ವಿಜಯನಗರ | ಹೆದ್ದಾರಿಯಲ್ಲಿ ದಾಖಲೆ ತಪಾಸಣೆ ವೇಳೆ ಅಪಘಾತ; ಚಾಲಕ ಸಾವು

Date:

Advertisements

ಬೆಂಗಳೂರು – ಕೊಪ್ಪಳ ಹೆದ್ದಾರಿಯಲ್ಲಿ ಆರ್‌ಟಿಓ ಅಧಿಕಾರಿಗೆ ವಾಹನ ದಾಖಲೆ ಪತ್ರ ತೋರಿಸಿ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದು ಟ್ರಕ್ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆಯ ಬಳಿಕ ಹಲವು ಚಾಲಕರು ಸೇರಿ ಹೆದ್ದಾರಿ ತಡೆದು ಪ್ರತಿಭಟಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಹೊರವಲಯದಲ್ಲಿ ಭಾನುವಾರ ಸಂಜೆ ನಡೆದಿದೆ.

ಆರ್‌ಟಿಒ ಅಧಿಕಾರಿಗಳಿಂದ ವಾಹನ ನಿಲ್ಲಿಸಲು ಸೂಚನೆ ಸಿಕ್ಕಿದ ತಕ್ಷಣ ಟ್ರಕ್ ಚಾಲಕ ತಮ್ಮ ಟ್ರಕ್ ನಿಲ್ಲಿಸಿ ದಾಖಲೆ ಪತ್ರ ತೋರಿಸಿ ವಾಪಸ್ ರಸ್ತೆ ದಾಟಲು ಯತ್ನಿಸಿದ್ದಾಗ ವೇಗವಾಗಿ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆಯಿತು. ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

‘ಆರ್‌ಟಿಒ ಅಧಿಕಾರಿಗಳು ವಸೂಲಿಗೆ ಇಳಿದಿದ್ದಾರೆ, ಅವರಿಗೆ ಲಂಚ ಕೊಟ್ಟು ಬರುವಾಗಲೇ ಈ ಅಪಘಾತ ಸಂಭವಿಸಿದೆ. ಹೀಗಾಗಿ ಈ ಅಪಘಾತಕ್ಕೆ ಆರ್‌ಟಿಒ ಅಧಿಕಾರಿಗಳೇ ಹೊಣೆ’ ಎಂದು ಆರೋಪಿಸಿದ ಟ್ರಕ್ ಚಾಲಕರು, ದಿಢೀರನೆ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ತಮ್ಮ ಟ್ರಕ್‌ಗಳನ್ನು ನಿಲ್ಲಿಸಿ ರಸ್ತೆ ತಡೆ ನಡೆಸಿದರು. ಇದರಿಂದ ಚಿತ್ರದುರ್ಗ-ಕೊಪ್ಪಳ ಹೆದ್ದಾರಿಯಲ್ಲಿ ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

Advertisements
WhatsApp Image 2024 08 26 at 5.58.21 PM

ಪ್ರತಿಭಟನಾಕಾರರ ಮನವೊಲಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು. ಆರ್‌ಟಿಓ ಅಧಿಕಾರಿಗಳು ತಪಾಸಣೆಯ ಹೆಸರಲ್ಲಿ ಮಾಮೂಲಿ ,ಲಂಚ ಕೇಳುತ್ತಾರೆ ಎಂದು ವಾಹನ ಚಾಲಕರು ಆರೋಪಿಸಿದರು.

ಮೃತಪಟ್ಟ ಚಾಲಕನ ವಿವರ ತಿಳಿದು ಬಂದಿಲ್ಲ. ಘಟನೆಯ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

“ಆರ್‌ಟಿಒ ಅಧಿಕಾರಿಗಳಿಂದ ವಾಹನ ತಪಾಸಣೆ ಸಹಜವಾಗಿ ನಡೆಯುತ್ತಿರುತ್ತದೆ. ಹೆದ್ದಾರಿ ದಾಟುವಾಗ ಎಚ್ಚರಿಕೆ ವಹಿಸಬೇಕು. ಮೃತ ಟ್ರಕ್ ಚಾಲಕನ ಗುರುತು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ. ಚಾಲಕ ತನ್ನ ದಾಖಲೆ ಪತ್ರಗಳನ್ನು ತೋರಿಸಿ ವಾಪಸ್ ಬರುವಾಗ ಈ ದುರಂತ ಸಂಭವಿಸಿದೆ. ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಎಸ್‌ಪಿ ಶ್ರೀಹರಿಬಾಬು ಬಿ.ಎಲ್. ಮಾಹಿತಿ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X