ಮುಡಾ ಪ್ರಕರಣದ ಸತ್ಯ ಹೊರಗೆ ಬಂದರೆ ದೊಡ್ಡ ತಿಮಿಂಗಿಲಗಳು ಬೆಳಕಿಗೆ ಬರುತ್ತವೆ: ಆರ್‌.ಅಶೋಕ್

Date:

Advertisements

‌ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಮಂಡ್ಯದಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ‌ ಭಾಗಿಯಾಗಿ ಮಾತನಾಡಿದ ಅವರು, “ಹಗರಣದಲ್ಲಿ ಸಿಲುಕಿದಾಗ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿ ನೆನಪಾಗುತ್ತದೆ. ಇವರು 14 ಸೈಟು ನುಂಗಿದ ಕೂಡಲೇ ಹಿಂಬಾಲಕರು ನೂರಾರು ಸೈಟುಗಳನ್ನು ನುಂಗಿದ್ದಾರೆ. ಇವರದ್ದೇ ಹಿಂಬಾಲಕರಾದ ಮರಿಗೌಡರೇ ಪತ್ರ ಬರೆದು ಅಕ್ರಮವಾಗಿದೆ ಎಂದು ಹೇಳಿದ್ದರು. ಅದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಆರ್‌ಟಿಐ ಮೂಲಕ ಹೊರತೆಗೆದಾಗ ಎಲ್ಲವೂ ಬಯಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಒಂದೂ ಸೈಟು ಅಕ್ರಮವಾಗಿ ಪಡೆದಿಲ್ಲ ಎಂದು ಹೇಳಿದ್ದಾರೆ” ಎಂದರು.

“ಈಗ ವೈಟ್ನರ್‌ ಅಕ್ರಮ ಬಯಲಾಗಿದೆ. ದಾಖಲೆಗಳಲ್ಲಿ ವೈಟ್ನರ್‌ ಹಾಕಿ ಕೆಲವು ಅಂಶಗಳನ್ನು ಮರೆಮಾಚಲಾಗಿದೆ. ಏನಾದರೂ ತಪ್ಪಾದಾಗ ಅದರ ಮೇಲೆ ಪೆನ್‌ನಲ್ಲಿ ಗೆರೆ ಎಳೆದರೆ ಸಾಕಿತ್ತು. ಆದರೆ ವಿಷಯವನ್ನು ಮುಚ್ಚಿಹಾಕಲು ವೈಟ್‌ನರ್‌ ಬಳಸಿದ್ದಾರೆ. ವಿಜಯನಗರದಲ್ಲೇ ನಿವೇಶನ ಬೇಕು ಎಂದು ಸಿಎಂ ಪತ್ನಿ ಬರೆದಿದ್ದಾರೆ. ಅದಕ್ಕೆ ವೈಟ್ನರ್‌ ಹಚ್ಚಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದಾಖಲೆ ತಿದ್ದಿದ್ದಾರೆ” ಎಂದು ದೂರಿದರು.

Advertisements

ಜೈಲಿಗೆ ಹಾಕಿ ಎಂದಿಲ್ಲ

“ರಾಜ್ಯಪಾಲರು ದೂರನ್ನು ಆಧರಿಸಿ ತನಿಖೆಗೆ ಅವಕಾಶ ನೀಡಿದ್ದಾರೆಯೇ ಹೊರತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಿಲ್ಲ. ತನಿಖೆ ಮಾಡಿ ಎಂದಿದ್ದಕ್ಕೆ ಕಾಂಗ್ರೆಸ್‌ ನಾಯಕರು ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪ್ರಮಾಣ ವಚನ ಬೋಧಿಸಿದ್ದೇ ರಾಜ್ಯಪಾಲರು. ಅಂತಹವರು ತನಿಖೆ ಮಾಡಿ ಎಂದಿದ್ದನ್ನು ವಿರೋಧಿಸಿದರೆ ಅದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಅದು ತುಘಲಕ್‌ ದರ್ಬಾರ್‌ ಆಗುತ್ತದೆ. ಸಾಂವಿಧಾನಿಕವಾಗಿ ದೊಡ್ಡ ಹುದ್ದೆಯಲ್ಲಿರುವವರಿಗೆ ಕೀಳು ಮಾತುಗಳಿಂದ ನಿಂದಿಸುವುದು ಅಕ್ಷಮ್ಯ ಅಪರಾಧ. ಇದು ದಲಿತರಿಗೆ ಮಾಡುವ ಅಪಮಾನ. ಇದಕ್ಕಾಗಿ ಕಾಂಗ್ರೆಸ್‌ ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದರು.

“ಬಿಜೆಪಿ ಸರ್ಕಾರ 40% ಕಮಿಶನ್‌ ಪಡೆದಿದೆ ಎಂದು ಕಾಂಗ್ರೆಸ್‌ ಸುಳ್ಳು ಆರೋಪ ಮಾಡಿತ್ತು. ಅದಕ್ಕಾಗಿ ಪ್ರಕರಣ ದಾಖಲಿಸಿದ್ದು, ಅದರ ಜಾಮೀನಿನ ಮೇಲೆ ಕಾಂಗ್ರೆಸ್‌ ನಾಯಕರು ಹೊರಗೆ ಓಡಾಡುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕುಮಾರಿ ಶೋಭಕ್ಕ ಹೇಳಿದ್ದಾರೆ ಮುಡಾ ನುಂಗಿದವರಲ್ಲಿ ನಿಮ್ಮ ಪಕ್ಷದವರು ಮತ್ತು ನಿಮ್ಮ ದೋಸ್ತಿ ಪಕ್ಷದವರೂ ಸಹ ಇದ್ದಾರಂತೆ,, ನಿಮ್ಮ ಆವೇಶ ನೋಡಿದ್ರೆ ಎಲ್ಲಿ ನಿಮ್ಮ ಹೆಸರೂ ಎಲ್ಲೋ ಲಿಸ್ಟ್ ನಲ್ಲಿ ಇದಿಯಾಂತ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X