ಕಾನೂನು ಪ್ರಕಾರವೇ ಜಿಂದಾಲ್‌ಗೆ ಜಮೀನು ಮಾರಾಟ: ಕೈಗಾರಿಕೆ ಸಚಿವ ಎಂ‌ ಬಿ ಪಾಟೀಲ್ ಸಮರ್ಥನೆ

Date:

Advertisements

ಜಿಂದಾಲ್ ಉಕ್ಕು ಕಂಪನಿಗೆ ಕೋರ್ಟ್ ನಿರ್ದೇಶನ ಮತ್ತು ಅದನ್ನು ಅನುಸರಿಸಿ ಹೊರಡಿಸಿದ ಸರಕಾರಿ ಆದೇಶ ಹಾಗೂ ಸಂಪುಟ ಸಭೆಯ ನಿರ್ಣಯದಂತೆಯೇ ಕಾನೂನಿಗೆ ಅನುಸಾರವಾಗಿ 3,677 ಎಕರೆ ಭೂಮಿಯನ್ನು ಗುತ್ತಿಗೆ ಮಾರಾಟ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಸರಕಾರದ್ದು ಎಳ್ಳಷ್ಟೂ ತಪ್ಪಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌ ಬಿ ಪಾಟೀಲ್ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಖಾನೆ ಹೊಂದಿರುವ ಜಿಂದಾಲ್ ಕಂಪನಿಗೆ ನಾವೇನೂ ರಿಯಾಯಿತಿ ಕೊಟ್ಟಿಲ್ಲ. ಮಾರುಕಟ್ಟೆ ಬೆಲೆ ಹಿಂದೆ ಏನಿದೆಯೋ ಅದನ್ನು ನಿಗದಿಪಡಿಸಿದ್ದೇವೆ. ಕಂಪನಿ ಕೂಡ ಸರಕಾರದ ಷರತ್ತುಗಳನ್ನು ಪಾಲಿಸಿದೆ” ಎಂದರು.

“ರಾಜ್ಯದಲ್ಲಿ ಇರುವ ಒಂದು ಲಕ್ಷ ಕೈಗಾರಿಕೆಗಳಿಗೆ ಯಾವ ನಿಯಮ ಹೇಳಿದ್ದೇವೋ ಅದನ್ನೇ ಜಿಂದಾಲ್‌ಗೂ ಅನ್ವಯಿಸಲಾಗಿದೆ. ಇನ್ನು ಆರು ತಿಂಗಳಲ್ಲಿ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಜಿಂದಾಲ್ ರಾಜ್ಯದಲ್ಲಿ 90 ಸಾವಿರ ಕೋಟಿ ರೂಪಾಯಿ ಹೂಡಿದ್ದು, 50 ಸಾವಿರ ಉದ್ಯೋಗ ಕೊಟ್ಟಿದೆ. ಇಂತಹ ಸಂದರ್ಭದಲ್ಲಿ ಸರಕಾರದ ಕಡೆಯಿಂದ ಹೂಡಿಕೆದಾರರಿಗೆ ತಪ್ಪು ಸಂದೇಶ ಹೋಗಬಾರದು” ಎಂದು ತಿಳಿಸಿದರು.

Advertisements

ಕೈಗಾರಿಕಾ ನೀತಿಯಂತೆ ಗುತ್ತಿಗೆ ಮಾರಾಟ

“ಸರಕಾರವು ಉದ್ಯಮಿಗಳಿಗೆ ಜಮೀನು ಕೊಡುತ್ತದೆ. ಅದರಲ್ಲಿ ಹತ್ತು ವರ್ಷಗಳಲ್ಲಿ ಶೇ 51ರಷ್ಟು ಭೂಮಿಯನ್ನು ಅವರು ಬಳಸಿಕೊಂಡು, ಕಂಪನಿಯನ್ನು ಸಕ್ರಿಯವಾಗಿ ಇಟ್ಟಿರಬೇಕು. ಆಗ ಕೈಗಾರಿಕಾ ನೀತಿಯಂತೆ ಗುತ್ತಿಗೆ ಮಾರಾಟ ಮಾಡಲಾಗುತ್ತದೆ. ಇದರಲ್ಲಿ ಜಿಂದಾಲ್ ಎಲ್ಲೂ ಎಡವಿಲ್ಲ” ಎಂದರು.

