ಕೆಎಎಸ್​​ ಪೂರ್ವಭಾವಿ ಪರೀಕ್ಷೆ ಆಗಸ್ಟ್‌ 27ರಂದೇ ನಡೆಯಲಿದೆ: ರಾಜ್ಯ ಸರ್ಕಾರ ಸ್ಪಷ್ಟನೆ

Date:

Advertisements

ಕೆಎಎಸ್​​ ಪೂರ್ವಭಾವಿ ಪರೀಕ್ಷೆ ದಿನಾಂಕದಲ್ಲಿ ಯಾವ ಬದಲಾವಣೆಯೂ ಇಲ್ಲ. ಈಗಾಗಲೇ ಅಭ್ಯರ್ಥಿಗಳಿಗೆ ತಯಾರಿಯಾಗಲು ಸಾಕಷ್ಟು ಸಮಯ ನೀಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಕೆಎಎಸ್​​ ಪೂರ್ವಭಾವಿ ಪರೀಕ್ಷೆ ಮುಂದಕ್ಕೆ ಹಾಕಬೇಕು ಎಂದು ಬೆರಳೆಣಿಕೆಯಷ್ಟು ಅಭ್ಯರ್ಥಿಗಳು ಮಾಧ್ಯಮಗಳ ಮುಂದೆ ಬಂದು ಆಗ್ರಹಿಸಿದ್ದರು. ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, “ಕೆಲ ಕೆಎಎಸ್​​ ಆಕ್ಷಾಂಕ್ಷಿಗಳು ಪರೀಕ್ಷೆಯನ್ನು ಮುಂದೂಡುವಂತೆ ಹಿರಿಯ ಅಧಿಕಾರಿಗಳಿಂದ ಒತ್ತಡ ತರುತ್ತಿದ್ದಾರೆ. ಅಲ್ಲದೇ, ಅವರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಕೆಪಿಎಸ್​​ಸಿಯಲ್ಲಿ ಹಗರಣ ನಡೆದಿದೆ ಎಂದು ಸುಳ್ಳು ಆರೋಪ ಮಾಡಲಾಗಿದೆ. ಯಾವುದೇ ಹಗರಣ ನಡೆದಿಲ್ಲ, ಆಗಸ್ಟ್​ 27 ರಂದೇ ಪರೀಕ್ಷೆ ನಡೆಯಲಿದೆ” ಎಂದು ಸರ್ಕಾರ ಸ್ಪಷ್ಟಪಡಿಸಿದೆ.

“ತರಾತುರಿಯಲ್ಲಿ ಪರೀಕ್ಷೆಯನ್ನು ನಡೆಸುತ್ತಿಲ್ಲ. ಅಭ್ಯರ್ಥಿಗಳು ತಯಾರಿಯಾಗಲು ಸಾಕಷ್ಟು ಸಮಯ ನೀಡಲಾಗಿದೆ. ಕೆಪಿಎಸ್​ಸಿ ಅಥವಾ ಸರ್ಕಾರವು ಹೆಚ್ಚುವರಿ ಅವಕಾಶ ಮತ್ತು ವಯೋಮಿತಿ ಸಡಿಲಿಕೆಗೊಳಿಸಿದ ನಂತರ 2017-18ರಲ್ಲಿ ಪರೀಕ್ಷೆ ಬರೆದಿದ್ದ 1500 ಅಭ್ಯರ್ಥಿಗಳು ಕೂಡ ಪರೀಕ್ಷೆಗೆ ಅರ್ಜಿಸಲ್ಲಿಸಿದ್ದಾರೆ. ಇವರು ಸೇರಿದಂತೆ ಒಟ್ಟು 2.5 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಸಿದ್ದರಾಗಿದ್ದಾರೆ” ಎಂದು ಸರ್ಕಾರ ತಿಳಿಸಿದೆ.

