‘ಈ ದಿನ’ ಫಲಶೃತಿ | ಚಿಕ್ಕಮಗಳೂರಿನ ಬೆಳಗೋಡು ಅಂಗನವಾಡಿಗೆ ‘ವಿದ್ಯುತ್ ಭಾಗ್ಯ’

Date:

Advertisements

ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದ ಅಂಗನವಾಡಿಗೆ ಕೊನೆಗೂ ‘ವಿದ್ಯುತ್ ಭಾಗ್ಯ’ ಲಭಿಸಿದೆ. ಹೌದು. ಇದಕ್ಕೆ ಕಾರಣವಾದದ್ದು ಈ ದಿನ.ಕಾಮ್.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೆಳಗೋಡು ಗ್ರಾಮದ ಅಂಗನವಾಡಿ ಕೇಂದ್ರವು ಹಲವು ಮೂಲ ಸೌಕರ್ಯಗಳಿಂದ ವಂಚಿತವಾಗಿತ್ತು. ಮಕ್ಕಳು ಹಾಗೂ ಅಂಗನವಾಡಿ ಶಿಕ್ಷಕಿಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಈ ದಿನ.ಕಾಮ್ ವಿಸ್ತಾರವಾಗಿ ವರದಿ ಹಾಗೂ ವಿಡಿಯೋ ವರದಿಯನ್ನು ಆಗಸ್ಟ್ 13ರಂದು ಪ್ರಕಟಿಸಿತ್ತು. ಈ ದಿನ ವರದಿಯ ಬೆನ್ನಲ್ಲೇ ಸಂಬಂಧಪಟ್ಟ ಅಧಿಕಾರಿಗಳು ಅಂಗನವಾಡಿಗೆ ಭೇಟಿ ನೀಡಿದ್ದು, ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದ್ದಾರೆ.

ಬೆಳಗೋಡು ಗ್ರಾಮದ ಅಂಗನವಾಡಿಗೆ ದಿನನಿತ್ಯ 10-15 ಕ್ಕಿಂತ ಹೆಚ್ಚು ಮಕ್ಕಳು ಬರುತ್ತಾರೆ. ಅಂಗನವಾಡಿಯಲ್ಲಿ ಮಕ್ಕಳಿಗೆ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದಾಗಿತ್ತು. ಮಕ್ಕಳಿಗೆ ಶೌಚಾಲಯಕ್ಕೆ ಹೋಗಬೇಕಾದರೆ ಕಾಡಿನ ಮಧ್ಯೆ ಹಾಗೂ ಹಸಿರು ಗಿಡ ಗಂಟಿಗಳ ಪೊದೆಗಳ ಮಧ್ಯೆ ಹೋಗಬೇಕಿತ್ತು. ಆ ಜಾಗಗಳಲ್ಲಿ ಹಾವು ಉಪಟಳಗಳು ಹಾಗೂ ಕೀಟಗಳ ಕಾಟ ಎದುರಾಗುತ್ತಿದ್ದವು.

Advertisements

ಸರಿಯಾದ ಶೌಚಾಲಯ ಹಾಗೂ ವಿದ್ಯುತ್ ವ್ಯವಸ್ಥೆ ಅಂಗನವಾಡಿಯಲ್ಲಿ ಇರಲಿಲ್ಲ. ಸರಿಯಾದ ಕುರ್ಚಿ,ಟೇಬಲ್ ವ್ಯವಸ್ಥೆ ಕೂಡ ಇರಲಿಲ್ಲ. ಅರ್ಧಕ್ಕೆ ನಿಲ್ಲಿಸಲಾಗಿದ್ದ ಶೌಚಾಲಯ ಹಾಗೂ ಅದಕ್ಕಾಗಿ ತೆಗೆದಿರುವ ಪಿಟ್ ಗುಂಡಿಯಲ್ಲಿ ನೀರು ಸೋರಿಕೆ ಉಂಟಾಗಿತ್ತು. ಅಂಗನವಾಡಿ ಅಡುಗೆ ಮನೆಯು ಪಕ್ಕದಲ್ಲಿರುವುದರಿಂದ ದುರ್ವಾಸನೆ ಬೀರುತ್ತಿದ್ದವು. ಇದರಿಂದಾಗಿ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಈದಿನ.ಕಾಮ್ ವಿಡಿಯೋ ಸಹಿತ ವರದಿ ಮಾಡಿತ್ತು.

1001422413
ಅಂಗನವಾಡಿ ಮುಂದೆ ಅಳವಡಿಸಲಾದ ವಿದ್ಯುತ್ ಕಂಬ ಹಾಗೂ ತಂತಿ

ಈ ದಿ‌ನ.ಕಾಮ್ನ ವರದಿಯನ್ನು ಗಮನಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಓ ರಂಗನಾಥ್ ಮತ್ತು ಸೂಪರ್ ವೈಸರ್ ಶಿವಕುಮಾರಿ ಅವರು ಬೆಳಗೋಡು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಆ ಬಳಿಕ ಸಂಬಂಧಿಸಿದ ಇಲಾಖೆಯ ಮೂಲಕ ವಿದ್ಯುತ್ ಕಂಬ ಹಾಗೂ ವಿದ್ಯುತ್ ತಂತಿ ಅಳವಡಿಸಿದ್ದಾರೆ.

ಅಂಗನವಾಡಿ ಮಕ್ಕಳಿಗೆ ಕುಳಿತು ಕೊಳ್ಳುವುದಕ್ಕೆ ಬೆಂಚು, ಕುರ್ಚಿ, ಟೇಬಲ್, ಅಡುಗೆ ಮನೆ ಉಪಕರಣ, ಮಕ್ಕಳಿಗೆ ಪುಸ್ತಕ ಇಡುವುದಕ್ಕೆ ಟೇಬಲ್ ಮತ್ತು ಪಿಟ್ ಗುಂಡಿ ಸಮಸ್ಯೆ ಸರಿಪಡಿಸುತ್ತೇವೆಂದು ಸ್ಥಳಕ್ಕೆ ಬಂದು ಸಮಸ್ಯೆಯನ್ನು ಪರಿಶೀಲಿಸಿ ಕೆಲಸ ಮಾಡಿಸಿ ಕೊಡುತ್ತೇವೆಂದು ಭರವಸೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ರೇಣುಕಾಸ್ವಾಮಿ ಕೊಲೆ | ಹಾಸ್ಯನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ?

ಅಂಗನವಾಡಿ ಸಮಸ್ಯೆಯನ್ನು ಬಗೆಹರಿಸಲು ವರದಿ ಮಾಡಿದ್ದಕ್ಕಾಗಿ ಈ ದಿನ. ಕಾಮ್ ತಂಡಕ್ಕೆ ಅಂಗನವಾಡಿಯ ಶಿಕ್ಷಕಿ ದ್ರಾಕ್ಷಾಯಿಣಿ, ಸಹಾಯಕಿ ಚಂದ್ರಕಲಾ ಹಾಗೂ ಪೋಷಕರು ಧನ್ಯವಾದ ಸಲ್ಲಿಸಿದ್ದಾರೆ.

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X