“ನಾವು ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿಂದ ಕೈಗಾರಿಕಾ ಕ್ಷೇತ್ರದಲ್ಲಿ ಭಾರೀ ಪೈಪೋಟಿ ಎದುರಿಸುತ್ತಿದ್ದೇವೆ. ಎಷ್ಟೋ ರಾಜ್ಯಗಳು ಉದ್ದಿಮೆಗಳಿಗೆ ಉಚಿತವಾಗಿ ಭೂಮಿ ಕೊಡುತ್ತಿವೆ. ಹಿಂದೆ ಜಿಂದಾಲ್ ಕಂಪನಿಗೆ ಭೂಮಿಯನ್ನು ಲೀಸ್ ಕಂ ಸೇಲ್ ಮಾಡಲು ಕೆಲವರು ಯಾಕೆ ವಿರೋಧಿಸಿದರೋ ಗೊತ್ತಿಲ್ಲ” ಎಂದು ಹೇಳಿದರು.

“ಹಿಂದೆ ನಾವು ಜಿಂದಾಲ್ ವಿರುದ್ಧವೇನೂ ಪ್ರತಿಭಟಿಸಿಲ್ಲ. ಆಗ ನಾವು ಜನಾರ್ದನ ರೆಡ್ಡಿ ವಿರುದ್ಧವಷ್ಟೇ ದನಿ ಎತ್ತಿದ್ದೆವು. ಜತೆಗೆ ಈಗ ಜಿಂದಾಲ್‌ಗೆ ಕೊಡುತ್ತಿರುವ ಭೂಮಿಯಲ್ಲಿ ಗಣಿಗಾರಿಕೆಯೇನೂ ನಡೆಯುತ್ತಿರಲಿಲ್ಲ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಆಗಿದೆ

“ಮುಡಾ ಹಗರಣದ ವಿಚಾರದಲ್ಲಿ ರಾಜ್ಯಪಾಲರು ಸ್ವಂತ ವಿವೇಚನೆಯಿಂದ ನಡೆದುಕೊಂಡಿಲ್ಲ. ರಾಜಭವನ ಈಗ ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ತಪ್ಪೇನೂ ಇಲ್ಲ” ಎಂದು ಇದೇ ವೇಳೆ ಹೇಳಿದರು.

“ಮುಡಾ ಹಗರಣದ ನೆಪದಲ್ಲಿ ಸರಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ನೋಡುತ್ತಿವೆ. ಆದರೆ ಅವರು ತಲೆ ಕೆಳಗೆ ಮಾಡಿಕೊಂಡು ನಿಂತರೂ ಅದು ಸಾಧ್ಯವಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಈ ವಿಚಾರದಲ್ಲಿ ಕೆಲವು ಸಲಹೆ ಸೂಚನೆ ನೀಡಲಿದೆ” ಎಂದರು.

“ಟಿ ಜೆ ಅಬ್ರಹಾಂ ನೀಡಿದ ದೂರಿನ ಮೇರೆಗೆ ತರಾತುರಿಯಲ್ಲಿ ಕ್ರಮ ಕೈಗೊಂಡ ರಾಜ್ಯಪಾಲರು, ಶಶಿಕಲಾ‌ ಜೊಲ್ಲೆ, ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಮತ್ತು ಎಚ್ ಡಿ ಕುಮಾರಸ್ವಾಮಿ ವಿಚಾರದಲ್ಲಿ ವರ್ಷಗಳೇ ಉರುಳಿದರೂ ಏಕೆ ಸುಮ್ಮನಿದ್ದಾರೆ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X