ಬೀದರ್‌ | ಸೆ.14 ರಂದು ಬೃಹತ್ ಲೋಕ್ ಅದಾಲತ್ : ಪ್ರಕಾಶ ಬನಸೋಡೆ

Date:

Advertisements

ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 28,371 ಪ್ರಕರಣಗಳು ಬಾಕಿಯಿದ್ದು, ಹೆಚ್ಚು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವ ಗುರಿ ಹೊಂದಲಾಗಿದೆ. ಸೆ.14ರಂದು ಜಿಲ್ಲೆಯಲ್ಲಿ ಬೃಹತ್ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಪ್ರಕಾಶ ಎ.ಬನಸೋಡೆ ಹೇಳಿದರು.

ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ʼಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್, ಕಂದಾಯ ಅಪರಾಧಿಕ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ ಪ್ರಕರಣಗಳು, ಕಾರ್ಮಿಕ, ಬ್ಯಾಂಕ್ ಪ್ರಕರಣಗಳು, ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಇರುತ್ತದೆʼ ಎಂದು ಹೇಳಿದರು.

ಸಂಧಾನದ ಮೂಲಕ ಪ್ರಕರಣ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಾಲಯ ಶುಲ್ಕ ವಾಪಸ್ ಸಿಗಲಿದೆ‌, ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಎರಡೂ ಕಡೆಯವರು ದ್ವೇಷ ಮರೆತು ಸಂಧಾನ ಮಾಡಿಕೊಂಡರೆ ಇಬ್ಬರಿಗೂ ಪ್ರಯೋಜನ. ಕಕ್ಷಿದಾರರು ಈ ಲೋಕ್ ಆದಾಲತ್‌ನಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕುʼ ಎಂದು ತಿಳಿಸಿದರು.

Advertisements

ಜಿಲ್ಲೆಯಲ್ಲಿ ಒಟ್ಟು 29,976 ಪ್ರಕರಣಗಳನ್ನು ಈ ಲೋಕ್ ಆದಲಾತ್‌ನಲ್ಲಿ ಇತ್ಯರ್ಥಗೊಳಿಸಲಾಗಿದೆ. 10,521 ಪೆಂಡಿಂಗ್‌ ಪ್ರಕರಣಗಳು, 19,455 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಈ ಬಾರಿಯ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಹೆಚ್ಚು ಇತ್ಯರ್ಥಗೊಳಿಸಲು ಯೋಜನೆ ರೂಪಿಸಲಾಗಿದೆ. ಕಳೆದ ಲೋಕ ಅದಾಲತಗಿಂತ ಈ ಬಾರಿಯ ಲೋಕ್ ಅದಾಲತ್‌ನಲ್ಲಿ ಹೆಚ್ಚು ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ ಗುರಿ ಹೊಂದಲಾಗಿದೆʼ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿಗಳಾದ ಜಗದಿಶ್ವರ ದೊರೆ, ಆಕಾಶ ಸಜ್ಜನ, ಜೀವನ, ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X