Advertisements

ಕೆಎಎಸ್​ ಪೂರ್ವಭಾವಿ ಪರೀಕ್ಷೆಯನ್ನು ಮೇ 05 ರಂದು ನಡೆಸುವುದಾಗಿ ಸರ್ಕಾರ ಫೆಬ್ರವರಿ 26 ಸರ್ಕಾರ ಅಧಿಸೂಚನೆ ಹೊರಡಿಸಿತು. ಆದರೆ ಮೇ7 ರಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದ್ದರಿಂದ ಕೆಪಿಎಸ್​ಸಿ ಪರೀಕ್ಷೆಯನ್ನು ಜುಲೈ 07ಕ್ಕೆ ಮುಂದೂಡಲಾಯಿತು. ಆದರೆ ಜುಲೈ 07 ರಂದು ಯುಪಿಎಸ್​ಸಿ ಪರೀಕ್ಷೆ ಇದ್ದಿದ್ದರಿಂದ ಕೆಪಿಎಸ್​​ಸಿ ಪರೀಕ್ಷೆಯನ್ನು ಮತ್ತೆ ಮುಂದೂಡಿ ಜುಲೈ 21ಕ್ಕೆ ನಿಗದಿ ಮಾಡಲಾಯಿತು. ಆದರೆ, ಈ ಮಧ್ಯೆ ⁠2017-18ರಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳ ಮನವಿ ಮೇರೆಗೆ, ಸರ್ಕಾರ ಅವರಿಗೆ ಮತ್ತೊಂದು ಅವಕಾಶ ನೀಡಲು ಮುಂದಾಯಿತು.

ಈ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅನುಮತಿ ನೀಡಿ, ಜೊತೆಗೆ ವಯೋಮಿತಿ ಸಡಲಿಕೆಗೊಳಿಸಿ ಸರ್ಕಾರ ಜೂನ್​ 21 ರಂದು ಅಧಿಸೂಚನೆ ಹೊರಡಿಸಿತು. ಕೆಪಿಎಸ್​ಸಿ ಜೂನ್​ 26 ರಂದು ತನ್ನ ವೆಬ್​ಸೈಟ್​ನಲ್ಲಿ ಪ್ರಕಟಿಸಿತು. 2017-18 ಬ್ಯಾಚ್​ನ ಅಭ್ಯರ್ಥಿಗಳು ಹೊಸದಾಗಿ ಮತ್ತೊಮ್ಮೆ ಅರ್ಜಿಸಲ್ಲಿಸಲು ಜುಲೈ 21ರವರೆಗೆ ಅವಕಾಶ ನೀಡಿತು. ಅದರಂತೆ ಸುಮಾರು 1560 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರು. ಕೆಎಎಸ್​ ಪೂರ್ಭಭಾವಿ ಪರೀಕ್ಷೆಗಳನ್ನು ಆಗಸ್ಟ್​ 25ಕ್ಕೆ ಮುಂದೂಡಲಾಯಿತು. ಆದರೆ, ಆಗಸ್ಟ್​ 25 ರಂದು IBPS ಪರೀಕ್ಷೆ ಇದ್ದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಆಗಸ್ಟ್​ 27ಕ್ಕೆ ಮುಂದೂಡಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.

2.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಡೆಸಲು ಸಾಕಷ್ಟು ತಯಾರಿ ನಡೆಯುತ್ತದೆ. ಪತ್ರಿಕೆಗಳ ಮುದ್ರಣಕ್ಕೆ ಸುಮಾರು 4-5 ಕೋಟಿ ಖರ್ಚಾಗುತ್ತದೆ. ಎರಡು ತಿಂಗಳು ಮುಂದೂಡಿ ಎಂದರೆ ಮುದ್ರಿತ ಪತ್ರಿಕೆಗಳನ್ನು ನಾಶಪಡಿಸಿ ಹೊಸ ಪತ್ರಿಕೆಗಳನ್ನು ಮುದ್ರಿಸಬೇಕು. ಪ್ರಶ್ನೆ ಪೇಪರ್ ಸೋರಿಕೆಯಾಗುವ ಅಪಾಯವಿದೆ ಎಂದು ಸರ್ಕಾರ ಹೇಳಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X