ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಜಾರಿ ಮಾಡಲು ನಿಮ್ಮ ಒಪ್ಪಿಗೆ ಇದೆಯೇ ಎಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ದೇಶದಲ್ಲಿ ಎರಡು ಕಾನೂನು ಜಾರಿಗೊಳಿಸಲು ನಿಮ್ಮ ಒಪ್ಪಿಗೆ ಇದೆಯೇ? ನ್ಯಾಶನಲ್ ಕಾನ್ಫರೆನ್ಸ್ ತನ್ನ ಪ್ರಣಾಳಿಕೆಯಲ್ಲಿ ಈಗಾಗಲೇ 370ನೇ ವಿಧಿ ಮರುಜಾರಿ ಮಾಡುವುದಾಗಿ ಹೇಳಿದೆ. ನ್ಯಾಶನಲ್ ಕಾನ್ಫರೆನ್ಸ್ ಜೊತೆ ಚುನಾವಣೆ ಹೊಂದಾಣಿಕೆ ಮಾಡಿದ್ದರಿಂದ 370ನೇ ವಿಧಿ ಬಗ್ಗೆ ನಿಮ್ಮ ನಿಲುವೇನು ಎಂದು ಜನರಿಗೆ ತಿಳಿಸಬೇಕು” ಎಂದು ಆಗ್ರಹಿಸಿದರು.
“ದೇಶದಲ್ಲಿ ಎರಡು ಕಾನೂನು ತರುವ ಸಿದ್ಧತೆ ಮಾಡಿಕೊಳ್ಳುತ್ತಿದ್ದೀರಾ? ದೇಶದಲ್ಲಿ ಎರಡು ಧ್ವಜ ಮಾಡಲು ಕಾಂಗ್ರೆಸ್ ಸಮ್ಮತಿಸುವುದೇ? ಕೇವಲ ಚುನಾವಣೆ ಹೊಂದಾಣಿಕೆ ಅಲ್ಲ. 370ನೇ ವಿಧಿಯನ್ನು ಬಿಜೆಪಿ ರದ್ದು ಮಾಡಿದ ಬಳಿಕ ಇವತ್ತು ಅದನ್ನು ಮರುಜಾರಿ ಮಾಡುವುದಾಗಿ ನ್ಯಾಶನಲ್ ಕಾನ್ಫರೆನ್ಸ್ ಹೇಳಿದೆ. ಆ ಪಕ್ಷದ ಜೊತೆ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡಿದ್ದು, ದೇಶದ ಜನರ ಹಲವು ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಉತ್ತರ ಕೊಡಬೇಕು” ಎಂದರು.
“ಚುನಾವಣೆ ಬಂದಾಗ ಯಾರು ಬೇಕಾದರೂ ನನ್ನ ಮಿತ್ರಪಕ್ಷ ಆಗಬಹುದೆಂದು ಅಂದುಕೊಂಡು ದೇಶದ ಹಿತಾಸಕ್ತಿಯನ್ನು ಕಾಂಗ್ರೆಸ್ ಮರೆತಿದೆ. ಇಲ್ಲಿನತನಕ ಅಲ್ಲಿದ್ದ ಸೈನಿಕರಿಗೆ ಕಲ್ಲು ತೂರಾಟವನ್ನು ಕಾಂಗ್ರೆಸ್ ಸಮರ್ಥಿಸುವುದೇ” ಎಂದು ಕೇಳಿದರು.
ಪರುಶುರಾಮನ ಮೂರ್ತಿ ಸ್ಥಾಪನೆಯಲ್ಲಿ ಆದ ಅವ್ಯವಹಾರ ನಿಮಗೆ ಒಪ್ಪಿಗೆ ಇದೆಯೆಂದರೆ,, ಬಹುಶಃ ನಿಮ್ಮ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಕೊಡಬಹುದು