ಶಾಸಕಾಂಗ ಸಭೆ | ರಾಜ್ಯಪಾಲರ ನಡೆಗೆ ಖಂಡನೆ; ಸಿಎಂ ಸಿದ್ದರಾಮಯ್ಯರ ಬೆನ್ನಿಗೆ ನಿಂತ ಕಾಂಗ್ರೆಸ್‌ ಶಾಸಕರು

Date:

Advertisements

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ವಿರುದ್ಧ ಕಾನೂನು ಹೋರಾಟಕ್ಕೆ ನೈತಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಗುರುವಾರ ಸಂಜೆ ಶಾಸಕಾಂಗ ಸಭೆ ನಡೆಯಿತು.

ಸಿದ್ದರಾಮಯ್ಯ ಅವರನ್ನು ಪದಚ್ಯುತಗೊಳಿಸುವ ವಾತಾವರಣ ನಿರ್ಮಿಸಿ, ಆ ಮೂಲಕ ಕಾಂಗ್ರೆಸ್‌‍ನಲ್ಲಿ ಸೃಷ್ಟಿಯಾಗುವ ರಾಜಕೀಯ ಗೊಂದಲಗಳ ಲಾಭ ಪಡೆಯುವ ಹವಣಿಕೆ ನಡೆಯುತ್ತಿವೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪ್ರತಿ ಹಂತದಲ್ಲೂ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಈ ಪೈಕಿ ಶಾಸಕಾಂಗ ಸಭೆಯೂ ಆಗಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಯಿತು. ರಾಜ್ಯಪಾಲರ ನಡೆ ಬಗ್ಗೆ ಶಾಸಕರು ತೀವ್ರ ಅಸಮಾಧಾನ ಹೊರಹಾಕಿದರು. “ಹೈಕಮಾಂಡ್ ಜೊತೆ ಚರ್ಚಿಸಿ ದೆಹಲಿಯಲ್ಲಿ ಹೋರಾಟ ನಡೆಸೋಣ. ರಾಜ್ಯಪಾಲರನ್ನ ವಾಪಸ್ ಕರೆಸಿಕೊಳ್ಳಿ ಎಂದು ರಾಷ್ಟ್ರಪತಿಗಳನ್ನ ಭೇಟಿ ಮಾಡಿ ಒತ್ತಾಯಿಸೋಣ” ಎಂದು ಶಾಸಕರು ಒಕ್ಕೊರಲಿನಿಂದ ಹೇಳಿದರು.

Advertisements

ಶಾಸಕಾಂಗ ಪಕ್ಷದ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​, “ಸಭೆಯಲ್ಲಿ ಸರ್ವಾನುಮತದಿಂದ ಶಾಸಕರು ಸಿಎಂಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಶಾಸಕ ಆರ್ ವಿ ದೇಶಪಾಂಡೆ ಸೂಚಿಸಿ ತನ್ವೀರ್ ಸೇಠ್​ ಅನುಮೋದಿಸಿದ್ದಾರೆ. ರಾಜ್ಯಪಾಲರು ಸರಿಯಾದ ತನಿಖೆ ನಡೆಸದೆ ಪ್ರಾಸಿಕ್ಯೂಷನ್​ಗೆ ಕೊಟ್ಟಿದ್ದಾರೆ. ರಾಜ್ಯಪಾಲರ ನಡೆ ಸರ್ವಾನುಮತದಿಂದ ಖಂಡಿಸಿದ್ದೇವೆ” ಎಂದು ತಿಳಿಸಿದರು.

ಶಾಸಕಾಂಗ ಸಭೆ 2

“ಪಕ್ಷದ ಎಲ್ಲ ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದೇವೆ. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಭಾಗವಹಿಸಿದ್ದರು. ಸ್ಪೀಕರ್ ಆದೇಶದಂತೆ ಆರು ಶಾಸಕರು ದೆಹಲಿಯಲ್ಲಿ ನಡೆಯುತ್ತಿರುವ ತರಬೇತಿಗೆ ತೆರಳಿದ್ದು, ಉಳಿದ ಎಲ್ಲಾ ಶಾಸಕರು ಈ ಸಭೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದೆಲ್ಲೆಡೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ” ಎಂದು ಹೇಳಿದರು.

