ದಾವಣಗೆರೆ | ಪರಿಶಿಷ್ಟ ಜನಸಂಖ್ಯೆ ಇಲ್ಲದೆಡೆ ಎಸ್ ಟಿ ಪಿ, ಟಿಎಸ್ ಪಿ,ಅನುದಾನ ಬಳಸದಂತೆ ಡಿಸಿ ಸೂಚನೆ

Date:

Advertisements

ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಕಲ್ಯಾಣ ಯೋಜನೆಯಡಿ ಮೂಲಭೂತ ಸೌಕರ್ಯಗಳ ಒದಗಿಸುವ ವೇಳೆ ಈ ಜನಸಂಖ್ಯೆಯನ್ನಾಧರಿಸಿ ಧನ ವಿನಿಯೋಗವಾಗಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.

ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಸಿ.ಪಿ, ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೀಸಲಿರಿಸಿದ ಅನುದಾನವನ್ನು ಆಸ್ತಿಗಳ ಸೃಜನೆ ಮತ್ತುಮೂಲಭೂತ ಸೌಕರ್ಯಗಳನ್ನು ಸೃಜನೆ ಮಾಡುವಾಗ ಈ ವರ್ಗದ ಜನರು ಹೆಚ್ಚು ಇರುವ ಕಡೆ ಮತ್ತು ಅನುಕೂಲವಾಗುವ ನಿಟ್ಟಿನಲ್ಲಿ ಆಸ್ತಿಗಳ ಸೃಜನೆಯಾಗಬೇಕು. ಜನಸಂಖ್ಯೆಯೇ ಇಲ್ಲದ ಈ ಅನುದಾನ ಬಳಕೆ ಮಾಡಬಾರದು ಎಂದು ಸೂಚನೆ ನೀಡಿದರು. ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಈಗಾಗಲೇ ಇಲಾಖಾವಾರು ಕ್ರಿಯಾ ಯೋಜನೆಗಳು ಅನುಮೋದನೆಯಾಗಿ ಅನುದಾನವು ಬಿಡುಗಡೆಯಾಗಿದೆ. ಇಲಾಖೆಯವರು ಯೋಜನೆಗಳಾಗಿದ್ದಲ್ಲಿ ಫಲಾನುಭವಿಗಳ ಮುಂಚಿತವಾಗಿ ಅರ್ಜಿಯನ್ನು ಆಹ್ವಾನಿಸಿ ಫಲಾನುಭವಿಗಳ ಆಯ್ಕೆಯನ್ನು ಅಂತಿಮಗೊಳಿಸಿಟ್ಟು ಕೊಳ್ಳಬೇಕು ಎಂದು ತಿಳಿಸಿದರು.

ಕಾಲಮಿತಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಕ್ರಮ ವಹಿಸ ಬೇಕೆಂದು ತಿಳಿಸಿ ಅಧಿಕ ಮಳೆಯಿಂದ ಹೊನ್ನಾಳಿ ಆಸ್ಪತ್ರೆ ಒಳಗೆ ನೀರು ನುಗ್ಗಿದ್ದು ವಿದ್ಯುತ್ ಸಂಪರ್ಕದ ವೈರ್‌ಗಳ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಿದರು.

Advertisements

ಎಸ್.ಸಿ.ಪಿ, ಟಿ.ಎಸ್.ಪಿ. ಕ್ರಿಯಾ ಯೋಜನೆಯನ್ವಯ ಜಿಲ್ಲೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ರೂ.345.5 ಕೋಟಿಗಳಷ್ಟು ಅನುದಾನ ನಿಗದಿ ಮಾಡಿದ್ದು ಇದರಲ್ಲಿ 125.31 ಕೋಟಿ ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ ಅನುದಾನದಲ್ಲಿ 98.82 ಕೋಟಿ ಖರ್ಚು ಮಾಡಲಾಗಿದೆ. ನಿಗಧಿತ ಗುರಿಗೆ ಶೇ 28.60 ರಷ್ಟು ಸಾಧನೆ ಮಾಡಿದ್ದು ಬಿಡುಗಡೆಯಾದ ಅನುದಾನವನ್ನು ಶೇ 78.86 ರಷ್ಟು ವೆಚ್ಚ ಮಾಡಲಾಗಿದೆ. ಮುಂದಿನ ಸಭೆ ವೇಳೆಗೆ ಬಿಡುಗಡೆಯಾದ ಅನುದಾನಕ್ಕೆ ಶೇ 100 ರಷ್ಟು ಸಾಧನೆ ಮಾಡಿರಬೇಕೆಂದು ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಾದ ಡಾ. ಮಹಂತೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ನಾಗರಾಜ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2024 08 09 at 10.52.48 1578a566
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X