ಜಾರ್ಖಂಡ್ ಬಿಜೆಪಿ ಮುಖ್ಯಸ್ಥ, ಕೇಂದ್ರ ಸಚಿವ ಸೇರಿದಂತೆ 12,051 ಮಂದಿಯ ಮೇಲೆ ಹಿಂಸಾಚಾರ ಪ್ರಕರಣ ದಾಖಲು

Date:

Advertisements

ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ನಡೆದ ಬಿಜೆವೈಎಂ ರ್ಯಾಲಿಯಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಗುರುತಿಸಿದ 51 ಮಂದಿ ಸೇರಿದಂತೆ 12,000 ಜನರ ವಿರುದ್ಧ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾರ್ಖಂಡ್ ಘಟಕದ ಅಧ್ಯಕ್ಷ ಬಾಬುಲಾಲ್ ಮರಾಂಡಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಮರ್ ಕುಮಾರ್ ಬೌರಿ, ಕೇಂದ್ರ ಸಚಿವ ಸಂಜಯ್ ಸೇಠ್ ಮತ್ತು ಕೇಂದ್ರದ ಮಾಜಿ ಸಚಿವ ಅರ್ಜುನ್ ಮುಂಡಾ ಸೇರಿದಂತೆ ಕೆಲವು ಪ್ರಮುಖ ಬಿಜೆಪಿ ನಾಯಕರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ರಾಂಚಿಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಚಂದನ್ ಕುಮಾರ್ ಸಿನ್ಹಾ , “ಮ್ಯಾಜಿಸ್ಟ್ರೇಟ್ ಹೇಳಿಕೆಯ ಮೇರೆಗೆ ರಾಂಚಿಯ ಲಾಲ್‌ಪುರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅಂತಹವರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

51 ಗುರುತಿಸಿದ ವ್ಯಕ್ತಿಗಳು ಸೇರಿದಂತೆ 12,000 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಲಾಲ್‌ಪುರ ಪೊಲೀಸ್ ಠಾಣೆ ಪ್ರಭಾರಿ ರೂಪೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

ಈ ನಡುವೆ, ಶುಕ್ರವಾರದ ರ್ಯಾಲಿಯಲ್ಲಿ ಭಾರತೀಯ ಜನತಾ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಪೊಲೀಸ್ ಕ್ರಮವನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ಪೊಲೀಸ್ ಠಾಣೆಗಳ ಎದುರು ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಹೇಮಂತ್ ಸೋರೆನ್ ಸರ್ಕಾರದಿಂದ “ಅನ್ಯಾಯ” ಮತ್ತು “ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲತೆ” ವಿರುದ್ಧ ರಾಂಚಿಯಲ್ಲಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣಕ್ಕೆ ಪೊಲೀಸರು ಮತ್ತು ಬಿಜೆಪಿ ಯುವ ಘಟಕದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಬಿಜೆವೈಎಂ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಬಳಸಿದರು ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದರು.

ಜಿಲ್ಲಾಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 ರ ಸೆಕ್ಷನ್ 163 ಅನ್ನು ಜಾರಿಗೊಳಿಸಿದೆ. ರಾಂಚಿಯ ಮೊರಬಾಡಿ ಮೈದಾನದಲ್ಲಿ ಶುಕ್ರವಾರ ಬೆಳಿಗ್ಗೆ 11 ರಿಂದ ಸಾರ್ವಜನಿಕ ಸಭೆಗಳು, ರ್ಯಾಲಿಗಳು, ಧರಣಿಗಳು, ಪ್ರದರ್ಶನಗಳು ಮತ್ತು ಸಭೆಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X