾಯನಿಕಗಳು ಸೇರ್ಪಡೆಯಾಗಿವೆ. ಪ್ರತಿಯೊಂದಕ್ಕೂ ಆಸ್ಪತ್ರೆಯ ಚಿಕಿತ್ಸೆಯನ್ನು ಜನರು ಅವಲಂಭಿಸುವಂತಾಗಿದೆ. ಈ ಪರಿಸ್ಥಿತಿಯು ಹೀಗೆಯೇ ಮುಂದುವರೆಯಬಾರದು. ಕೃಷಿ ಇಲಾಖೆಯಿಂದ ನಾವು ಹೆಚ್ಚು ಸೌಲಭ್ಯಗಳನ್ನು ಪಡೆದುಕೊಂಡಿದ್ದೇವೆ. ಸಾವಯವ ಕೃಷಿಯಿಂದ ಹೆಚ್ಚಿನ ಇಳುವರಿಯನ್ನು ಪಡೆಯಲು ಸಾಧ್ಯವಿದೆ. ಕೃಷಿ ಇಲಾಖೆಯ ಹಲವು ತರಬೇತಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ನಾನು ಸಾವಯವ ಕೃಷಿಯಲ್ಲಿ ಅನುಭವವನ್ನು ತೊಡಗಿಸಿಕೊಂಡು ಅಧಿಕ ಆದಾಯ ಗಳಿಸುತ್ತಿದ್ದೇನೆ. ಭೂಮಿಗೆ ರಾಸಾಯನಿಕ ಗೊಬ್ಬರಗಳನ್ನು ಸಿಂಪಡನೆ ಮಾಡಿದರೆ ಭೂಮಿಯ ಫಲವತ್ತತೆಯನ್ನು ಕಳೆದುಕೊಳ್ಳುತ್ತದೆ. ಪ್ರತಿಯೊಬ್ಬರು ಮೊದಲು ಮಣ್ಣಿನ ಆರೋಗ್ಯ ಕಾಪಾಡಿ ಭೂಮಿಯನ್ನು ಸರಿಯಾಗಿ ಕಾಪಾಡಿಕೊಳ್ಳಬೇಕು. ತಮ್ಮ ಸ್ವಂತ ಮಕ್ಕಳ ರೀತಿ ಭೂಮಿಯನ್ನು ಕಾಪಾಡಿಕೊಂಡರೆ ನಾವು ಉತ್ತಮ ಬೆಳೆಗಳನ್ನು ಬೆಳೆಯಲು ಸಾಧ್ಯವಾಗಲಿದೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.

ಗೌರಮ್ಮ ನಂಜುಂಡಯ್ಯ ಅವರ ಜಮೀನು ಪರಿಶೀಲನೆ ಮುಗಿಸಿದ ಸಚಿವರು, ಚಿಕ್ಕಬಳ್ಳಾಪುರ ತಾಲ್ಲೂಕಿನ ಬನ್ನಿಕುಪ್ಪೆ ಗ್ರಾಮದ ನರಸಮ್ಮ, ಯಲುವಹಳ್ಳಿ ಗ್ರಾಮದ ಮುನಿಶಾಮಪ್ಪ ಅವರ ಕೃಷಿ ತಾಕುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ನೇರವಾಗಿ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣಕ್ಕೆ ತೆರಳಿ ಬೆಂಗಳೂರು ಕಂದಾಯ ವಿಭಾಗದ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಮುಖ್ಯ ನಿರ್ಧಾರಗಳಿಂದ ಹಿಂದೆ ಸರಿದ ಮೋದಿ, ಇದು ಪ್ರಜಾಸತ್ತೆಯ ಗೆಲುವು

ಕೃಷಿ ಸಚಿವರ ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸದ ವೇಳೆ ಕೃಷಿ ಇಲಾಖೆ ಆಯುಕ್ತ ವೈ.ಎಸ್ ಪಾಟೀಲ್, ಜಲಾನಯನ ಇಲಾಖೆ ಆಯುಕ್ತ ಮಹೇಶ್ ಶಿರೂರು, ನಿರ್ದೇಶಕ ಪದ್ಮಯ್ಯ ನಾಯಕ್, ಕೃಷಿ ನಿರ್ದೇಶಕ ಡಾ.ಜಿ.ಟಿ.ಪುತ್ರ, ಸಾವಯವ ಕೃಷಿ ಅಪರ ಕೃಷಿ ನಿರ್ದೇಶಕ ವೆಂಕಟರೆಡ್ಡಿ ಜೆ ಪಾಟೀಲ್, ಕೃಷಿ ಇಲಾಖೆ ಉಪ ಕಾರ್ಯದರ್ಶಿ ಆರ್. ಮಹೇಶ್, ಚಿಕ್ಕಬಳ್ಳಾಪುರ ಅಪರ ಜಿಲ್ಲಾಧಿಕಾರಿ ಡಾ.ಎನ್‌.ಭಾಸ್ಕರ್‌, ಉಪ ವಿಭಾಗಾಧಿಕಾರಿ ಅಪೂರ್ವ ಬಿದರಿ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಜಾವಿದಾ ನಾಸೀಮಾ ಖಾನಂ, ಕೃಷಿ ಉಪನಿರ್ದೇಶಕ ಚಂದ್ರಕುಮಾರ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೇಶವರೆಡ್ಡಿ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜಿ.ಪಂ. ಮಾಜಿ ಸದಸ್ಯ ಕೆ.ಎಂ.ಮುನೇಗೌಡ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X