ಧರ್ಮ-ಜಾತಿ ಹೆಸರಲ್ಲಿ ಸಮಾಜ ಒಡೆದಿದ್ದರಿಂದಲೇ ಅಸಮಾನತೆ ಹೆಚ್ಚುತ್ತಿದೆ: ಸಿಎಂ ಸಿದ್ದರಾಮಯ್ಯ

Date:

Advertisements

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆದಿದ್ದರಿಂದಲೇ ಅಸಮಾನತೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಿದ್ದ ’21ನೇ ಶತಮಾನಕ್ಕೆ ಮಹಾತ್ಮಾ ಗಾಂಧೀಜಿ’ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

“ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಗಾಂಧೀಜಿ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ.‌ ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಬ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು” ಎಂದರು.

“ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ ಮಾತನ್ನು ಪ್ರಸ್ತಾಪಿಸಿ, ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ” ಎಂದು ಹೇಳಿದರು.

“ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣ” ಎಂದರು.

“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಢ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ” ಎಂದು ತಿಳಿಸಿದರು.

“ದೇಶದ ಶೇ.85 ರಷ್ಟು ಆಸ್ತಿ ಶೇ.1ರಷ್ಟು ಶ್ರೀಮಂತರ ಕೈಗೆ ಸೇರುತ್ತಿದೆ. ಇದು ಅಪಾಯಕಾರಿ. ಈ ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿಯವರು ವಿಚಾರಗಳಲ್ಲಿ ಮಾರ್ಗಗಳಿವೆ. ಮಹಾತ್ಮಗಾಂಧಿಯವರು‌ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ” ಎಂದರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ರಾಮಚಂದ್ರ ರಾಹಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಕಾರ್ಯಾಧ್ಯಕ್ಷರಾದ ವಿಶುಕುಮಾರ್, ನವದೆಹಲಿ ಸ್ಮಾರಕ ನಿಧಿ ಅಧ್ಯಕ್ಷ ಸಂಜೋಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X