ಕಲಬುರಗಿ | ನಾಗಾವಿ, ಕಾಳಗಿ ಸಂರಕ್ಷಣೆಗೆ ಕ್ರಮ; ಪ್ರವಾಸಿಗರಿಗೆ ಸೌಲಭ್ಯ: ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ಕಲಬುರಗಿ ಜಿಲ್ಲೆಯ ನಾಗಾವಿ ಮತ್ತು ಕಾಳಗಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವುದರೊಂದಿಗೆ ಈ ಎರಡು ಸ್ಥಳಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಲಬುರಗಿ ಜಿಲ್ಲೆಯ ನಾಗವಿ, ಸನ್ನತಿ, ಕಾಳಗಿ, ಮಲ್ಖೇಡ್‌, ಶಹಬಾದ್‌, ಫಿರೋಜಾಬಾದ್‌ ಹಂಪಾಪುರ, ಕನಗನಹಳ್ಳಿ ಐತಿಹಾಸಿಕ ಸ್ಮಾರಕಗಳನ್ನು ಹೊಂದಿದೆಯೆಂದು ಹೇಳಿದರು. ಅಲ್ಲದೇ, ಈ ಸ್ಮಾರಕಗಳನ್ನು ಮರಳಿ ಹಿಂದಿನ ರೂಪಕ್ಕೆ ತರುವುದರೊಂದಿಗೆ ಮುಂದಿನ ಪೀಳಿಗೆಗಾಗಿ ಈ ಸ್ಥಳಗಳನ್ನು ಸಂರಕ್ಷಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಲಬುರಗಿ 13

ಇತಿಹಾಸದ ಬಗ್ಗೆ ಕುತೂಹಲ ಇರುವವರಿಗೆ ಇಲ್ಲಿನ ಐತಿಹಾಸಿಕ ಮಹತ್ವವನ್ನು ದಾಖಲೆ ಮಾಡಲಾಗುವುದು ಹಾಗೂ ಪ್ರವಾಸೋದ್ಯಮ ದೃಷ್ಟಿಯಂದ ರಸ್ತೆ, ನೀರು, ಶೌಚಾಲಯ ಮತ್ತಿತರ ಸೌಲಭ್ಯಗಳನ್ನು ರೂಪಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

Advertisements

ಕಾಳಗಿಯಲ್ಲಿನ ನರಸಿಂಗಸ್ವಾಮಿ, ಸೂರ್ಯನಾರಾಯಣಸ್ವಾಮಿ ಹಾಗೂ ಕಾಳೇಶ್ವರ ದೇಗುಲಗಳು ಐತಿಹಾಸಿಕ ಮಹತ್ವವನ್ನು ಹೊಂದಿದ್ದು, ಸಾವಿರಾರು ಮಂದಿ ಈ ದೇಗುಲಗಳಿಗೆ ಭೇಟಿ ನೀಡುತ್ತಾರೆ. ಈ ಸ್ಥಳಗಳನ್ನು ರಕ್ಷಣೆ ಮಾಡಿ, ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.

ಇದನ್ನು ಓದಿದ್ದೀರಾ? ತಾಳಿಕೋಟೆ | ಅಧಿಕಾರಿಗಳ ಕಿರುಕುಳ ಆರೋಪ: ಸ್ಟಾಫ್ ನರ್ಸ್‌ ಆಗಿದ್ದ ದಲಿತ ಯುವಕ ಆತ್ಮಹತ್ಯೆ

ಹೊಳಕುಂಡದ ಬಳಿ 28 ಎಕರೆ ವ್ಯಾಪ್ತಿಯಲ್ಲಿರುವ ಗುಮ್ಮಟಗಳನ್ನು ಸಂರಕ್ಷಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X