ರಾಜ್ಯಪಾಲ ಗೆಹ್ಲೋಟ್ ವಾಪಸ್ ಕಳುಹಿಸಿದ 11 ಮಸೂದೆಗಳಿವು

Date:

Advertisements

ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸುಮಾರು 11 ಮಸೂದೆಗಳಿಗೆ ಅಧಿಕ ವಿವರಣೆ ನೀಡುವಂತೆ ಕೋರಿ ಸರ್ಕಾರಕ್ಕೆ ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ. ಅದಕ್ಕೆ ಸಹಿ ಹಾಕಿಲ್ಲ ಎಂದು ವರದಿಯಾಗಿದೆ.

ಕೆಲವು ಮಸೂದೆಗಳ ಬಗ್ಗೆ ಅಧಿಕ ವಿವರಣೆಯನ್ನು ನೀಡಲು ತಿಳಿಸಿ ಆ ಮಸೂದೆಗಳನ್ನು ವಾಪಸ್ ಕಳುಹಿಸುವುದು ಸಾಮಾನ್ಯವಾಗಿಯೇ ನಡೆಯುವ ಪ್ರಕ್ರಿಯೆಯಾಗಿದೆ. ರಾಜ್ಯಪಾಲರಿಗೆ ಮಸೂದೆ ಬಗ್ಗೆ ತೃಪ್ತಿಕರವಾದ ಉತ್ತರ ಲಭಿಸಿದ ಬಳಿಕ ಸಹಿ ಹಾಕುತ್ತಾರೆ ಎಂದು ರಾಜಭವನವನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.

ಈ ನಡುವೆ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಕಾನೂನು ಸಂಘರ್ಷ ಇನ್ನಷ್ಟು ಬಿಗಡಾಯಿಸಿದೆ. ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ನಂತರ ರಾಜಭವನ ಮತ್ತು ಸರ್ಕಾರದ ನಡುವೆ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ.

Advertisements

ಪಿಎಸ್‌ಐ ನೇಮಕ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ರೂಪಿಸಲಾಗಿದ್ದ ‘ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳು (ನೇಮಕದಲ್ಲಿ ಭ್ರಷ್ಟಾಚಾರ ಮತ್ತಿತರ ಅಕ್ರಮ ತಡೆ) ವಿಧೇಯಕ -2023’ ಅನ್ನು ಗೃಹ ಇಲಾಖೆಯ ಸ್ಪಷ್ಟನೆ ನಡುವೆಯೂ ರಾಜ್ಯಪಾಲರು 2ನೇ ಬಾರಿಗೆ ಸರಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.

ಇದನ್ನು ಓದಿದ್ದೀರಾ? ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು; ಸಿಎಂ ವಜಾಕ್ಕೆ ಡಿ ಎಸ್ ಅರುಣ್ ಮನವಿ

ಈ ಮಸೂದೆಗಳ ಪೈಕಿ ಆರು ಮಸೂದೆಗಳು ಮುಂಗಾರು ಅಧಿವೇಶನದಲ್ಲಿ ಅಂಗೀಕಾರಗೊಂಡಿದ್ದು ಇದೇ ತಿಂಗಳಲ್ಲಿ ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಉಳಿದವುಗಳನ್ನು ಇದೇ ವರ್ಷದ ಮಾರ್ಚ್ ಮತ್ತು ಒಂದು ಮಸೂದೆ 2023ರ ಡಿಸೆಂಬರ್‌ನಲ್ಲಿ ಕಳುಹಿಸಲಾಗಿತ್ತು.

ವಾಪಸ್ ಕಳುಹಿಸಿದ 11 ಮಸೂದೆಗಳು

ಕರ್ನಾಟಕ ಸಾರ್ವಜನಿಕ ಪರೀಕ್ಷಾ(ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ತಡೆ) ಮಸೂದೆ 2023, ಗದಗ ಬೆಟಗೇರಿ ವಾಣಿಜ್ಯ, ಸಂಸ್ಕೃತಿ ಮತ್ತು ಪ್ರದರ್ಶನಗಳ ಪ್ರಾಧಿಕಾರ ಮಸೂದೆ 2023, ಕರ್ನಾಟಕ ನಗರ ಮತ್ತು ಪಟ್ಟಣಗಳ ಯೋಜನೆ(ತಿದ್ದುಪಡಿ) ಮಸೂದೆ 2023, ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ 2024, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ದತ್ತಿ ಮಸೂದೆ 2024, ಕರ್ನಾಟಕ ಪುರಸಭೆಗಳು ಇತರ ಕಾನೂನು ತಿದ್ದುಪಡಿ ಮಸೂದೆ 2024, ಕರ್ನಾಟಕ ಸಹಕಾರ ಸಂಘಗಳ ಸೊಸೈಟಿಗಳ ತಿದ್ದುಪಡಿ ಮಸೂದೆ 2024, ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮಸೂದೆ 2024, ಕರ್ನಾಟಕ ಶಾಸಕಾಂಗ (ತಡೆ ಮತ್ತು ಅನರ್ಹತೆ) ತಿದ್ದುಪಡಿ ಮಸೂದೆ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮಸೂದೆ 2024

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X