ಚಾಲಕನ ನಿಯಂತ್ರಣ ತಪ್ಪಿ ಸರಕು ತುಂಬಿದ ಲಾರಿ ಪಲ್ಟಿಯಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೋಣಿಗಲ್ ಬಳಿ ನಡೆದಿದೆ.
ಹೆದ್ದಾರಿಯ ಬದಿಯಲ್ಲಿ ಕೊರಕಲು ಬಿದ್ದ ಸ್ಥಳದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ 15 ಅಡಿ ಆಳದ ಕಂದಕ್ಕೆ ಬಿದ್ದಿದೆ. ಈ ಕುರಿತು ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಲಾರಿಯಲ್ಲಿ ಸಿಲುಕಿದ ಮೂವರನ್ನು ರಕ್ಷಣೆ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮುಡಾ ಹಗರಣ ಪ್ರಕರಣ | ರಾಜ್ಯಪಾಲರ ನಡೆ, ನುಡಿಗೆ ಖಂಡನೆ: ಹಿರಿಯ ರಂಗಕರ್ಮಿ ಸಿ ಬಸವಲಿಂಗಯ್ಯ
ಗಾಯಗೊಂಡ ಮೂವರನ್ನು ಕೂಡಲೇ ಆ್ಯಂಬುಲೆನ್ಸ್‌ಗೆ ಕರೆ ಮಾಡಿದ ಸಿಬ್ಬಂದಿಗಳು ಕೂಡಲೇ ತಾಲೂಕಿನ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