“ಕರ್ನಾಟಕದ ಜನತೆ 136 ಸ್ಥಾನಗಳನ್ನು ನೀಡಿ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಜನರ ಆಶೀರ್ವಾದದಿಂದ ರಚಿಸಲಾಗಿರುವ ಈ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಲು ಪ್ರಯತ್ನಿಸುತ್ತಿವೆ. ಅವರು ಏನೇ ಪ್ರಯತ್ನಿಸಿದರು ಸರ್ಕಾರವನ್ನು ಜಗ್ಗಿಸಲು ಅವರಿಂದ ಸಾಧ್ಯವಿಲ್ಲ. ಇಡೀ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ಇದೆ” ಎಂದರು.

“ಶುಕ್ರವಾರ (ಆ.23) ಹೈಕಮಾಂಡ್ ನಾಯಕರ ಭೇಟಿಗೆ ಸಮಯ ಪಡೆದಿದ್ದು, ನಾನು ಹಾಗೂ ಮುಖ್ಯಮಂತ್ರಿಗಳು ರಾಜ್ಯದ ವಿದ್ಯಮಾನಗಳ ಬೆಳವಣಿಗೆ ಕುರಿತು ಚರ್ಚೆ ಮಾಡಲಿದ್ದೇವೆ. ರಾಜ್ಯಪಾಲರ ನಡವಳಿಕೆ ವಿರುದ್ಧ ನ್ಯಾಯಾಲಯದಲ್ಲೂ ಮೇಲ್ಮನವಿ ಸಲ್ಲಿಸಿದ್ದೇವೆ. ನಮಗೆ ನ್ಯಾಯಾಲಯದಲ್ಲಿ ನಂಬಿಕೆ ಇದೆ. ಕಾನೂನು ಹಾಗೂ ಸಂವಿಧಾನ ವಿರುದ್ಧವಾಗಿ ನೀಡಿರುವ ಆದೇಶದಿಂದ ನಮಗೆ ರಕ್ಷಣೆ ಸಿಗುವ ನಿರೀಕ್ಷೆಯಿದೆ” ಎಂದು ತಿಳಿಸಿದರು.

“ಇಂಡಿಯಾ ಮೈತ್ರಿಕೂಟ ಬೆಂಬಲ ಇದೆಯೇ ಎಂದು ಕೇಳಿದಾಗ, “ಇಂಡಿಯಾ ಮೈತ್ರಿಕೂಟ ಹುಟ್ಟಿದ್ದೇ ಇಲ್ಲಿ. ಇಲ್ಲಿ ಹುಟ್ಟಿ 234 ಸೀಟುಗಳನ್ನು ದೇಶದಲ್ಲಿ ಪಡೆದಿದೆ. ಸದ್ಯ ನಮ್ಮ ರಾಜ್ಯದಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಲಿದ್ದೇವೆ. ನಾಳೆ ದೆಹಲಿಗೆ ಭೇಟಿ ನೀಡಿ ಚರ್ಚೆ ಮಾಡಿದ ನಂತರ ಉಳಿದ ವಿಚಾರ ತಿಳಿಸುತ್ತೇವೆ” ಎಂದು ತಿಳಿಸಿದರು.

“ರಾಜ್ಯಪಾಲರ ನಿರ್ಣಯವನ್ನು ಸಚಿವ ಸಂಪುಟ ಸಭೆ ಖಂಡಿಸಿರುವುದು ಯಾವ ಸಂದೇಶ ರವಾನಿಸಲಿದೆ ಎಂದು ಕೇಳಿದಾಗ, “ರಾಜ್ಯಪಾಲರಲ್ಲಿ ನಾವು ಮಾಡಿಕೊಳ್ಳುವ ಮನವಿ, ಆಗ್ರಹ ಎಂದರೆ, ರಾಜ್ಯಪಾಲರು ತಮ್ಮ ಅನುಮತಿಯನ್ನು ಹಿಂಪಡೆಯಬೇಕು. ಆಗ ಸಂವಿಧಾನ ರಕ್ಷಣೆ ಮಾಡಿ, ಕಾನೂನಿಗೆ ಗೌರವ ನೀಡಿದಂತಾಗುತ್ತದೆ. ಈ ವಿಚಾರವಾಗಿ ನಾವು ಕಾನೂನು ಹೋರಾಟಕ್ಕೂ ಮುಂದಾಗಿದ್ದು, ರಾಜ್ಯಪಾಲರು ಮುಖಭಂಗದಿಂದ ಪಾರಾಗಬೇಕಾದರೆ ಈಗಲೂ ತಮ್ಮ ನಿರ್ಣಯವನ್ನು ಹಿಂಪಡೆಯಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X