ತುಮಕೂರು ಜಿಲ್ಲೆಯಲ್ಲಿ ಶೇ.90ಕ್ಕಿಂತ ಕಡಿಮೆ ಭೂಸ್ವಾಧೀನ ಪಡಿಸಿಕೊಂಡಿರುವ ಪ್ರದೇಶಗಳಲ್ಲಿ ರೈಲ್ವೆ ಕಾಮಗಾರಿಗಳು ವಿಳಂಬಗೊಳ್ಳುತ್ತಿದ್ದು, ಶೀಘ್ರವಾಗಿ ಭೂ-ಸ್ವಾಧೀನ ಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರಿಸುವಂತೆ ವಿಶೇಷ ಭೂ ಸ್ವಾಧೀನ ಅಧಿಕಾರಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ ನೀಡಿದರು.
ತುಮಕೂರಿನಲ್ಲಿ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾರ್ಚ್-2027ಕ್ಕೆ ಲೋಕಾರ್ಪಣೆ ಮಾಡಲು ಉದ್ದೇಶಿಸಿರುವ ರಾಜ್ಯದ ಮಹತ್ವ ಯೋಜನೆಗಳಾದ ತುಮಕೂರು-ದಾವಣಗೆರೆ, ಮತ್ತು ತುಮಕೂರು- ರಾಯದುರ್ಗ ರೈಲ್ವೇ ಮಾರ್ಗಗಳ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿರುವುದರಿಂದ ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಬೇಕು. ಅಪಘಾತ ವಲಯಗಳನ್ನು ಗುರುತಿಸಿ ಅಪಘಾತಗಳು ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭ ನವಹದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ, ಶಾಸಕರಾದ ಜಿ. ಬಿ. ಜ್ಯೋತಿಗಣೇಶ್, ಬಿ. ಸುರೇಶ್ ಗೌಡ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿ.ಪಿ. ಬ್ರಹ್ಮಂಕರ್, ರೈಲ್ವೆ ಇಲಾಖೆಯ ಮುಖ್ಯ ಇಂಜಿನಿಯರ್ ಕೆ.ಜೆ.ಜಗದೀಶ್, ಸರ್ಕಾರದ ಕಾರ್ಯದರ್ಶಿ ಮಂಜುಳ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್, ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪೆÇಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅರಣ್ಯ ಉಪ ಸಂರಕ್ಷಣಾಧಿಕಾರಿ ಅನುಪಮ, ಜಿಲ್ಲಾ ಮಟ್ಟದ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.